AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ರಬಾಡ ರಾಕಿಂಗ್ ನಡುವೆ ಕಿಂಗ್ ಕೊಹ್ಲಿ ಮಿಂಚಿಂಗ್: ಮೊದಲ ದಿನ ದಕ್ಷಿಣ ಆಫ್ರಿಕಾ ಮೇಲುಗೈ

South Africa vs India, 3rd Test: ಮೊದಲ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್​ ಕಳೆದುಕೊಂಡು 17 ರನ್​ಗಳಿಸಿದೆ. ಕ್ರೀಸ್​ನಲ್ಲಿ ನಾಯಕ ಡೀನ್ ಎಲ್ಗರ್ ಹಾಗೂ ಕೇಶವ್ ಮಹಾರಾಜ್ ಬ್ಯಾಟ್ ಮಾಡುತ್ತಿದ್ದಾರೆ.

IND vs SA: ರಬಾಡ ರಾಕಿಂಗ್ ನಡುವೆ ಕಿಂಗ್ ಕೊಹ್ಲಿ ಮಿಂಚಿಂಗ್: ಮೊದಲ ದಿನ ದಕ್ಷಿಣ ಆಫ್ರಿಕಾ ಮೇಲುಗೈ
South Africa vs India, 3rd Test
TV9 Web
| Edited By: |

Updated on: Jan 11, 2022 | 10:45 PM

Share

ಕೇಪ್​ ಟೌನ್​ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಣ ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದ ಮೊದಲ ದಿನದಾಟ ಸೌತ್ ಆಫ್ರಿಕಾ ಮೇಲುಗೈ ಸಾಧಿಸಿದೆ. ಮೊದಲ ದಿನದಾಟದಲ್ಲೇ ಟೀಮ್ ಇಂಡಿಯಾವನ್ನು ಆಲೌಟ್ ಮಾಡಿರುವ ಹರಿಣರು, ಇದೀಗ ಮೊದಲ ಇನಿಂಗ್ಸ್ ಆರಂಭಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 33 ಆಗುವಷ್ಟರಲ್ಲಿ ಆರಂಭಿಕರಾದ ಕೆಎಲ್ ರಾಹುಲ್ (12) ಹಾಗೂ ಮಯಾಂಕ್ ಅಗರ್ವಾಲ್ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರಾ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

3ನೇ ವಿಕೆಟ್​ಗೆ 62 ರನ್​ಗಳ ಜೊತೆಯಾಟವಾಡಿದ ಈ ಜೋಡಿಯನ್ನು ಅಂತಿಮವಾಗಿ ಮಾರ್ಕೊ ಜಾನ್ಸನ್ ಯಶಸ್ವಿಯಾದರು. ಅದರಂತೆ 43 ರನ್​ ಕಲೆಹಾಕಿ ಪೂಜಾರಾ ಹೊರನಡೆದರು. ಇದರ ಬೆನ್ನಲ್ಲೇ ಅಜಿಂಕ್ಯ ರಹಾನೆ (9) ವಿಕೆಟ್ ಒಪ್ಪಿಸಿದರು. ಇನ್ನು ರಿಷಭ್ ಪಂತ್ ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತರೂ 27 ರನ್​ಗಳಿಸಿ ಹೊರನಡೆದರು.

ಆದರೆ ಮತ್ತೊಂದೆಡೆ ಏಕಾಂಗಿಯಾಗಿ ಇನಿಂಗ್ಸ್ ಕಟ್ಟಿದ ವಿರಾಟ್ ಕೊಹ್ಲಿ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಂತೆ 158 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದರು. ಆದರೆ ಮತ್ತೊಂದೆಡೆ ಕೊಹ್ಲಿಗೆ ಉತ್ತಮ ಸಾಥ್ ದೊರೆತಿರಲಿಲ್ಲ. ಅಶ್ವಿನ್ (2), ಶಾರ್ದೂಲ್ ಠಾಕೂರ್ (12), ಬುಮ್ರಾ (0) ಬಂದ ವೇಗದಲ್ಲೇ ವಿಕೆಟ್ ಕೈಚೆಲ್ಲಿದರು.

ಈ ಹಂತದಲ್ಲಿ ತಂಡದ ಸ್ಕೋರ್​ ಗತಿಯನ್ನು ಹೆಚ್ಚಿಸುವತ್ತ ಗಮನ ಹರಿಸಿದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಗೇರ್ ಬದಲಿಸಿದರು. ಇತ್ತ ಶತಕ ಬಾರಿಸುವ ನಿರೀಕ್ಷಯೆನ್ನು ಹುಟ್ಟುಹಾಕಿದರೂ, ಅಂತಿಮ ಹಂತದಲ್ಲಿ ಟೀಮ್ ಇಂಡಿಯಾ ಆಟಗಾರರು ಬ್ಯಾಕ್ ಟು ಬ್ಯಾಕ್ ವಿಕೆಟ್ ಕೈಚೆಲ್ಲಿದ ಪರಿಣಾಮ ಕೊಹ್ಲಿ ಕೂಡ ಬಿರುಸಿನ ಆಟಕ್ಕೆ ಮುಂದಾದರು. ಇದರಿಂದಾಗಿ 79 ರನ್​ಗಳಿಸಿ 9ನೇ ವಿಕೆಟ್ ಆಗಿ ವಿರಾಟ್ ಕೊಹ್ಲಿ ಹಿಂತಿರುಗಿದರು. ಅಂತಿಮವಾಗಿ ಟೀಮ್ ಇಂಡಿಯಾ 223 ರನ್​ಗೆ ಸರ್ವಪತನ ಕಂಡಿತು. ದಕ್ಷಿಣ ಆಫ್ರಿಕಾ ಪರ ರಬಾಡ 4 ವಿಕೆಟ್ ಕಬಳಿಸಿದರೆ, ಮಾರ್ಕೊ ಜಾನ್ಸನ್ 3 ವಿಕೆಟ್ ಪಡೆದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್​ ಕಳೆದುಕೊಂಡು 17 ರನ್​ಗಳಿಸಿದೆ. ಕ್ರೀಸ್​ನಲ್ಲಿ ನಾಯಕ ಡೀನ್ ಎಲ್ಗರ್ ಹಾಗೂ ಕೇಶವ್ ಮಹಾರಾಜ್ ಬ್ಯಾಟ್ ಮಾಡುತ್ತಿದ್ದಾರೆ. ಟೀಮ್ ಇಂಡಿಯಾ ಪರ ಒಂದು ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ವಿಕೆಟ್ ಖಾತೆ ತೆರೆದಿದ್ದಾರೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(South Africa vs India, 3rd Test 1st Day Highlights)

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!