IND vs SA: ಬಲಿಷ್ಠ ಭಾರತ: ಟೀಮ್ ಇಂಡಿಯಾ ಪರ ಕಣಕ್ಕಿಳಿಯುವವರು ಯಾರು?
South Africa vs India: ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಆದರೆ ಇಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಉಪನಾಯಕ ರವೀಂದ್ರ ಜಡೇಜಾ ಕಣಕ್ಕಿಳಿಯುವುದು ಖಚಿತ. ಹೀಗಾಗಿ ಮಧ್ಯಮ ಕ್ರಮಾಂಕದ ಸ್ಥಾನಕ್ಕೂ ಪೈಪೋಟಿ ಕಂಡು ಬರಲಿದೆ.
ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ 2ನೇ ಟಿ20 ಪಂದ್ಯವು ಮಂಗಳವಾರ ನಡೆಯಲಿದೆ. ಗೆಬ್ಬೆಗಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಯಾರಿಗೆಲ್ಲಾ ಚಾನ್ಸ್ ಸಿಗಲಿದೆ ಎಂಬುದೇ ಕುತೂಹಲ. ಏಕೆಂದರೆ ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಅಹುತಿಯಾಗಿದೆ. ಹೀಗಾಗಿ 2ನೇ ಮತ್ತು 3ನೇ ಟಿ20 ಪಂದ್ಯಗಳ ಮೂಲಕ ಸರಣಿ ಗೆಲ್ಲಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಆದರೆ ಇತ್ತ ಭಾರತ ತಂಡದಲ್ಲಿ ಯುವ ಆಟಗಾರರ ದಂಡೇ ಇದ್ದು, ಹಾಗಾಗಿ ಯಾರನ್ನು ಕೈ ಬಿಟ್ಟು ಯಾರಿಗೆ ಅವಕಾಶ ನೀಡುವುದು ಎಂಬ ದೊಡ್ಡ ಸವಾಲು ಕೋಚ್ ರಾಹುಲ್ ದ್ರಾವಿಡ್ ಮುಂದಿದೆ.
ಇಲ್ಲಿ ಆರಂಭಿಕರ ಸ್ಥಾನಕ್ಕಾಗಿಯೇ ನಾಲ್ವರು ಆಟಗಾರರ ನಡುವೆ ಪೈಪೋಟಿಯಿದೆ. ಅಂದರೆ ಶುಭ್ಮನ್ ಗಿಲ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕ ಸ್ಥಾನಗಳ ಆಕಾಂಕ್ಷಿಗಳು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಆದರೆ ಇಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಉಪನಾಯಕ ರವೀಂದ್ರ ಜಡೇಜಾ ಕಣಕ್ಕಿಳಿಯುವುದು ಖಚಿತ. ಹೀಗಾಗಿ ಮಧ್ಯಮ ಕ್ರಮಾಂಕದ ಸ್ಥಾನಕ್ಕೂ ಪೈಪೋಟಿ ಕಂಡು ಬರಲಿದೆ.
ಹಾಗೆಯೇ ಸ್ಪಿನ್ನರ್ಗಳಾಗಿ ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಣೋಯ್ ನಡುವೆ ನೇರ ಪೈಪೋಟಿ ಇದೆ. ಇದರ ಜೊತೆಗೆ ವೇಗಿಗಳಾಗಿ ತಂಡದಲ್ಲಿ ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಹಾಗೂ ಮುಕೇಶ್ ಕುಮಾರ್ ಇದ್ದಾರೆ. ಅಂದರೆ ತಂಡದಲ್ಲಿರುವ ಪ್ರತಿಯೊಬ್ಬರೂ ಕೂಡ ಸಿಕ್ಕ ಅವಕಾಶಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.
ಹೀಗಾಗಿ ಬಲಿಷ್ಠ ಭಾರತ ತಂಡದಿಂದ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡುವುದು ರಾಹುಲ್ ದ್ರಾವಿಡ್ ಮುಂದಿರುವ ಅತೀ ದೊಡ್ಡ ಸವಾಲು ಎಂದರೆ ತಪ್ಪಾಗಲಾರದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ:
- ಇಶಾನ್ ಕಿಶನ್
- ಶುಭ್ಮನ್ ಗಿಲ್
- ಶ್ರೇಯಸ್ ಅಯ್ಯರ್
- ಸೂರ್ಯಕುಮಾರ್ ಯಾದವ್ (ನಾಯಕ)
- ರಿಂಕು ಸಿಂಗ್
- ಜಿತೇಶ್ ಶರ್ಮಾ
- ರವೀಂದ್ರ ಜಡೇಜಾ
- ರವಿ ಬಿಷ್ಣೋಯ್
- ಮುಕೇಶ್ ಕುಮಾರ್
- ಮೊಹಮ್ಮದ್ ಸಿರಾಜ್
- ಅರ್ಷದೀಪ್ ಸಿಂಗ್
ಇದನ್ನೂ ಓದಿ: RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದೀಪಕ್ ಚಹರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮುಕೇಶ್ ಕುಮಾರ್, ವಾಷಿಂಗ್ಟನ್ ಸುಂದರ್ , ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕುಲ್ದೀಪ್ ಯಾದವ್.