AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs ZIM: ನಾಯಕನಾದ ಚೊಚ್ಚಲ ಪಂದ್ಯದಲ್ಲೇ ಅಜೇಯ 367 ರನ್ ಚಚ್ಚಿದ ಆಫ್ರಿಕಾ ಆಲ್​ರೌಂಡರ್ ಮುಲ್ಡರ್

Wiaan Mulder Record-Breaking Innings: ದಕ್ಷಿಣ ಆಫ್ರಿಕಾ ತಂಡವು ಜಿಂಬಾಬ್ವೆ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ನಾಯಕ ವಿಯಾನ್ ಮುಲ್ಡರ್ ಅವರು ಅಜೇಯ 367 ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ. ಆದರೆ, ಬ್ರಿಯಾನ್ ಲಾರಾ ಅವರ ವಿಶ್ವ ದಾಖಲೆಯನ್ನು ಮುರಿಯುವ ಅವಕಾಶವನ್ನು ಕೈಬಿಟ್ಟ ಮುಲ್ಡರ್ ಇನ್ನಿಂಗ್ಸ್ ಡಿಕ್ಲೇರ್ ಮಾಡಿದ್ದಾರೆ.

SA vs ZIM: ನಾಯಕನಾದ ಚೊಚ್ಚಲ ಪಂದ್ಯದಲ್ಲೇ ಅಜೇಯ 367 ರನ್ ಚಚ್ಚಿದ ಆಫ್ರಿಕಾ ಆಲ್​ರೌಂಡರ್ ಮುಲ್ಡರ್
Wiaan Mulder
ಪೃಥ್ವಿಶಂಕರ
|

Updated on:Jul 07, 2025 | 4:59 PM

Share

2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2025) ಪ್ರಶಸ್ತಿಯನ್ನು ಗೆದ್ದುಕೊಂಡಿದ್ದ ದಕ್ಷಿಣ ಆಫ್ರಿಕಾ ತಂಡವು ಪ್ರಸ್ತುತ ಜಿಂಬಾಬ್ವೆ (South Africa vs Zimbabwe) ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿದ್ದ ಆಫ್ರಿಕಾ ಇದೀಗ ಎರಡನೇ ಟೆಸ್ಟ್ ಗೆಲ್ಲುವ ಸನಿಹದಲ್ಲಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 626 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ತಂಡದ ಪರ ಸ್ಮರಣೀಯ ಇನ್ನಿಂಗ್ಸ್ ಆಡಿದ ನಾಯಕ ವಿಯಾನ್ ಮುಲ್ಡರ್ (Wiaan Mulder), ತಾವು ನಾಯಕತ್ವವಹಿಸಿದ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಅಜೇಯ 367 ರನ್ ಬಾರಿಸಿ ಹಲವು ದಾಖಲೆಗಳಿಗೆ ಕೊರಳೊಡ್ಡಿದ್ದಾರೆ. ಆದಾಗ್ಯೂ ಮುಲ್ಡರ್, ವಿಂಡೀಸ್ ದಿಗ್ಗಜ ಬ್ರಿಯಾನ್ ಲಾರಾ 21 ವರ್ಷಗಳ ಹಿಂದೆ ನಿರ್ಮಿಸಿದ್ದ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ವಿಫಲರಾಗಿದ್ದಾರೆ.

ಅಚ್ಚರಿ ಮೂಡಿಸಿದ ಮುಲ್ಡರ್ ನಿರ್ಧಾರ

ಮೇಲೆ ಹೇಳಿದಂತೆ ಜಿಂಬಾಬ್ವೆ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತನ್ನ ಮೊದಲ ಇನ್ನಿಂಗ್ಸ್ ಅನ್ನು 5 ವಿಕೆಟ್‌ಗಳಿಗೆ 626 ರನ್‌ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ನಾಯಕ ವಿಯಾನ್ ಮುಲ್ಡರ್ 367 ರನ್ ಗಳಿಸಿ ಅಜೇಯರಾಗಿ ಉಳಿದರು. ವಿಯಾನ್ ಮುಲ್ಡರ್ ಆಡುತ್ತಿದ್ದ ರೀತಿ ನೋಡಿದರೆ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ರಿಯಾನ್ ಲಾರಾ ಅವರ 400 ರನ್‌ಗಳ ದಾಖಲೆಯನ್ನು ಮುರಿಯುತ್ತಾರೆ ಎಂದು ತೋರುತ್ತಿತ್ತು, ಆದರೆ ಊಟದ ವಿರಾಮದಲ್ಲಿ ಮುಲ್ಡರ್ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡು ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿದರು.

ಡಿಕ್ಲೇರ್ ಘೋಷಿಸುವುದಕ್ಕೂ ಮುನ್ನ ವಿಯಾನ್ ಮುಲ್ಡರ್ 334 ಎಸೆತಗಳಲ್ಲಿ 49 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ ಅಜೇಯ 367 ರನ್ ಗಳಿಸಿದ್ದರು. ಹೀಗಾಗಿ 2004 ರಲ್ಲಿ ಇಂಗ್ಲೆಂಡ್‌ ವಿರುದ್ಧ ಬ್ರಿಯಾನ್ ಲಾರಾ ಒಂದೇ ಇನ್ನಿಂಗ್ಸ್​ನಲ್ಲಿ ಬಾರಿಸಿದ್ದ ಅಜೇಯ 400 ರನ್​ಗಳ ದಾಖಲೆಯನ್ನು ಮುಲ್ಡರ್ ಮುರಿಯುತ್ತಾರೆ ಎಂದು ತೊರುತ್ತಿತ್ತು. ಆದರೆ ಮುಲ್ಡರ್, ಇನ್ನಿಂಗ್ಸ್ ಡಿಕ್ಲೇರ್ ಮಾಡುವ ಮೂಲಕ ಲಾರಾ ಅವರ ದಾಖಲೆಯನ್ನು ಹಾಗೆಯೇ ಉಳಿಸಿದರು.

ಮೊದಲ ಟೆಸ್ಟ್‌ನಲ್ಲೂ ಶತಕ

ಜಿಂಬಾಬ್ವೆ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ವಿಯಾನ್ ಮುಲ್ಡರ್ 147 ರನ್ ಬಾರಿಸಿದ್ದರು. ಇದಲ್ಲದೆ, ಅವರು ಬೌಲಿಂಗ್​ನಲ್ಲೂ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದರು. ವಿಯಾನ್ ಮುಲ್ಡರ್ ಇಲ್ಲಿಯವರೆಗೆ 21 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ, ಅವರು 38.43 ಸರಾಸರಿಯಲ್ಲಿ 1153 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಶತಕಗಳು ಮತ್ತು ಒಂದು ಅರ್ಧಶತಕ ಸೇರಿವೆ. ಅಲ್ಲದೆ ಬೌಲಿಂಗ್​ನಲ್ಲೂ ಅವರು 35 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Mon, 7 July 25

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ