
ಟಿ20 ಹಾಗೂ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ತಂಡ ಪ್ರಸ್ತುತ ಆಸ್ಟ್ರೇಲಿಯಾ (South Africa vs Australia T20) ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದು, ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಗೆಲುವು ಸಾಧಿಸಿತ್ತು. ಇದೀಗ ಎರಡನೇ ಟಿ20 ಪಂದ್ಯದಲ್ಲಿ ಅದ್ಭುತ ಪುನರಾಗಮನ ಮಾಡಿದ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾವನ್ನು ಬರೋಬ್ಬರಿ 53 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿ 1-1 ರಲ್ಲಿ ಸಮಬಲ ಸಾಧಿಸಿದೆ. ಆಫ್ರಿಕಾ ಪರ ಅಬ್ಬರಿಸಿದ 22 ವರ್ಷದ ಡೆವಾಲ್ಡ್ ಬ್ರೆವಿಸ್ (Devald Brevis) ಬಿರುಗಾಳಿಯ ಶತಕ ಸಿಡಿಸಿದರು. ಇದರಿಂದಾಗಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ 218 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 165 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯ ಸೋಲು ಅನುಭವಿಸಿತು.
ಎರಡನೇ ಟಿ20ಐ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ಡೆವಾಲ್ಡ್ ಬ್ರೆವಿಸ್ ಅವರ ಅದ್ಭುತ ಶತಕದ ಸಹಾಯದಿಂದ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 218 ರನ್ ಗಳಿಸಿತು. 219 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಡೀ ಆಸ್ಟ್ರೇಲಿಯಾ ತಂಡವು 17.4 ಓವರ್‌ಗಳಲ್ಲಿ ಕೇವಲ 165 ರನ್‌ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ, ಟಿಮ್ ಡೇವಿಡ್ 24 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ ಅತ್ಯಧಿಕ 50 ರನ್ ಗಳಿಸಿದರು.
ದಕ್ಷಿಣ ಆಫ್ರಿಕಾ ಪರ, 19 ವರ್ಷದ ವೇಗಿ ಎಂಫಾಕಾ ಮೂರು ವಿಕೆಟ್ ಪಡೆದು ಆತಿಥೇಯ ತಂಡವನ್ನು ಶರಣಾಗುವಂತೆ ಮಾಡಿದರು. ಇವರಲ್ಲದೆ, ಕಾರ್ಬಿನ್ ಬಾಷ್ ಕೂಡ ಮೂವರು ಆಟಗಾರರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಇದಕ್ಕೂ ಮೊದಲು, ಡೆವಾಲ್ಡ್ ಬ್ರೆವಿಸ್ ಶತಕ ಗಳಿಸುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದರು.
Dewald Brevis becomes the FIRST man to score a T20I century against Australia in Australia.
Not just a century, also scores a massive 125*(56).
Now, all 11 full-member hosts have at least one away century.pic.twitter.com/4rK4xWDfb8
— Kausthub Gudipati (@kaustats) August 12, 2025
ದಕ್ಷಿಣ ಆಫ್ರಿಕಾದ ಯುವ ಆಲ್‌ರೌಂಡರ್ ಡೆವಾಲ್ಡ್ ಬ್ರೆವಿಸ್ ಆಸ್ಟ್ರೇಲಿಯಾ ವಿರುದ್ಧ ಬಿರುಗಾಳಿಯ ಶತಕ ಗಳಿಸಿದರು. ಕೇವಲ 41 ಎಸೆತಗಳಲ್ಲಿ ತಮ್ಮ ವೃತ್ತಿಜೀವನದ ಮೊದಲ ಶತಕ ಬಾರಿಸಿದ ಬ್ರೆವಿಸ್ 56 ಎಸೆತಗಳಲ್ಲಿ 8 ಸಿಕ್ಸರ್‌ಗಳು ಮತ್ತು 12 ಬೌಂಡರಿಗಳ ಸಹಾಯದಿಂದ ಅಜೇಯ 125 ರನ್ ಗಳಿಸಿದರು. ಅವರಲ್ಲದೆ, ಟ್ರಿಸ್ಟಿನ್ ಸ್ಟಬ್ಸ್ 31 ರನ್‌ಗಳ ಇನ್ನಿಂಗ್ಸ್ ಆಡಿದರು. ಇದರ ಸಹಾಯದಿಂದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 218 ರನ್ ಗಳಿಸಿತು. ಆಸ್ಟ್ರೇಲಿಯಾ ಪರ ಬೆನ್ ದ್ವಾರ್ಶುಯಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ತಲಾ 2 ವಿಕೆಟ್ ಪಡೆದರೆ, ಜೋಶ್ ಹ್ಯಾಜಲ್‌ವುಡ್ ಮತ್ತು ಆಡಮ್ ಜಂಪಾ ತಲಾ ಒಂದು ವಿಕೆಟ್ ಪಡೆದರು.
ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡದ ಅರ್ಧದಷ್ಟು ಆಟಗಾರರು ಕೇವಲ 112 ರನ್‌ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ತಂಡದ ಪರ ಹೋರಾಟ ನೀಡಿದ ಟಿಮ್ ಡೇವಿಡ್ 54 ರನ್‌ಗಳ ಇನ್ನಿಂಗ್ಸ್ ಆಡಿದರು. ಇವರ ಹೊರತಾಗಿ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಅಲೆಕ್ಸ್ ಕ್ಯಾರಿ 18 ಎಸೆತಗಳಲ್ಲಿ 26 ರನ್ ಗಳಿಸಿದರು. ನಾಯಕ ಮಿಚೆಲ್ ಮಾರ್ಷ್ 13 ಎಸೆತಗಳಲ್ಲಿ 22 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ಈ ಮೂವರನ್ನು ಹೊರತುಪಡಿಸಿ, ಯಾವುದೇ ಬ್ಯಾಟ್ಸ್ಮನ್ಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.
AUA-W vs IND-W: 114 ರನ್‌ಗಳಿಂದ ಸೋತ ಟೀಂ ಇಂಡಿಯಾ; ಆಸೀಸ್ ವನಿತಾ ಪಡೆಗೆ ಟಿ20 ಸರಣಿ
ಆಫ್ರಿಕಾ ವಿರುದ್ಧ ಎರಡನೇ ಟಿ20 ಪಂದ್ಯವನ್ನು ಸೋಲುವುದರೊಂದಿಗೆ ಆಸ್ಟ್ರೇಲಿಯಾದ ಅಜೇಯ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. ವಾಸ್ತವವಾಗಿ ಎರಡನೇ ಟಿ20 ಪಂದ್ಯಕ್ಕೂ ಮುನ್ನ ನಡೆದಿದ್ದ 9 ಟಿ20 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಸತತ ಗೆಲುವು ಸಾಧಿಸಿತ್ತು. ಈ ಮೂಲಕ ಟೆಸ್ಟ್ ಆಡುವ ದೇಶಗಳ ಪೈಕಿ ಅತಿ ಹೆಚ್ಚು ಟಿ20 ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿದ ತಂಡ ಎಂಬ ದಾಖಲೆ ಬರೆಯುವತ್ತ ಆಸ್ಟ್ರೇಲಿಯಾ ದಾಪುಗಾಲಿಟ್ಟಿದೆ. ಈ ಪಟ್ಟಿಯಲ್ಲಿ ಸತತ 12 ಟಿ20 ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಮೊದಲ ಸ್ಥಾನದಲ್ಲಿತ್ತು. ಟೀಂ ಇಂಡಿಯಾದ ಈ ದಾಖಲೆಯನ್ನು ಮುರಿಯಲು ಆಸ್ಟ್ರೇಲಿಯಾಕ್ಕೆ ಇನ್ನು 4 ಸತತ ಗೆಲುವುಗಳು ಬೇಕಾಗಿದ್ದವು. ಆದರೆ ಆಫ್ರಿಕಾ ವಿರುದ್ಧ 2ನೇ ಟಿ20 ಪಂದ್ಯವನ್ನು ಸೋಲುವುದರೊಂದಿಗೆ ಆಸ್ಟ್ರೇಲಿಯಾದ ಗೆಲುವಿನ ಸರಣಿಗೂ ಅಂತ್ಯ ಹಾಡಲಾಯಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:43 pm, Wed, 13 August 25