ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ (India vs South Africa) ಅಂದುಕೊಂಡಂತೆ ಉತ್ತಮವಾಗಿ ಆರಂಭವಾಗಲಿಲ್ಲ. ಡರ್ಬನ್ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಸೌತ್ ಆಫ್ರಿಕಾ – ಭಾರತ ನಡುವಣ ಮೊದಲ ಟಿ20 ಪಂದ್ಯವು ಒಂದೂ ಎಸೆತ ಕಾಣದೆ ಮಳೆಯ ಕಾರಣ ರದ್ದಾಯಿತು. ಇದೀಗ ಉಭಯ ತಂಡಗಳು ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್ನಲ್ಲಿ ಡಿಸೆಂಬರ್ 12 ಮಂಗಳವಾರದಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ದ್ವಿತೀಯ ಟಿ20 ಪಂದ್ಯ ಆಯೋಜಿಸಲಾಗಿದೆ.
ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್ ಪಿಚ್‌ನಲ್ಲಿ ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಿರ್ಧಾರ. ಏಕೆಂದರೆ ಆರಂಭಿಕ ಓವರ್‌ಗಳಲ್ಲಿ ವೇಗದ ಬೌಲರ್‌ಗಳು ಇಲ್ಲಿ ಯಶಸ್ಸು ಪಡೆಯುತ್ತಾರೆ. ಆಟ ಮುಂದುವರೆದಂತೆ, ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡಲು ಪ್ರಾರಂಭಿಸುತ್ತದೆ. ಪಿಚ್‌ನಲ್ಲಿ ಸ್ಪಿನ್ ಬೌಲಿಂಗ್ ಬಗ್ಗೆ ಮಾತನಾಡುವುದಾದರೆ, ಸ್ಪಿನ್ನರ್‌ಗಳಿಗೆ ಈ ಪಿಚ್ ಹೆಚ್ಚಿನ ಸಹಾಯ ಮಾಡುವುದಿಲ್ಲ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಪಿಚ್ ನಿಧಾನವಾಗುವುದರಿಂದ ಸ್ಪಿನ್ ಬೌಲರ್‌ಗಳು ಸಹ ಆಟಕ್ಕೆ ಬರಬಹುದು.
ಸ್ಯಾಂಟ್ ಜಾರ್ಜ್ ಪಾರ್ಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇದುವರೆಗೆ ಕೇವಲ 3 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ 2 ಪಂದ್ಯಗಳನ್ನು ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿದೆ ಮತ್ತು 1 ಪಂದ್ಯವನ್ನು ಚೇಸಿಂಗ್ ಮಾಡಿದ ತಂಡ ಗೆದ್ದಿದೆ. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡುವಾಗ ಸರಾಸರಿ ಸ್ಕೋರ್ 99 ರನ್.
IND vs PAK: ಪಾಕ್ ಎದುರು ಸೋತ ಭಾರತಕ್ಕೆ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣ..!
ಇನ್ನು ಮಂಗಳವಾರ ನಡೆಯಲಿರುವ ದ್ವಿತೀಯ ಟಿ20 ಪಂದ್ಯಕ್ಕೆ ಕೂಡ ಮಳೆ ಅಡ್ಡಿ ಪಡಿಸಲಿದೆ ಎಂದು ವರದಿ ಆಗಿದೆ. ಭಾರತ-ಆಫ್ರಿಕಾ ಎರಡನೇ ಟಿ20 ಪಂದ್ಯ ನಡೆಯುವ ದಿನ ಶೇ. 45ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಅಭಿಮಾನಿಗಳಿಗೆ ಹಾಗೂ ಆಟಗಾರರಿಗೆ ಸಂತಸದ ಸುದ್ದಿ ಸಿಕ್ಕಿಲ್ಲ. ಇನ್ನು ಕೆಲವೇ ತಿಂಗಳುಗಳಲ್ಲಿ ಟಿ20 ವಿಶ್ವಕಪ್ ಬರಲಿರುವುದರಿಂದ ಆಟಗಾರರಿಗೆ ಇದು ದೊಡ್ಡ ಹೊಡೆತವಾಗಿದೆ.
ಭಾರತ vs ದಕ್ಷಿಣ ಆಫ್ರಿಕಾ ದ್ವಿತೀಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ವೀಕ್ಷಿಸಬಹುದು. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ರಾತ್ರಿ 8:30ಕ್ಕೆ ಆರಂಭವಾಗಲಿದೆ. ಇದಕ್ಕೂ ಮುನ್ನ ಟಾಸ್ 8 ಗಂಟೆಗೆ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ