ಭಾರತ-ಸೌತ್ ಆಫ್ರಿಕಾ (South Africa vs India) ನಡುವಣ 3ನೇ ಟಿ20 ಪಂದ್ಯ ಗುರುವಾರ (ಡಿ.14) ನಡೆಯಲಿದೆ. ಜೋಹಾನ್ಸ್ಬರ್ಗ್ನ ವಾಂಡರ್ಸ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಮಳೆಗೆ ಅಹುತಿಯಾಗಿತ್ತು. ಇನ್ನು 2ನೇ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಬಹುದು.
ಅತ್ತ ಸರಣಿ ಗೆಲ್ಲಬೇಕಿದ್ದರೆ ಸೌತ್ ಆಫ್ರಿಕಾ ಈ ಪಂದ್ಯದಲ್ಲಿ ಜಯಿಸಲೇಬೇಕು. ಹೀಗಾಗಿ ಈ ಮ್ಯಾಚ್ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇದಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಏಕೆಂದರೆ ಎರಡನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಕಣಕ್ಕಿಳಿದಿರಲಿಲ್ಲ. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ 2ನೇ ಮ್ಯಾಚ್ನಲ್ಲಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದ ಜಿತೇಶ್ ಶರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.
ಇಲ್ಲಿ ಆರಂಭಿಕನಾಗಿ ಯಶಸ್ವಿ ಜೈಸ್ವಾಲ್ ಬದಲಿಗೆ ಇಶಾನ್ ಕಿಶನ್ ಅವರನ್ನು ಕಣಕ್ಕಿಳಿಸಿದರೆ ವಿಕೆಟ್ ಕೀಪೀಂಗ್ ಕೂಡ ಮಾಡಿಸಬಹುದು. ಹೀಗಾಗಿ ಈ ಎರಡು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ 2ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ಇನ್ನು ಕಳೆದ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಜಯ ಸಾಧಿಸಿರುವ ಕಾರಣ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಅದರಂತೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…
ಭಾರತ ಸಂಭಾವ್ಯ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮುಕೇಶ್ ಕುಮಾರ್.
ಇದನ್ನೂ ಓದಿ: IPL 2024: ಮೊಹಮ್ಮದ್ ಶಮಿಗೆ ತೆರೆಮರೆಯಲ್ಲೇ ಬಿಗ್ ಆಫರ್..!
ಸೌತ್ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ 11: ಮ್ಯಾಥ್ಯೂ ಬ್ರೀಟ್ಝ್ಕೆ, ರೀಝ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೇಝ್ ಶಮ್ಸಿ.
ಸೌತ್ ಆಫ್ರಿಕಾ ಟಿ20 ತಂಡ: ರೀಝಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಝ್ಕ್, ಟ್ರಿಸ್ಟಾನ್ ಸ್ಟಬ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಝಿ, ನಾಂಡ್ರೆ ಬರ್ಗರ್, ತಬ್ರೈಝ್ ಶಮ್ಸಿ, ಡೊನ್ಕೊ ಜಾರ್ಟನ್ಸ್, ಡೊನ್ಕೊ ಜಾರ್ಟನ್ಸ್ ಫೆರೇರಾ, ಲಿಜಾಡ್ ವಿಲಿಯಮ್ಸ್.
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದೀಪಕ್ ಚಹರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮುಕೇಶ್ ಕುಮಾರ್, ವಾಷಿಂಗ್ಟನ್ ಸುಂದರ್ , ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕುಲ್ದೀಪ್ ಯಾದವ್.