AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಒದ್ದು ಹೊರಗೆ ಹಾಕಿದ್ದಾರೆ ಅಷ್ಟೇ..!

SA vs NZ: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 12.5 ಚೇಸ್ ಮಾಡುವ ಮೂಲಕ 9 ವಿಕೆಟ್​ಗಳ ಜಯ ಸಾಧಿಸಿದೆ.

ನಮ್ಮನ್ನು ಒದ್ದು ಹೊರಗೆ ಹಾಕಿದ್ದಾರೆ ಅಷ್ಟೇ..!
Shukri Conrad
ಝಾಹಿರ್ ಯೂಸುಫ್
|

Updated on: Mar 05, 2026 | 2:08 PM

Share

T20 World Cup 2026: ಟಿ20 ವಿಶ್ವಕಪ್​ನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ಗೇರಿದ್ದ ಸೌತ್ ಆಫ್ರಿಕಾ ತಂಡವು ನಿರ್ಣಾಯಕ ಪಂದ್ಯದಲ್ಲಿ ಸೋತಿದೆ. ಅದು ಕೂಡ ಹೀನಾಯವಾಗಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 169 ರನ್​ಗಳು ಮಾತ್ರ.

ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಮೂಲಕ ಮೊದಲ ವಿಕೆಟ್​ಗೆ 117 ರನ್​ ಪೇರಿಸಿದ್ದರು. ಅಷ್ಟೇ ಅಲ್ಲದೆ 12.5 ಓವರ್​ಗಳಲ್ಲಿ 173 ರನ್​ ಸಿಡಿಸಿ 9 ವಿಕೆಟ್​ಗಳ ಜಯ ಸಾಧಿಸಿದ್ದರು. ಈ ಗೆಲುವಿನೊಂದಿಗೆ ನ್ಯೂಝಿಲೆಂಡ್ ಫೈನಲ್​ಗೆ ಪ್ರವೇಶಿಸಿದರೆ, ಸೌತ್ ಆಫ್ರಿಕಾ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಇತ್ತ ಟೂರ್ನಿಯಿಂದ ಹೊರಬಿದ್ದ ಬಳಿಕ ನಡೆದ  ಸುದ್ಧಿಗೋಷ್ಠಿಯಲ್ಲಿ ಸೌತ್ ಆಫ್ರಿಕಾ ತಂಡದ ಮುಖ್ಯ ಕೋಚ್ ಶುಕ್ರಿ ಕಾನ್ರಾಡ್ ಕಾಣಿಸಿಕೊಂಡಿದ್ದರು. ಎಂದಿನಂತೆ ಈ ಬಾರಿ ಕೂಡ ‘ಚೋಕರ್ಸ್’ ಹಣೆಪಟ್ಟಿಯ ಪ್ರಶ್ನೆಯನ್ನು ಅವರ ಮುಂದಿಡಲಾಗಿತ್ತು.

ಐಸಿಸಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಸೌತ್ ಆಫ್ರಿಕಾ ತಂಡವು ನಿರ್ಣಾಯಕ ಪಂದ್ಯಗಳಲ್ಲಿ ಸೋತು ಹೊರಬೀಳುವುದು ಸಾಮಾನ್ಯ. ಹೀಗಾಗಿಯೇ ಆಫ್ರಿಕಾ ಪಡೆಯನ್ನು ಚೋಕರ್ಸ್ ಎಂದು ಕರೆಯಲಾಗುತ್ತದೆ. ಇದೀಗ ಮತ್ತೊಮ್ಮೆ ಸೆಮಿಫೈನಲ್​ನಲ್ಲಿ ಮುಗ್ಗರಿಸುವ ಮೂಲಕ ಸೌತ್ ಆಫ್ರಿಕಾ ತಂಡ ಹೊರಬಿದ್ದಿದೆ.

ಇದರೊಂದಿಗೆ ಸೌತ್ ಆಫ್ರಿಕಾ ತಂಡದ ಚೋಕರ್ಸ್ ಹಣೆಪಟ್ಟಿ ಮುಂದುವರೆದಿದೆ. ಆದರೆ ಈ ಬಾರಿಯ ಸೋಲನ್ನು ಚೋಕ್ ಎಂದು ಕರೆಯಲಾಗುವುದಿಲ್ಲ ಎಂದಿದ್ದಾರೆ ಸೌತ್ ಆಫ್ರಿಕಾ ತಂಡದ ಮುಖ್ಯ ಕೋಚ್ ಶುಕ್ರಿ ಕಾನ್ರಾಡ್.

ನ್ಯೂಝಿಲೆಂಡ್ ವಿರುದ್ಧದ ಸೋಲನ್ನು ಚೋಕ್ ಎಂದು ಒಪ್ಪಿಕೊಳ್ಳಲಾಗುವುದಿಲ್ಲ. ಏಕೆಂದರೆ ಇದು ನಮಗೆ ಬಿದ್ದಂತಹ ಏಟು. ನಾವು ಅಷ್ಟೊಂದು ಹೀನಾಯವಾಗಿ ಸೋತಿದ್ದೇವೆ. ನಾವು ಪಂದ್ಯದಲ್ಲಿ ಗೆಲ್ಲುವ ಸಣ್ಣ ಲಕ್ಷಣ ತೋರಿದ್ದರೆ ಮಾತ್ರ ಅದನ್ನು ‘ಚೋಕ್’ ಎನ್ನಬಹುದಿತ್ತು.

ನಮಗೆ ಅಂತಹ ಯಾವುದೇ ಅವಕಾಶ ಇರಲಿಲ್ಲ. ಸೌತ್ ಆಫ್ರಿಕಾದಲ್ಲಿ ನಾವು ಇದಕ್ಕೆ ‘ಮೋರ್ಡ್’ (moered) ಎನ್ನುತ್ತೇವೆ. ಇಂದು ನಮಗೆ ಸರಿಯಾದ ‘ಸ್ನಾಟ್‌ಕ್ಲಾಪ್ಡ್’ (snotklapped) ಆಗಿದೆ. ಅಂದರೆ ಸೌತ್ ಆಫ್ರಿಕಾ ಭಾಷೆಯಲ್ಲಿ ಸರಿಯಾಗಿ ಒದೆ ತಿಂದಿದ್ದೇವೆ, ಒದ್ದು ಹೊರಹಾಕಿದ್ದಾರೆ ಎನ್ನುತ್ತೇವೆ. ಅಂತಹದೊಂದು ಹೀನಾಯ ಸೋಲು ಇದಾಗಿದೆ ಶುಕ್ರಿ ಕಾನ್ರಾಡ್ ಹೇಳಿದ್ದಾರೆ.

ಇದಕ್ಕೂ ಮುನ್ನ ಶುಕ್ರಿ ಕಾನ್ರಾಡ್, ಈ ಬಾರಿ ಸೌತ್ ಆಫ್ರಿಕಾ ತಂಡ ವಿಶ್ವಕಪ್ ಮುಡಿಗೇರಿಸಿಕೊಳ್ಳಲಿದೆ ಎಂದಿದ್ದರು. ಅಲ್ಲದೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಗೆದ್ದ ಬಳಿಕ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ನಮ್ಮ ತವರು ಮೈದಾನವಾಗಿದೆ.

ಇದನ್ನೂ ಓದಿ: RCB ಪರ 3 ವರ್ಷ ಬೆಂಚ್ ಕಾದಿದ್ದ ಫಿನ್ ಅಲೆನ್

ಹೀಗಾಗಿ ಇಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೀಗ ಸೆಮಿಫೈನಲ್ ಪಂದ್ಯದಲ್ಲಿ ಹೀನಾಯವಾಗಿ ಸೋತು ಹೊರಬಿದ್ದಿದ್ದಾರೆ. ಈ ಸೋಲನ್ನು ಶುಕ್ರಿ ಕಾನ್ರಾಡ್ ಸೌತ್ ಆಫ್ರಿಕಾ ತಂಡಕ್ಕೆ ಬಿದ್ದಂತಹ ಪೆಟ್ಟು ಎಂದು ಬಣ್ಣಿಸಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ