ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಸೀಮಿತ ಓವರ್ಗಳ ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಟಿ20 ಸರಣಿಯು 1-1 ಅಂತರದಿಂದ ಸಮಬಲಗೊಂಡರೆ, ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳು ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದೆ.
ಈ ಸರಣಿಯಲ್ಲಿ 2 ಪಂದ್ಯಗಳನ್ನಾಡಲಿದ್ದು, ಮೊದಲ ಪಂದ್ಯವು ಬಾಕ್ಸಿಂಗ್ ಡೇ ಟೆಸ್ಟ್ ಆಗಿರಲಿದೆ. ಅಂದರೆ ಕ್ರಿಸ್ಮಸ್ ಮರುದಿನ ಡಿಸೆಂಬರ್ 26 ರಿಂದ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಈ ಪಂದ್ಯವು ಸೆಂಚುರಿಯನ್ನಲ್ಲಿ ನಡೆದರೆ, 2ನೇ ಪಂದ್ಯವು ಕೇಪ್ಜನವರಿ 3 ರಿಂದ ಟೌನ್ನಲ್ಲಿ ಆರಂಭವಾಗಲಿದೆ.
ಈ ಎರಡೂ ಪಂದ್ಯಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಭಾಗವಾಗಿದ್ದು, ಹೀಗಾಗಿ ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ ಪಂದ್ಯಗಳಾಗಿವೆ. ಹೀಗಾಗಿ ಟೆಸ್ಟ್ ಸರಣಿಯ ಗೆಲುವಿನೊಂದಿಗೆ ಟೀಮ್ ಇಂಡಿಯಾ ಹೊಸ ವರ್ಷಕ್ಕೆ ಮುನ್ನುಡಿ ಬರೆಯುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.
ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು 42 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 15 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಸೌತ್ ಆಫ್ರಿಕಾ ತಂಡವು 17 ಮ್ಯಾಚ್ಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನು 10 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ.
ಇನ್ನು ಕೊನೆಯ ಐದು ಟೆಸ್ಟ್ ಪಂದ್ಯಗಳ ಮುಖಾಮುಖಿಯಲ್ಲಿ ಸೌತ್ ಆಫ್ರಿಕಾ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಟೀಮ್ ಇಂಡಿಯಾ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಮೇಲುಗೈ ಹೊಂದಿದೆ. ಆದರೆ ಈ ಬಾರಿ ಪಂದ್ಯ ನಡೆಯುತ್ತಿರುವುದು ಸೌತ್ ಆಫ್ರಿಕಾದಲ್ಲಿ. ಹೀಗಾಗಿ ಭಾರತ ತಂಡಕ್ಕೆ ಸೌತ್ ಆಫ್ರಿಕಾ ತಂಡದಿಂದ ಕಠಿಣ ಪೈಪೋಟಿ ಎದುರಾಗುವುದಂತು ನಿಶ್ಚಿತ. ಅದರಂತೆ ಈ ಸರಣಿಗಾಗಿ ಆಯ್ಕೆ ಮಾಡಲಾದ ಉಭಯ ತಂಡಗಳು ಈ ಕೆಳಗಿನಂತಿದೆ…
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.
ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಟ್ಝಿ, ಟೋನಿ ಡಿ ಝೋರ್ಝಿ, ಡೀನ್ ಎಲ್ಗರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕೀಗನ್ ಪೀಟರ್‌ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್, ಕೈಲ್ ವೆರ್ರೆನ್ನೆ.
ಇದನ್ನೂ ಓದಿ: IPL 2024: ಬಲಿಷ್ಠ ಪಡೆ…RCB ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ
ಟೆಸ್ಟ್ ಸರಣಿ ವೇಳಾಪಟ್ಟಿ: