Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd Test: ಕೇಪ್​ ಟೌನ್ ಟೆಸ್ಟ್​ಗು ಮುನ್ನ ಟೀಮ್ ಇಂಡಿಯಾಕ್ಕೆ ಶುರುವಾಯಿತು ಆತಂಕ

South Africa vs India 2nd Test: ದಕ್ಷಿಣ ಆಫ್ರಿಕಾದ ಇಬ್ಬರು ಆಟಗಾರರನ್ನು ಎದುರಿಸುವುದು ರೋಹಿತ್ ಪಡೆಗೆ ದೊಡ್ಡ ಸವಾಲಾಗಿದೆ. ಕೇಪ್ ಟೌನ್ ಟೆಸ್ಟ್‌ನಲ್ಲಿ ಭಾರತಕ್ಕೆ ಅಪಾಯಕಾರಿಯಾಗಬಲ್ಲ ಈ ಇಬ್ಬರು ಆಟಗಾರರೆಂದರೆ ಕಗಿಸೊ ರಬಾಡ ಮತ್ತು ಮಾರ್ಕೊ ಜಾನ್ಸನ್. ಈ ಇಬ್ಬರು ಆಟಗಾರರ ದಾಖಲೆ ಇಲ್ಲಿ ಉತ್ತಮವಾಗಿದೆ.

IND vs SA 2nd Test: ಕೇಪ್​ ಟೌನ್ ಟೆಸ್ಟ್​ಗು ಮುನ್ನ ಟೀಮ್ ಇಂಡಿಯಾಕ್ಕೆ ಶುರುವಾಯಿತು ಆತಂಕ
SA vs IND 2nd Test
Follow us
Vinay Bhat
|

Updated on: Dec 31, 2023 | 9:43 AM

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಭಾರತ ಕ್ರಿಕೆಟ್ ತಂಡ (India vs South Africa) ಇದೀಗ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಕೇಪ್ ಟೌನ್​ನ ನ್ಯೂಲಾಂಡ್ಸ್​ನಲ್ಲಿ ಜನವರಿ 3 ರಿಂದ ಎರಡನೇ ಟೆಸ್ಟ್ ಶುರುವಾಗಲಿದೆ. ಆದರೆ, ಈ ಪಂದ್ಯ ಆರಂಭಕ್ಕು ಮುನ್ನವೇ ಟೀಮ್ ಇಂಡಿಯಾಕ್ಕೆ ಆತಂಕ ಶುರುವಾಗಿದೆ. ದಕ್ಷಿಣ ಆಫ್ರಿಕಾದ ಇಬ್ಬರು ಆಟಗಾರರನ್ನು ಎದುರಿಸುವುದು ರೋಹಿತ್ ಪಡೆಗೆ ದೊಡ್ಡ ಸವಾಲಾಗಿದೆ. ಕೇಪ್ ಟೌನ್ ಟೆಸ್ಟ್‌ನಲ್ಲಿ ಭಾರತಕ್ಕೆ ಅಪಾಯಕಾರಿಯಾಗಬಲ್ಲ ಈ ಇಬ್ಬರು ಆಟಗಾರರೆಂದರೆ ಕಗಿಸೊ ರಬಾಡ ಮತ್ತು ಮಾರ್ಕೊ ಜಾನ್ಸನ್. ಈ ಇಬ್ಬರು ಆಟಗಾರರ ದಾಖಲೆ ಇಲ್ಲಿ ಉತ್ತಮವಾಗಿದೆ.

ಕೇಪ್ ಟೌನ್‌ನಲ್ಲಿ ಭಾರತದ ವಿರುದ್ಧ ರಬಾಡ ಮತ್ತು ಜಾನ್ಸನ್ ಮಾರಕ ಪ್ರದರ್ಶನ ತೋರಿದ್ದಾರೆ. ಅಷ್ಟೇ ಅಲ್ಲ ಭಾರತ ತಂಡದಲ್ಲಿ ಈ ಇಬ್ಬರು ಆಟಗಾರರ ಪ್ರಾಬಲ್ಯ ಪ್ರಸಕ್ತ ಸರಣಿಯ ಮೊದಲ ಟೆಸ್ಟ್​ನಲ್ಲೂ ಕಂಡು ಬಂದಿತ್ತು. ಭಾರತ ವಿರುದ್ಧದ ಸೆಂಚುರಿಯನ್ ಟೆಸ್ಟ್‌ನಲ್ಲಿ ರಬಾಡ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 7 ವಿಕೆಟ್ ಪಡೆದರು. ಮಾರ್ಕೊ ಜಾನ್ಸನ್ 4 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಅಷ್ಟೇ ಅಲ್ಲ, ಬ್ಯಾಟ್‌ನಲ್ಲೂ ಜಾನ್ಸನ್ ಉತ್ತಮ ಕೊಡುಗೆ ನೀಡಿದ್ದರು.

ಏಷ್ಯಾಕಪ್, ವಿಶ್ವಕಪ್​ನಿಂದ ಔಟ್: ಇದೀಗ ನಾಯಕನಾಗಿ ಎಂಟ್ರಿ..!

ಇದನ್ನೂ ಓದಿ
Image
ಆಫ್ರಿಕಾದಲ್ಲಿ ಮಗಳ ಹುಟ್ಟುಹಬ್ಬವನ್ನು ಭರ್ಜರಿ ಆಗಿ ಆಚರಿಸಿದ ರೋಹಿತ್ ಶರ್ಮಾ
Image
ಭಾರತ-ಆಸೀಸ್ ODI ಪಂದ್ಯದಲ್ಲಿ ಭಾರೀ ಅವಘಡ: ಸ್ನೇಹ್ ರಾಣಗೆ ಮೈದಾನದಲ್ಲೇ ಅನಾ
Image
IPL 2024: RCBನ ನಂಬಿ ಕೆಟ್ಟ ಯುವ ಸ್ಪೋಟಕ ಬ್ಯಾಟರ್..!
Image
Virat Kohli: ವಿರಾಟ್ ಕೊಹ್ಲಿ ಅಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

ಕಗಿಸೊ ರಬಾಡ ಅವರು ಈ ಹಿಂದೆ ಕೇಪ್ ಟೌನ್‌ನಲ್ಲಿ ಭಾರತದ ವಿರುದ್ಧ 2 ಟೆಸ್ಟ್‌ಗಳನ್ನು ಆಡಿದ್ದಾರೆ, ಇದರಲ್ಲಿ ಅವರು 16.75 ಸರಾಸರಿಯಲ್ಲಿ 12 ವಿಕೆಟ್‌ಗಳನ್ನು ಪಡೆದಿದ್ದಾರೆ. ರಬಾಡ ಅವರು 2018 ರಲ್ಲಿ ಭಾರತದ ವಿರುದ್ಧ ತಮ್ಮ ಮೊದಲ ಟೆಸ್ಟ್ ಆಡಿದರು, ಇದರಲ್ಲಿ ಅವರು 5 ವಿಕೆಟ್​ಗಳನ್ನು ಪಡೆದರು. 2022 ರಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇವರು 7 ವಿಕೆಟ್ ಪಡೆದರು. ಈ ಬಾರಿ ರಬಾಡ ನ್ಯೂಲಾಂಡ್ಸ್​ನಲ್ಲಿ ಮೂರನೇ ಬಾರಿ ಟೀಮ್ ಇಂಡಿಯಾಕ್ಕೆ ಮಾರಕವಾಗಬಹುದು. ಅಲ್ಲದೆ, ಪ್ರಸಕ್ತ ಸರಣಿಯ ಮೊದಲ ಟೆಸ್ಟ್‌ನಲ್ಲಿ ಅವರು ಬೌಲಿಂಗ್ ಮಾಡಿದ ರೀತಿಯನ್ನು ನೋಡಿದ ನಂತರ, ಕೇಪ್‌ಟೌನ್‌ನಲ್ಲಿ ಅಪಾಯಕಾರಿ ಆಗುವುದು ಖಚಿತ.

ರಬಾಡ ಹೊರತಾಗಿ, ನ್ಯೂಲಾಂಡ್ಸ್​ನಲ್ಲಿ ಭಾರತಕ್ಕೆ ಮಾರ್ಕೊ ಜಾನ್ಸನ್ ಭಯ ಕೂಡ ಇದೆ. ಇಲ್ಲಿ ಭಾರತ ವಿರುದ್ಧದ ಕೊನೆಯ ಟೆಸ್ಟ್‌ನಲ್ಲಿ ಅವರ ಸ್ಫೋಟಕ ಪ್ರದರ್ಶನವೇ ಇದಕ್ಕೆ ದೊಡ್ಡ ಕಾರಣ. 2022 ರಲ್ಲಿ ಕೇಪ್ ಟೌನ್ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ರಬಾಡ 7 ವಿಕೆಟ್ ಪಡೆದಿದ್ದರೆ, ಜಾನ್ಸನ್ ಕೇವಲ 13 ಸರಾಸರಿಯಲ್ಲಿ 7 ವಿಕೆಟ್‌ಗಳನ್ನು ಪಡೆದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ