Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 1st Test: ರೋಹಿತ್ ಶರ್ಮಾ​ಗೆ ಅಗ್ನಿ ಪರೀಕ್ಷೆ: ಹರಿಣಗಳ ನಾಡಲ್ಲಿ ಇತಿಹಾಸ ಸೃಷ್ಟಿಯಾಗುತ್ತಾ?

South Africa vs India 1st Test: ಡಿಸೆಂಬರ್ 26 ರಿಂದ 30 ರವರೆಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಸೆಂಚುರಿಯನ್‌ನಲ್ಲಿ ಮೊದಲ ಪಂದ್ಯ ನಡೆಯಲಿದೆ. ಬೇಸರದ ಸಂಗತಿ ಎಂದರೆ ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಈವರೆಗೆ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. ಟೀಮ್ ಇಂಡಿಯಾ 1992 ರಿಂದ 2022 ರವರೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಅವರ ನೆಲದಲ್ಲಿ ಒಟ್ಟು 8 ಟೆಸ್ಟ್ ಸರಣಿಗಳನ್ನು ಆಡಿದೆ.

IND vs SA 1st Test: ರೋಹಿತ್ ಶರ್ಮಾ​ಗೆ ಅಗ್ನಿ ಪರೀಕ್ಷೆ: ಹರಿಣಗಳ ನಾಡಲ್ಲಿ ಇತಿಹಾಸ ಸೃಷ್ಟಿಯಾಗುತ್ತಾ?
SA vs IND 1st Test
Follow us
Vinay Bhat
|

Updated on: Dec 23, 2023 | 8:12 AM

ದಕ್ಷಿಣ ಆಫ್ರಿಕಾ ಹಾಗೂ ಭಾರತ (South Africa vs India) ನಡುವಿನ ಟಿ20 ಸರಣಿ 1-1 ಅಂತರದಿಂದ ಸಮಬಲಗೊಂಡಿತು. ಆ ಬಳಿಕ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು 2018ರ ನಂತರ ಏಕದಿನ ಸರಣಿ ಗೆದ್ದ ಸಾಧನೆ ಮಾಡಿತು. ಇದೀಗ ಎರಡೂ ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯಲಿದೆ. ಡಿಸೆಂಬರ್ 26 ರಿಂದ 30 ರವರೆಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಸೆಂಚುರಿಯನ್‌ನಲ್ಲಿ ಮೊದಲ ಪಂದ್ಯ ನಡೆಯಲಿದೆ. ಇದು ಬಾಕ್ಸಿಂಗ್ ಡೇ ಟೆಸ್ಟ್ ಆಗಲಿದೆ. ಎರಡನೇ ಮತ್ತು ಅಂತಿಮ ಪಂದ್ಯ ಜನವರಿ 3 ರಿಂದ ಜನವರಿ 7 ರ ನಡುವೆ ನಡೆಯಲಿದೆ.

ಬೇಸರದ ಸಂಗತಿ ಎಂದರೆ ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಈವರೆಗೆ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. ಟೀಮ್ ಇಂಡಿಯಾ 1992 ರಿಂದ 2022 ರವರೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಅವರ ನೆಲದಲ್ಲಿ ಒಟ್ಟು 8 ಟೆಸ್ಟ್ ಸರಣಿಗಳನ್ನು ಆಡಿದೆ. ಈ 8 ಸರಣಿಗಳಲ್ಲಿ ಒಂದು ಸಮಬಲಗೊಂಡಿದೆ. 7 ಸರಣಿಗಳಲ್ಲಿ ಭಾರತ ಸೋಲು ಕಂಡಿದೆ. 2010-2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಮ್ ಇಂಡಿಯಾ 1-1 ರಿಂದ ಸಮಬಲ ಸಾಧಿಸಿತ್ತು.

ಟೀಂ ಇಂಡಿಯಾ ಪರ ಕಣಕ್ಕಿಳಿದು ಐಪಿಎಲ್ ಸಂಬಳ ಹೆಚ್ಚಿಸಿಕೊಂಡ ಆರ್​ಸಿಬಿ ಆಟಗಾರ..!

ಇದನ್ನೂ ಓದಿ
Image
ಕೇವಲ 98 ರನ್​ಗಳಿಗೆ ನ್ಯೂಝಿಲೆಂಡ್ ಆಲೌಟ್​: ಬಾಂಗ್ಲಾಗೆ ಭರ್ಜರಿ ಜಯ
Image
ತನ್ನದೇ ದಾಖಲೆ ಮುರಿದು ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
ಟೀಮ್ ಇಂಡಿಯಾಕ್ಕೆ ಮತ್ತೊಂದು ಟೆನ್ಶನ್: 7 ವಾರಗಳ ಕಾಲ ತಂಡದಿಂದ ನಾಯಕ ಔಟ್
Image
IND vs SA: ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ

2021-2022ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕೊನೆಯ ಟೆಸ್ಟ್ ಸರಣಿಯನ್ನು ಆಡಿತ್ತು. ಆಗ ಈ ಸರಣಿಯನ್ನು 1-2 ಅಂತರದಿಂದ ಕಳೆದುಕೊಳ್ಳಬೇಕಾಯಿತು. ಇದೀಗ ಈ ವರ್ಷ ಮೊದಲ ಬಾರಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೆಸ್ಟ್ ಆಡುತ್ತಿದೆ. ರೋಹಿತ್ ಶರ್ಮಾ ಮುಂದೆ ಟೀಮ್ ಇಂಡಿಯಾಗೆ ಈ ಸರಣಿ ಗೆಲ್ಲುವ ಸವಾಲು ಎದುರಾಗಿದೆ. ಅಲ್ಲದೆ, ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಅನೇಕ ಟೀಮ್ ಇಂಡಿಯಾ ಆಟಗಾರರು ಕಣಕ್ಕಿಳಿಯುತ್ತಿದ್ದಾರೆ. ಯುವ ಆಟಗಾರರನ್ನು ನಂಬಿ ಅವರಿಂದ ಉತ್ತಮ ಪ್ರದರ್ಶನ ಪಡೆಯುವ ಸವಾಲು ರೋಹಿತ್​ಗೆ ಎದುರಾಗಲಿದೆ.

ಇದರ ನಡುವೆ ಟೀಮ್ ಇಂಡಿಯಾದ ಸ್ಟಾರ್ ಮೊಹಮ್ಮದ್ ಶಮಿ ಹಾಗೂ ಇಶಾನ್ ಕಿಶನ್ ಇಬ್ಬರೂ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದಾರೆ. ಮೊಹಮ್ಮದ್ ಶಮಿ ಗಾಯಗೊಂಡಿದ್ದಾರೆ. ಆದರೆ ಇಶಾನ್ ಕಿಶನ್ ವೈಯಕ್ತಿಕ ಕಾರಣಗಳಿಂದ ಆಡುವುದಿಲ್ಲ ಎಂದಿದ್ದಾರೆ. ಬೆರಳಿನ ಗಾಯದಿಂದಾಗಿ ರುತುರಾಜ್ ಗಾಯಕ್ವಾಡ್ ಕೂಡ ಸರಣಿಯಿಂದ ಹೊರಗುಳಿದಿದ್ದಾರೆ. ವಿರಾಟ್ ಕೊಹ್ಲಿ ತುರ್ತು ಕಾರಣದಿಂದ ಭಾರತಕ್ಕೆ ಮರಳಿದ್ದು, ಮೊದಲ ಟೆಸ್ಟ್​ಗೆ ಲಭ್ಯರಿರುತ್ತಾರ ಎಂಬುದು ನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?