AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ-ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯ ಇಂದಿನಿಂದ ಶುರು

South Africa vs India, 2nd Test: ಸೌತ್ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಇದುವರೆಗೆ 9 ಟೆಸ್ಟ್ ಸರಣಿಗಳನ್ನು ಆಡಿದೆ. ಈ ವೇಳೆ ಒಮ್ಮೆಯೂ ಸರಣಿ ಗೆದ್ದಿಲ್ಲ ಎಂಬುದೇ ಅಚ್ಚರಿ. ಇದಾಗ್ಯೂ 2010-11ರಲ್ಲಿ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಂದು ಸರಣಿಯನ್ನು 1-1 ಅಂತರದಿಂದ ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಯಶಸ್ವಿಯಾಗಿತ್ತು.

IND vs SA: ಭಾರತ-ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯ ಇಂದಿನಿಂದ ಶುರು
South Africa vs India
TV9 Web
| Edited By: |

Updated on: Jan 03, 2024 | 6:40 AM

Share

ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ನಡುವಣ 2ನೇ ಟೆಸ್ಟ್ ಪಂದ್ಯವು ಇಂದಿನಿಂದ ಆರಂಭವಾಗಲಿದೆ. ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 2 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಜಯ ಸಾಧಿಸಿದೆ.

ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಸೌತ್ ಆಫ್ರಿಕಾ ತಂಡ ಇನಿಂಗ್ಸ್​ ಹಾಗೂ 32 ರನ್​ಗಳಿಂದ ಗೆದ್ದುಕೊಂಡಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದೀಗ ಸರಣಿಯನ್ನು ಡ್ರಾ ನಲ್ಲಿ ಅಂತ್ಯಗೊಳಿಸಬೇಕಿದ್ದರೆ 2ನೇ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲಲೇಬೇಕು.

ಅತ್ತ ಸೌತ್ ಆಫ್ರಿಕಾ ತಂಡವು 2ನೇ ಟೆಸ್ಟ್ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸರಣಿ 1-0 ಅಂತರದಿಂದ ಸರಣಿ ಗೆಲ್ಲಬಹುದು. ಹೀಗಾಗಿ ಇದು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎಂದರೆ ತಪ್ಪಾಗಲಾರದು.

ಸರಣಿ ಗೆಲ್ಲದ ಟೀಮ್ ಇಂಡಿಯಾ:

ಸೌತ್ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಇದುವರೆಗೆ 9 ಟೆಸ್ಟ್ ಸರಣಿಗಳನ್ನು ಆಡಿದೆ. ಈ ವೇಳೆ ಒಮ್ಮೆಯೂ ಸರಣಿ ಗೆದ್ದಿಲ್ಲ ಎಂಬುದೇ ಅಚ್ಚರಿ. ಇದಾಗ್ಯೂ 2010-11ರಲ್ಲಿ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಂದು ಸರಣಿಯನ್ನು 1-1 ಅಂತರದಿಂದ ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಈ ಸರಣಿಯೊಂದನ್ನು ಹೊರತುಪಡಿಸಿದರೆ ಉಳಿದ 8 ಸರಣಿಗಳಲ್ಲೂ ಭಾರತ ತಂಡ ಪರಾಜಯಗೊಂಡಿದೆ.

ರೋಹಿತ್ ಶರ್ಮಾಗೆ ದಾಖಲೆ ಬರೆಯುವ ಅವಕಾಶ:

ಕೇಪ್​ಟೌನ್​ನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸರಣಿ 1-1 ಅಂತರದಿಂದ ಡ್ರಾನಲ್ಲಿ ಅಂತ್ಯಗೊಳ್ಳಲಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಬಳಿಕ ಸೌತ್ ಆಫ್ರಿಕಾದಲ್ಲಿ ಸರಣಿ ಸೋಲದ ನಾಯಕ ಎಂಬ ಹೆಗ್ಗಳಿಕೆಗೂ ರೋಹಿತ್ ಶರ್ಮಾ ಪಾತ್ರರಾಗಬಹುದು.

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.

ಇದನ್ನೂ ಓದಿ: IPL 2024: RCB ತಂಡದ ನಾಯಕತ್ವದಲ್ಲಿ ಮತ್ತೆ ಬದಲಾವಣೆ..?

ಸೌತ್ ಆಫ್ರಿಕಾ ಟೆಸ್ಟ್​ ತಂಡ: ಡೀನ್ ಎಲ್ಗರ್ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ನಾಂಡ್ರೆ ಬರ್ಗರ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್ನೆ, ಟೋನಿ ಡಿ ಝೋರ್ಝಿ, , ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಕೀಗನ್ ಪೀಟರ್ಸನ್, ಝುಬೇರ್ ಹಂಝ.