IND vs SA: ಭಾರತ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡ ಪ್ರಕಟ
South Africa's T20 Squad for India Series: ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ನಡೆಯಲಿರುವ ನಾಲ್ಕು ಪಂದ್ಯಗಳ ಟಿ20 ಸರಣಿಗೆ 16 ಸದಸ್ಯರ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದೆ. ಕಗಿಸೊ ರಬಾಡ ಮತ್ತು ಲುಂಗಿ ಎನ್‌ಗಿಡಿಯವರನ್ನು ತಂಡದಿಂದ ಕೈಬಿಡಲಾಗಿದೆ. ಏಡೆನ್ ಮಾರ್ಕ್ರಾಮ್ ನಾಯಕತ್ವ ವಹಿಸಲಿದ್ದಾರೆ. ಡೇವಿಡ್ ಮಿಲ್ಲರ್ ಮತ್ತು ಹೆನ್ರಿಚ್ ಕ್ಲಾಸೆನ್ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿದೆ.
ನವೆಂಬರ್‌ನಲ್ಲಿ ನಡೆಯಲ್ಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕು ಪಂದ್ಯಗಳ ಟಿ20 ಸರಣಿಗೆ ಕ್ರಿಕೆಟ್ ದಕ್ಷಿಣ ಆಫ್ರಿಕಾ 16 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಸರಣಿಗೆ ಮಂಡಳಿ ಹಲವು ಆಟಗಾರರಿಗೆ ಅವಕಾಶ ನೀಡಿದ್ದು, ಹಲವು ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ. ಆ ಪ್ರಕಾರ ಇತ್ತೀಚೆಗಷ್ಟೇ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಬೌಲರ್ ಎನಿಸಿಕೊಂಡಿದ್ದ ಕಗಿಸೊ ರಬಾಡ ದಕ್ಷಿಣ ಆಫ್ರಿಕಾ ತಂಡಕ್ಕೆ ಆಯ್ಕೆಯಾಗಿಲ್ಲ. ರಬಾಡ ಜೊತೆಗೆ ಅನುಭವಿ ವೇಗಿ ಲುಂಗಿ ಎನ್‌ಗಿಡಿ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ಉಳಿದಂತೆ ಏಡೆನ್ ಮಾರ್ಕ್ರಾಮ್ ತಂಡದ ನಾಯಕತ್ವವನ್ನು ನಿರ್ವಹಿಸಲಿದ್ದು, ಇವರಲ್ಲದೆ ಡೇವಿಡ್ ಮಿಲ್ಲರ್ ಮತ್ತು ಹೆನ್ರಿಚ್ ಕ್ಲಾಸೆನ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಇವರಲ್ಲದೆ ಮಾರ್ಕೊ ಯಾನ್ಸನ್ ಮತ್ತು ಜೆರಾಲ್ಡ್ ಕೊಟ್ಜಿಯಾ ಕೂಡ ವೇಗಿಗಳಾಗಿ ತಂಡಕ್ಕೆ ಸೇರಿಕೊಂಡಿದ್ದಾರೆ.
ಸ್ಟಾರ್ ಆಟಗಾರರಿಗೆ ಅವಕಾಶ
ಟೀಂ ಇಂಡಿಯಾ ವಿರುದ್ಧದ ಸರಣಿಗೆ ದಕ್ಷಿಣ ಆಫ್ರಿಕಾ ಹಲವು ಸ್ಟಾರ್ ಆಟಗಾರರಿಗೆ ಅವಕಾಶ ನೀಡಿದೆ. ಇದರಲ್ಲಿ ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್ ಮತ್ತು ಕೇಶವ್ ಮಹಾರಾಜ್ ಸೇರಿದ್ದಾರೆ. ಮೇಲೆ ಹೇಳಿದಂತೆ ಕಗಿಸೊ ರಬಾಡ ತಂಡದಿಂದ ಹೊರಬಿದ್ದಿದ್ದು, ಅವರಿಗೆ ವಿಶ್ರಾಂತಿ ನೀಡಲಾಗಿದೆ. ರಬಾಡ ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಎರಡೂ ಟೆಸ್ಟ್ ಪಂದ್ಯಗಳಲ್ಲಿ ಅವರು ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಈ ಪ್ರದರ್ಶನವನ್ನು ಗಮನದಲ್ಲಿರಿಸಿಕೊಂಡಿರುವ ಕ್ರಿಕೆಟ್ ದಕ್ಷಿಣ ಆಫ್ರಿಕಾ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ರಬಾಡರನ್ನು ಫಿಟ್ ಆಗಿ ಇರಿಸಲು ನಿರ್ಧರಿಸಿದ್ದು, ಅವರಿಗೆ ವಿಶ್ರಾಂತಿ ನೀಡಿದೆ.
Aiden Markram will lead a strong South Africa lineup for the home T20I series against India 👊#SAvINDhttps://t.co/aAIODe89ag
— ICC (@ICC) October 31, 2024
ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಓಟಿನೆಲ್ ಬಾರ್ಟ್‌ಮನ್, ಜೆರಾಲ್ಡ್ ಕೊಟ್ಜಿಯಾ, ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸನ್, ಹೆನ್ರಿಕ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹ್ಲಾಲಿ ಎಂಪೊಂಗ್ವಾನಾ, ನ್ಕಾಬಾ ಪೀಟರ್, ರಿಯಾನ್ ಸಿಮೆಲಾನೆಟನ್, ಆಂಡಿಲ್ ಸಿಮೆಲೆನ್, ಲುಥೋ ಸಿಪಾಮ್ಲಾ (3ನೇ ಮತ್ತು 4ನೇ ಟಿ20), ಮತ್ತು ಟ್ರಿಸ್ಟಾನ್ ಸ್ಟಬ್ಸ್.
ಟಿ20 ಸರಣಿಗೆ ಟೀಂ ಇಂಡಿಯಾ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಮಣ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷ್‌ದೀಪ್ ಸಿಂಗ್, ವೈಶಾಖ್ ವಿಜಯ್ ಕುಮಾರ್, ಅವೇಶ್ ಖಾನ್, ಯಶ್ ದಯಾಳ್.
ಟಿ20 ಸರಣಿ ವೇಳಾಪಟ್ಟಿ
- ಮೊದಲ ಟಿ20 ಪಂದ್ಯ ನವೆಂಬರ್ 8 ರಂದು ಡರ್ಬನ್‌ನಲ್ಲಿ ನಡೆಯಲಿದೆ.
- ಎರಡನೇ ಟಿ20 ಪಂದ್ಯ ನವೆಂಬರ್ 10 ರಂದು ಪೋರ್ಟ್ ಎಲಿಜಬೆತ್‌ನಲ್ಲಿ ನಡೆಯಲಿದೆ.
- ಮೂರನೇ ಟಿ20 ಪಂದ್ಯ ನವೆಂಬರ್ 13 ರಂದು ಸೆಂಚುರಿಯನ್‌ನಲ್ಲಿ ನಡೆಯಲಿದೆ.
- ನಾಲ್ಕನೇ ಟಿ20 ಪಂದ್ಯ ನವೆಂಬರ್ 15 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:12 pm, Thu, 31 October 24