IND vs SA: ಟಾಸ್ ಗೆದ್ದ ಸೌತ್ ಆಫ್ರಿಕಾ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

| Updated By: ಝಾಹಿರ್ ಯೂಸುಫ್

Updated on: Dec 14, 2023 | 8:07 PM

South Africa vs India: ಈ ಪಂದ್ಯವು ಉಭಯ ತಂಡಗಳ ಪಾಲಿಗೂ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಮಳೆಯ ಕಾರಣ ರದ್ದಾಗಿತ್ತು. ಇನ್ನು 2ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಬಹುದು.

IND vs SA: ಟಾಸ್ ಗೆದ್ದ ಸೌತ್ ಆಫ್ರಿಕಾ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
India vs South Africa
Follow us on

ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ-ಭಾರತ (India vs South Africa) ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಈ ಪಂದ್ಯವು ಉಭಯ ತಂಡಗಳ ಪಾಲಿಗೂ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಮಳೆಯ ಕಾರಣ ರದ್ದಾಗಿತ್ತು. ಇನ್ನು 2ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಬಹುದು.

ಆದರೆ ಮತ್ತೊಂದೆಡೆ ಈ ಪಂದ್ಯವನ್ನು ಗೆದ್ದುಕೊಂಡರೆ ಮಾತ್ರ ಸೌತ್ ಆಫ್ರಿಕಾಗೆ ಸರಣಿ ಗೆಲ್ಲಬಹುದು. ಹೀಗಾಗಿ ಈ ಪಂದ್ಯವನ್ನು ಗೆಲ್ಲಲು ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ಕಂಡು ಬರುವ ನಿರೀಕ್ಷೆಯಿದೆ. ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿಯುವ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ರೀಝ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್​ಝ್ಕೆ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೊನೊವನ್ ಫೆರೆರಾ, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಲಿಜಾದ್ ವಿಲಿಯಮ್ಸ್, ತಬ್ರೈಝ್ ಶಮ್ಸಿ, ನಾಂಡ್ರೆ ಬರ್ಗರ್.

ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್.

ಸೌತ್ ಆಫ್ರಿಕಾ ಟಿ20 ತಂಡ: ರೀಝಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಝ್​ಕ್, ಟ್ರಿಸ್ಟಾನ್ ಸ್ಟಬ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಝಿ, ನಾಂಡ್ರೆ ಬರ್ಗರ್, ತಬ್ರೈಝ್ ಶಮ್ಸಿ, ಡೊನ್ಕೊ ಜಾರ್ಟನ್ಸ್, ಡೊನ್ಕೊ ಜಾರ್ಟನ್ಸ್ ಫೆರೇರಾ, ಲಿಜಾಡ್ ವಿಲಿಯಮ್ಸ್.

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದೀಪಕ್ ಚಹರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮುಕೇಶ್ ಕುಮಾರ್, ವಾಷಿಂಗ್ಟನ್ ಸುಂದರ್ , ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕುಲ್ದೀಪ್ ಯಾದವ್.