AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?: ಇಲ್ಲಿದೆ ಮಾಹಿತಿ

When and Where South Africa vs India 2nd Test: ಸೆಂಚುರಿಯನ್​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡು ಭಾರತ ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದು ಟೀಮ್ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಹಾಗಾದರೆ, ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?. ಇಲ್ಲಿದೆ ನೋಡಿ ಮಾಹಿತಿ

ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?: ಇಲ್ಲಿದೆ ಮಾಹಿತಿ
IND vs SA Second Test
Vinay Bhat
|

Updated on: Dec 29, 2023 | 11:47 AM

Share

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್‌ನಲ್ಲಿ ಭಾರತ (India vs South Africa) ಇನಿಂಗ್ಸ್ ಮತ್ತು 32 ರನ್‌ಗಳ ಸೋಲು ಅನುಭವಿಸಿತು. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಮೂರು ದಿನಗಳ ಒಳಗೆ ಮುಕ್ತಾಯಗೊಂಡ ಪಂದ್ಯದಲ್ಲಿ, ಭಾರತೀಯ ಬ್ಯಾಟರ್‌ಗಳು ಎರಡೂ ಇನ್ನಿಂಗ್ಸ್‌ಗಳಲ್ಲಿ ಕಳಪೆ ಪ್ರದರ್ಶನ ತೋರಿದರು. ಪರಿಣಾಮ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳ ಟೆಸ್ಟ್​ನಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್ ಮೇಲೆ ಕಣ್ಣಿಟ್ಟಿದೆ. ಹಾಗಾದರೆ, ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?. ಇಲ್ಲಿದೆ ನೋಡಿ ಮಾಹಿತಿ

ಭಾರತ- ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಯಾವಾಗ?

ಜನವರಿ 3, 2024 ರಿಂದ ಜ. 7 ವರೆಗೆ ಭಾರತ vs ದಕ್ಷಿಣ ಆಫ್ರಿಕಾ ದ್ವಿತೀಯ ಟೆಸ್ಟ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ
Image
ಭಾರತದ್ದು ಕಳಪೆ ಬ್ಯಾಟಿಂಗ್ ಎಂದವರ ಮೈಚಳಿ ಬಿಡಿಸಿದ ರೋಹಿತ್: ಏನಂದ್ರು ನೋಡಿ
Image
WTC ಪಾಯಿಂಟ್ಸ್ ಟೇಬಲ್​ನಲ್ಲಿ ಬಾಂಗ್ಲಾದೇಶಕ್ಕಿಂತ ಕಳಪೆ ಸ್ಥಿತಿಯಲ್ಲಿ ಭಾರತ
Image
7ನೇ ಬಾರಿಗೆ ಒಂದು ವರ್ಷದಲ್ಲಿ 2,000 ರನ್: ವಿರಾಟ್ ಕೊಹ್ಲಿಯಿಂದ ವಿಶ್ವದಾಖಲೆ
Image
ನಿಧಾನಗತಿಯ ನಾಯಕತ್ವ, ಕಳಪೆ ಬ್ಯಾಟಿಂಗ್- ಭಾರತ ಹೀನಾಯ ಸೋಲುಂಡಿದ್ದು ಹೀಗೆ

ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಕೇಪ್ ಟೌನ್​ನ ನ್ಯೂಲಾಂಡ್ಸ್​ನಲ್ಲಿ ನಡೆಯಲಿದೆ.

ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಟೆಸ್ಟ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ.

ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ದ್ವಿತೀಯ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

IND vs SA 1st Test: ಭಾರತಕ್ಕೆ ಆಘಾತಕಾರಿ ಸೋಲು: ಇತಿಹಾಸ ಸೃಷ್ಟಿಸುವ ಕನಸು ನುಚ್ಚುನೂರು

ಟೆಸ್ಟ್ ಸರಣಿಗೆ ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ, ಕೆಎಸ್ ಭರತ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್.

ದ. ಆಫ್ರಿಕಾ ಟೆಸ್ಟ್ ತಂಡ: ಡೇವಿಡ್ ಬೆಡಿಂಗ್‌ಹ್ಯಾಮ್, ಆಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್ (ನಾಯಕ), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರೆನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?