IND vs SA 2nd ODI: ಭಾರತ-ದ. ಆಫ್ರಿಕಾ ಎರಡನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?
When and Where South Africa vs India Second ODI: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್ಗಳ ಅಮೋಘ ಗೆಲುವು ಕಂಡು 1-0 ಮುನ್ನಡೆ ಪಡೆದುಕೊಂಡಿರುವ ಭಾರತ ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಪಂದ್ಯ ಗೆದ್ದರೆ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಳ್ಳಲಿದೆ. ಹಾಗಾದರೆ, ಎರಡನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ?.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಸಮಬಲಗೊಳಿಸಿದ್ದ ಭಾರತ (India vs South Africa) ತಂಡ ಇದೀಗ ಏಕದಿನ ಸರಣಿಯನ್ನು ಭರ್ಜರಿ ಆಗಿ ಆರಂಭಿಸಿದೆ. ಭಾನುವಾರ ಜೋಹಾನ್ಸ್‌ಬರ್ಗ್‌ನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ಅರ್ಶ್ದೀಪ್ ಸಿಂಗ್-ಆವೇಶ್ ಖಾನ್ ಬೌಲಿಂಗ್ ಬಿರುಗಾಳಗೆ ತತ್ತರಿಸಿದ ಆಫ್ರಿಕಾ 116 ರನ್ಗಳಿಗೆ ಆಲೌಟ್ ಆದರೆ, ಭಾರತ 16.4 ಓವರ್ಗಳಲ್ಲಿ ಈ ಟಾರ್ಗೆಟ್ ಬೆನ್ನಟ್ಟಿತು. ಕೆಎಲ್ ರಾಹುಲ್ ಪಡೆ 8 ವಿಕೆಟ್ಗಳ ಅಮೋಘ ಗೆಲುವು ಕಂಡು 1-0 ಮುನ್ನಡೆ ಪಡೆದುಕೊಂಡಿದೆ. ಇನ್ನೊಂದು ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಹಾಗಾದರೆ, ಎರಡನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ?.
ಭಾರತ- ದಕ್ಷಿಣ ಆಫ್ರಿಕಾ ದ್ವಿತೀಯ ಏಕದಿನ ಪಂದ್ಯ ಯಾವಾಗ?
ಡಿಸೆಂಬರ್ 19 ಮಂಗಳವಾರದಂದು ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಏಕದಿನ ಪಂದ್ಯ ನಡೆಯಲಿದೆ.
ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಏಕದಿನ ಪಂದ್ಯ ಎಲ್ಲಿ ಆಡಲಾಗುತ್ತದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡನೇ ಏಕದಿನ ಪಂದ್ಯ ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್ನಲ್ಲಿ ನಡೆಯಲಿದೆ.
U-19 Asia Cup: ಚೊಚ್ಚಲ ಅಂಡರ್-19 ಏಷ್ಯಾಕಪ್ ಗೆದ್ದ ಬಾಂಗ್ಲಾ; ಯುಎಇಗೆ ನಿರಾಸೆ
ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಏಕದಿನ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ.
ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಹಾಗೂ ದಕ್ಷಿಣ ಆಫ್ರಿಕಾ ಎರಡನೇ ಏಕದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಆರಂಭವಾಗಲಿದೆ.
ಏಕದಿನ ಪಂದ್ಯಕ್ಕೆ ಉಭಯ ತಂಡಗಳು:
ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ-ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಆಕಾಶ್ ದೀಪ್.
ದಕ್ಷಿಣ ಆಫ್ರಿಕಾ ಏಕದಿನ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಟೋನಿ ಡಿ ಜೊರ್ಜಿ, ನಾಂಡ್ರೆ ಬರ್ಗರ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್, ಲಿಜಾದ್ ವಿಲಿಯಮ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:03 am, Mon, 18 December 23