ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಡಿಸೆಂಬರ್ 21 ರಂದು ಅಂದರೆ ಗುರುವಾರ ನಡೆಯಲಿದೆ. ಈ ಸರಣಿಯಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿವೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಪಂದ್ಯದಲ್ಲಿ ಗೆದ್ದ ತಂಡ ಟ್ರೋಫಿಯನ್ನು ಎತ್ತಿಹಿಡಿಯಲ್ಲಿದೆ. ಸರಣಿಯ ಮೊದಲ ಪಂದ್ಯವನ್ನು ಭಾರತ ಗೆದ್ದಿದ್ದರೆ, ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪ್ರಬಲ ಪುನರಾಗಮನ ಮಾಡಿ ಭಾರತ ತಂಡವನ್ನು ಸೋಲಿಸಿತು. ಹೀಗಾಗಿ ಮೂರನೇ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗಲಿದೆ. ಆದರೆ ಭಾರತದ ದೃಷ್ಟಿಯಿಂದ ನೋಡುವುದಾದರೆ, ಈ ಪಂದ್ಯ ರಾಹುಲ್ (KL Rahul) ಪಡೆಗೆ ಬಹಳ ಮುಖ್ಯವಾಗಿದೆ. ಏಕೆಂದರೆ ಆಫ್ರಿಕಾ ನೆಲದಲ್ಲಿ ಭಾರತ ಏಕದಿನ ಸರಣಿ ಗೆದ್ದು ಬಹಳ ವರ್ಷಗಳೇ ಕಳೆದಿವೆ. ಹೀಗಾಗಿ ಈ ಸರಣಿಯನ್ನು ಭಾರತ ಗೆದ್ದರೆ, ಸರಣಿ ಗೆಲುವಿನ ಬರ ನೀಗಲಿದೆ.
ಡಿಸೆಂಬರ್ 21 ಮಂಗಳವಾರದಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಪಾರ್ಲ್ ನಗರದ ಬೌಲ್ಯಾಂಡ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಆರಂಭವಾಗಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ.
ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ-ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಆಕಾಶ್ ದೀಪ್.
ದಕ್ಷಿಣ ಆಫ್ರಿಕಾ ಏಕದಿನ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಟೋನಿ ಡಿ ಜೊರ್ಜಿ, ನಾಂಡ್ರೆ ಬರ್ಗರ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್, ಲಿಜಾದ್ ವಿಲಿಯಮ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:47 pm, Wed, 20 December 23