IND vs SA: ಸೌತ್ ಆಫ್ರಿಕಾ ಗೆದ್ದ ಏಕೈಕ ಐಸಿಸಿ ಟ್ರೋಫಿ ಯಾವುದು ಗೊತ್ತಾ?

T20 World Cup 2024 Final: ಟಿ20 ವಿಶ್ವಕಪ್​ನಲ್ಲಿ ಸೌತ್ ಆಫ್ರಿಕಾ ತಂಡವು ಇದೇ ಮೊದಲ ಬಾರಿಗೆ ಫೈನಲ್​ಗೆ ಪ್ರವೇಶಿಸಿದೆ. ಅದರಲ್ಲೂ ವಿಶ್ವಕಪ್ ಟೂರ್ನಿಯಲ್ಲಿ ಒಮ್ಮೆಯೂ ಪ್ರಶಸ್ತಿ ಜಯಿಸದ ಸೌತ್ ಆಫ್ರಿಕಾ ಈ ಬಾರಿ 1998ರ ಫಲಿತಾಂಶವನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದೆ. ಅಂದರೆ ಸೌತ್ ಆಫ್ರಿಕಾ ತಂಡವು 1998 ರಲ್ಲಿ ಐಸಿಸಿ ಟ್ರೋಫಿಯೊಂದನ್ನು ಗೆದ್ದುಕೊಂಡಿತ್ತು.

IND vs SA: ಸೌತ್ ಆಫ್ರಿಕಾ ಗೆದ್ದ ಏಕೈಕ ಐಸಿಸಿ ಟ್ರೋಫಿ ಯಾವುದು ಗೊತ್ತಾ?
South Africa
Follow us
ಝಾಹಿರ್ ಯೂಸುಫ್
|

Updated on: Jun 29, 2024 | 10:14 AM

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಇಂದು (ಜೂ.29) ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಇದು ಸೌತ್ ಆಫ್ರಿಕಾ ತಂಡದ ಮೊದಲ ಟಿ20 ವಿಶ್ವಕಪ್​ ಫೈನಲ್. ಹಾಗೆಯೇ ಭಾರತ ತಂಡವು 10 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಫೈನಲ್​ಗೇರಿದೆ.

ಅಂದರೆ ಇಂದಿನ ಪಂದ್ಯದಲ್ಲಿ ಯಾರೇ ಗೆದ್ದರೂ ಅದು ಐತಿಹಾಸಿಕ ಗೆಲುವುವಾಗಿರಲಿದೆ. ಅದರಲ್ಲೂ ಸೌತ್ ಆಫ್ರಿಕಾ ಪಾಲಿಗೆ ವಿಶ್ವಕಪ್ ಎಂಬುದು ಮರೀಚಿಕೆ. ಹೀಗಾಗಿ ಚೊಚ್ಚಲ ಬಾರಿಗೆ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ.

ಇದಕ್ಕೂ ಮುನ್ನ ಸೌತ್ ಆಫ್ರಿಕಾ ಐಸಿಸಿ ಟೂರ್ನಿಯಲ್ಲಿ ಏಕೈಕ ಪ್ರಶಸ್ತಿ ಮಾತ್ರ ಗೆದ್ದಿದೆ. ಅದು ಕೂಡ 1998 ರಲ್ಲಿ ಎಂಬುದು ವಿಶೇಷ. ಇದಾದ ಬಳಿಕ ಆಫ್ರಿಕನ್ನರು ಒಮ್ಮೆಯೂ ಐಸಿಸಿ ಟೂರ್ನಿಯಲ್ಲಿ ಪ್ರಶಸ್ತಿ ಎತ್ತಿ ಹಿಡಿದಿಲ್ಲ ಎಂಬುದೇ ಅಚ್ಚರಿ.

ಸೌತ್ ಆಫ್ರಿಕಾ ಗೆದ್ದ ಮೊದಲ ಟ್ರೋಫಿ:

ಕ್ರಿಕೆಟ್ ಅಂಗಳದ ಚೋಕರ್ಸ್ ಎಂದೇ ಗುರುತಿಸಿಕೊಂಡಿರುವ ಸೌತ್ ಆಫ್ರಿಕಾ ತಂಡವು ಐಸಿಸಿ ಟೂರ್ನಿಯಲ್ಲಿ ಏಕೈಕ ಪ್ರಶಸ್ತಿ ಮಾತ್ರ ಮುಡಿಗೇರಿಸಿಕೊಂಡಿದೆ. 1998 ರಲ್ಲಿ ನಡೆದ ಐಸಿಸಿ ನಾಕೌಟ್ ಟ್ರೋಫಿ (ಈಗಿನ ಚಾಂಪಿಯನ್ಸ್​ ಟ್ರೋಫಿ) ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 49.3 ಓವರ್​ಗಳಲ್ಲಿ 245 ರನ್ ಗಳಿಸಿ ಆಲೌಟ್ ಆಗಿತ್ತು. 246 ರನ್​ಗಳ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 47 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಜಯ ಸಾಧಿಸಿತ್ತು.

ಇದುವೇ ಸೌತ್ ಆಫ್ರಿಕಾ ಗೆದ್ದ ಏಕೈಕ ಐಸಿಸಿ ಟೂರ್ನಿ. ಇದಾದ ಬಳಿಕ ಏಕದಿನ ವಿಶ್ವಕಪ್, ಟಿ20 ವಿಶ್ವಕಪ್​, ಚಾಂಪಿಯನ್ಸ್ ಟ್ರೋಫಿಗಳಲ್ಲಿ ಕಣಕ್ಕಿಳಿದರೂ ಪ್ರಶಸ್ತಿ ಗೆಲ್ಲಲು ಮಾತ್ರ ಸಾಧ್ಯವಾಗಿಲ್ಲ. ಅದರಲ್ಲೂ ಟಿ20 ಕ್ರಿಕೆಟ್​ನ ಬಲಿಷ್ಠ ಆಟಗಾರರನ್ನು ಒಳಗೊಂಡಿದ್ದರೂ ಕಳೆದ 8 ಆವೃತ್ತಿಯ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Shafali Verma: ದಾಖಲೆಗಳ ಮೇಲೆ ದಾಖಲೆ ಬರೆದ ಶಫಾಲಿ ವರ್ಮಾ

ಇದೀಗ 17 ವರ್ಷಗಳ ಬಳಿಕ ಸೌತ್ ಆಫ್ರಿಕಾ ತಂಡ ಟಿ20 ವಿಶ್ವಕಪ್​ನ ಫೈನಲ್ ಸುತ್ತಿಗೆ ಪ್ರವೇಶಿಸಿದೆ. ಈ ಮೂಲಕ ಚೊಚ್ಚಲ ವಿಶ್ವಕಪ್ ಗೆಲ್ಲುವ ವಿಶ್ವಾಸದಲ್ಲಿದ್ದಾರೆ ಆಫ್ರಿಕನ್ನರು. ಅದರಂತೆ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಗೆದ್ದು ಬೀಗುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ ಬಹುಕಾಲದ ಕಸನನ್ನು ಈಡೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ