Sean Whitehead: ಅನಿಲ್ ಕುಂಬ್ಳೆ ಬಳಿಕ 10 ವಿಕೆಟ್ ಉರುಳಿಸಿ ವಿಶ್ವ ದಾಖಲೆ ಬರೆದ ಯುವ ಸ್ಪಿನ್ನರ್

Sean Whitehead: 8 ರನ್​ಗಳ ಹಿನ್ನಡೆಯೊಂದಿಗೆ 2ನೇ ಇನಿಂಗ್ಸ್ ಆರಂಭಿಸಿದ ವೆಸ್ಟರ್ನ್ ತಂಡವು ಈ ಬಾರಿ ಸೀನ್ ಹೆಡ್​ವೈಟ್​ ಅವರ 49 ರನ್​ಗಳ ಕಾಣಿಕೆಯೊಂದಿಗೆ 193 ರನ್​ ಕಲೆಹಾಕಿತು.

Sean Whitehead: ಅನಿಲ್ ಕುಂಬ್ಳೆ ಬಳಿಕ 10 ವಿಕೆಟ್ ಉರುಳಿಸಿ ವಿಶ್ವ ದಾಖಲೆ ಬರೆದ ಯುವ ಸ್ಪಿನ್ನರ್
Sean Whitehead
Follow us
TV9 Web
| Updated By: ಝಾಹಿರ್ ಯೂಸುಫ್

Updated on:Nov 22, 2021 | 6:52 PM

ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಇನಿಂಗ್ಸ್​ನಲ್ಲಿ 10 ವಿಕೆಟ್ ಉರುಳಿಸಿದ್ದು ಇಬ್ಬರೇ ಇಬ್ಬರು. ಅವರಲ್ಲಿ ಮೊದಲಿಗರು ಜಿಮ್ಮಿ ಲೇಕರ್ (Jimmy Laker). 1956 ರಲ್ಲಿ ಇಂಗ್ಲೆಂಡ್ ಬೌಲರ್ ಲೇಕರ್ ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ 53 ರನ್​ ನೀಡಿ 10 ವಿಕೆಟ್ ಉರುಳಿಸಿ ವಿಶ್ವ ದಾಖಲೆ ಬರೆದಿದ್ದರು. ಆ ಬಳಿಕ ಈ ದಾಖಲೆಯನ್ನು ಸರಿಗಟ್ಟಿದ್ದು ಕನ್ನಡಿಗ ಅನಿಲ್ ಕುಂಬ್ಳೆ (Anil Kumble). ಕುಂಬ್ಳೆ 1999 ರಲ್ಲಿ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ 74 ರನ್ ನೀಡಿ 10 ವಿಕೆಟ್ ಉರುಳಿಸಿದ್ದರು. ಇದೀಗ ಈ ಪಟ್ಟಿಗೆ ಮೂರನೇ ಸೇರ್ಪಡೆ ದಕ್ಷಿಣ ಆಫ್ರಿಕಾದ 24ರ ಹರೆಯದ ಯುವ ಸ್ಪಿನ್ನರ್ ಸೀನ್ ​ವೈಟ್​ಹೆಡ್ (Sean Whitehead).

ದಕ್ಷಿಣ ಆಫ್ರಿಕಾದ ಫಸ್ಟ್​ ಕ್ಲಾಸ್ ಕ್ರಿಕೆಟ್​ನಲ್ಲಿ ಸೀನ್​ ವೈಟ್​ಹೆಡ್ 10 ಪಡೆಯುವ ಮೂಲಕ ಇನಿಂಗ್ಸ್​ವೊಂದರಲ್ಲಿ ಎಲ್ಲಾ ವಿಕೆಟ್ ಉರುಳಿಸಿದ ದಾಖಲೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ಆಲ್​ರೌಂಡರ್ ಆಟವಾಡುವ ಮೂಲಕ ಗೆಲುವಿನ ರೂವಾರಿ ಎನಿಸಿಕೊಂಡಿದ್ದಾರೆ.

ಈಸ್ಟರ್ನ್ ಸ್ಟ್ರೋಮ್ ಹಾಗೂ ಸೌತ್ ವೆಸ್ಟರ್ನ್​ ನಡುವಣ ಈ ಪಂದ್ಯದಲ್ಲಿ ಸೀನ್ ವೈಟ್​ಹೆಡ್ ವೆಸ್ಟರ್ನ್​ ತಂಡದ ಪರ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟರ್ನ್ ತಂಡವು ಮೊದಲ ಇನಿಂಗ್ಸ್​ನಲ್ಲಿ 242 ರನ್​ಗಳಿಸಿತ್ತು. ಈ ವೇಳೆ ಸೀನ್ ಹೆಡ್​ವೈಟ್ ಕಲೆಹಾಕಿದ್ದು 66 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಈಸ್ಟರ್ನ್​ ಸ್ಟ್ರೋಮ್ ತಂಡದ 5 ಪ್ರಮುಖ ವಿಕೆಟ್ ಉರುಳಿಸಿದ ಸೀನ್ ವೈಟ್​ಹೆಡ್ ತಂಡದ ಮೊತ್ತವನ್ನು 250 ಕ್ಕೆ ನಿಯಂತ್ರಿಸಿದರು.

8 ರನ್​ಗಳ ಹಿನ್ನಡೆಯೊಂದಿಗೆ 2ನೇ ಇನಿಂಗ್ಸ್ ಆರಂಭಿಸಿದ ವೆಸ್ಟರ್ನ್ ತಂಡವು ಈ ಬಾರಿ ಸೀನ್ ವೈಟ್​ಹೆಡ್​ ಅವರ 49 ರನ್​ಗಳ ಕಾಣಿಕೆಯೊಂದಿಗೆ 193 ರನ್​ ಕಲೆಹಾಕಿತು. 185 ರನ್​ಗಳ ಸಾಧಾರಣ ಗುರಿ ಪಡೆದ ಈಸ್ಟರ್ನ್​ ಸ್ಟ್ರೋಮ್ ತಂಡದ ಲೆಕ್ಕಚಾರಗಳನ್ನು ತಲೆಕೆಳಗಾಗಿಸಿದ್ದು 24 ರ ಹರೆಯದ ಸೀನ್ ಹೆಡ್​ವೈಟ್. ಏಕೆಂದರೆ 12.1 ಓವರ್​ ಎಸೆದ ಸೀನ್​ ವೈಟ್​ಹೆಡ್ 36 ರನ್​ಗಳಿಗೆ 10 ವಿಕೆಟ್ ಉರುಳಿಸಿದ್ದರು. ಈ ಮೂಲಕ ಈಸ್ಟರ್ನ್​ ಸ್ಟ್ರೋಮ್​ ತಂಡವನ್ನು ಕೇವಲ 65 ರನ್​ಗಳಿಗೆ ಆಲೌಟ್ ಮಾಡಿ 120 ರನ್​ಗಳ ಭರ್ಜರಿ ಜಯ ತಂದುಕೊಟ್ಟರು.

ಕೇವಲ 36 ರನ್​ಗಳಿಗೆ 10 ವಿಕೆಟ್ ಉರುಳಿಸುವ ಮೂಲಕ ಸೀನ್​ ಹೆಡ್​ವೈಟ್ ಅತೀ ಕಡಿಮೆ ರನ್ ನೀಡಿದ ಎಲ್ಲಾ ಹತ್ತು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದರು. ಅಷ್ಟೇ ಅಲ್ಲದೆ ವಿಶ್ವ ಕ್ರಿಕೆಟ್​ನಲ್ಲಿ 10 ವಿಕೆಟ್ ಉರುಳಿಸಿದ ಮೂರನೇ ಬೌಲರ್ ಎನಿಸಿಕೊಂಡರು. ಅಂದಹಾಗೆ ಸೀಸನ್​ ವೈಟ್​ಹೆಡ್ 2016ರಲ್ಲಿ ದಕ್ಷಿಣ ಆಫ್ರಿಕಾ ಪರ 19 ವರ್ಷದೊಳಗಿನವರ ವಿಶ್ವಕಪ್‌ ಕೂಡ ಆಡಿದ್ದರು ಎಂಬುದು ವಿಶೇಷ. ಇದೀಗ ಒಂದೇ ಪಂದ್ಯದಲ್ಲಿ 15 ವಿಕೆಟ್ ಹಾಗೂ 115 ರನ್​ಗಳನ್ನು ಕಲೆಹಾಕುವ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Syed Mushtaq Ali Trophy 2021: ರೋಚಕ ಜಯದೊಂದಿಗೆ ಫೈನಲ್​ಗೆ ಲಗ್ಗೆಯಿಟ್ಟ ಕರ್ನಾಟಕ

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

Published On - 4:05 pm, Sun, 21 November 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್