IND vs SA: ಟಿ20 ಸರಣಿಯ ಸಮಯ ಬದಲಾವಣೆ; ಈಗ ಪಂದ್ಯಗಳು ಎಷ್ಟು ಗಂಟೆಗೆ ಆರಂಭವಾಗಲಿವೆ ಗೊತ್ತಾ?

|

Updated on: Dec 09, 2023 | 7:51 AM

South Africa Vs India T20I Series: ಈ ಮೊದಲಿನ ವೇಳಾಪಟ್ಟಿಯ ಪ್ರಕಾರ ಟಿ20 ಸರಣಿಯ ಮೂರು ಪಂದ್ಯಗಳನ್ನು ಭಾರತೀಯ ಕಾಲಮಾನ ರಾತ್ರಿ 9.30ಕ್ಕೆ ಆರಂಭವಾಗಬೇಕಿತ್ತು. ಆದರೆ ಬಿಸಿಸಿಐನ ಇತ್ತೀಚಿನ ಮಾಹಿತಿ ಪ್ರಕಾರ ಈ ಪಂದ್ಯಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅದರಂತೆ ಈಗ ಈ ಮೂರು ಟಿ20 ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಆರಂಭವಾಗಲಿವೆ.

IND vs SA: ಟಿ20 ಸರಣಿಯ ಸಮಯ ಬದಲಾವಣೆ; ಈಗ ಪಂದ್ಯಗಳು ಎಷ್ಟು ಗಂಟೆಗೆ ಆರಂಭವಾಗಲಿವೆ ಗೊತ್ತಾ?
ಭಾರತ- ಆಫ್ರಿಕಾ
Follow us on

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವೆ ಡಿಸೆಂಬರ್ 10 ರಿಂದ ಮೂರು ಪಂದ್ಯಗಳ ಟಿ20 ಸರಣಿ (T20I Series) ನಡೆಯಲಿದೆ. ಚುಟುಕು ಮಾದರಿಯ ಸರಣಿಯೊಂದಿಗೆ ಹರಿಣಗಳ ನಾಡಲ್ಲಿ ಭಾರತ 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿಯನ್ನೂ ಆಡಲಿದೆ. ಇನ್ನು ಟಿ20 ಸರಣಿಯ ವಿಚಾರಕ್ಕೆ ಬರುವುದಾದರೆ.. ಮುಂದಿನ ವರ್ಷ ನಡೆಯಲಿರುವ ಐಸಿಸಿ (ICC) ಟಿ20 ವಿಶ್ವಕಪ್‌ಗೂ ಮುನ್ನ ಈ ಸರಣಿ ಭಾರತ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಕಿಂಗ್ಸ್‌ಮೀಡ್‌ನ ಡರ್ಬನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದೀಗ ಸರಣಿ ಆರಂಭಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಇದ್ದು, ಪಂದ್ಯಗಳು ಆರಂಭವಾಗುವ ಸಮಯದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದೆ.

ಸಮಯದಲ್ಲಿ ಬದಲಾವಣೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ಟಿ20 ಸರಣಿಯ ಪಂದ್ಯಗಳ ಸಮಯಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ. ಅದಕ್ಕೆ ಕಾರಣ ಟಿ20 ಪಂದ್ಯಗಳ ಆರಂಭದ ಸಮಯದಲ್ಲಿ ಬದಲಾವಣೆಯಾಗಿರುವುದು. ವಾಸ್ತವವಾಗಿ ಈ ಮೊದಲಿನ ವೇಳಾಪಟ್ಟಿಯ ಪ್ರಕಾರ ಟಿ20 ಸರಣಿಯ ಮೂರು ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 9.30ಕ್ಕೆ ಆರಂಭವಾಗಬೇಕಿತ್ತು. ಆದರೆ ಬಿಸಿಸಿಐನ ಇತ್ತೀಚಿನ ಮಾಹಿತಿ ಪ್ರಕಾರ ಈ ಪಂದ್ಯಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅದರಂತೆ ಈಗ ಈ ಮೂರು ಟಿ20 ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಆರಂಭವಾಗಲಿವೆ.

IND vs SA: ಆಫ್ರಿಕಾ ತಂಡಕ್ಕೆ ಆಘಾತ; ಭಾರತ ವಿರುದ್ಧದ ಟಿ20 ಸರಣಿಯಿಂದ ಸ್ಟಾರ್ ವೇಗಿ ಔಟ್..!

ಏಕದಿನ- ಟೆಸ್ಟ್ ಪಂದ್ಯಗಳ ಸಮಯ ಹೀಗಿದೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಬಳಿಕ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಏಕದಿನ ಸರಣಿಯ ಮೊದಲ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 4.30ಕ್ಕೆ ಆರಂಭವಾಗಲಿವೆ. ಉಭಯ ತಂಡಗಳ ನಡುವೆ ಎರಡು ಟೆಸ್ಟ್ ಪಂದ್ಯಗಳು ಕೂಡ ನಡೆಯಲಿವೆ. ಈ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1.30ರಿಂದ ಆರಂಭವಾಗಲಿವೆ.

ದಕ್ಷಿಣ ಆಫ್ರಿಕಾ ಟಿ20 ತಂಡ:

ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೇರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಲಿಜಾದ್ ವಿಲಿಯಮ್ಸ್.

ಟಿ20 ಸರಣಿಗೆ ಭಾರತ ತಂಡ:

ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:49 am, Sat, 9 December 23