IND vs SA: ಸೆಂಚುರಿಯನ್​ನಲ್ಲಿ ಸೌತ್ ಆಫ್ರಿಕಾವೇ ಸ್ಟ್ರಾಂಗ್​, ಆದರೆ…

India vs South Africa: ಸೆಂಚುರಿಯನ್​​ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದ ಮೊದಲ ತಂಡ ಇಂಗ್ಲೆಂಡ್. 2000ರಲ್ಲಿ ನಡೆದ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಇದಾದ ಬಳಿಕ 2014 ರಲ್ಲಿ ಆಸ್ಟ್ರೇಲಿಯಾ ತಂಡವು ಇದೇ ಮೈದಾನದಲ್ಲಿ ಸೌತ್ ಆಫ್ರಿಕಾವನ್ನು 281 ರನ್​ಗಳಿಸಿ ಮಣಿಸಿತ್ತು.

IND vs SA: ಸೆಂಚುರಿಯನ್​ನಲ್ಲಿ ಸೌತ್ ಆಫ್ರಿಕಾವೇ ಸ್ಟ್ರಾಂಗ್​, ಆದರೆ...
South Africa
Follow us
| Updated By: ಝಾಹಿರ್ ಯೂಸುಫ್

Updated on: Dec 25, 2023 | 7:00 AM

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿಯು ಮಂಗಳವಾರದಿಂದ (ಡಿ.26) ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಸೆಂಚುರಿಯನ್​ನಲ್ಲಿರುವ ಸೂಪರ್​ಸ್ಪೋರ್ಟ್​ ಪಾರ್ಕ್​ ಸ್ಟೇಡಿಯಂ ಆತಿಥ್ಯವಹಿಸಲಿದೆ. ವಿಶೇಷ ಎಂದರೆ ಈ ಮೈದಾನವು ಸೌತ್ ಆಫ್ರಿಕಾ ಪಾಲಿಗೆ ಅದೃಷ್ಟ ಗ್ರೌಂಡ್ ಎಂದು ಗುರುತಿಸಿಕೊಂಡಿದೆ.

ಏಕೆಂದರೆ ಈ ಮೈದಾನದಲ್ಲಿ ಸೌತ್ ಆಫ್ರಿಕಾ ತಂಡವು ಇದುವರೆಗೆ 28 ಪಂದ್ಯಗಳನ್ನಾಡಿದೆ. ಈ ವೇಳೆ ಸೋತಿರುವುದು ಕೇವಲ 3 ಬಾರಿ ಮಾತ್ರ. ಅಂದರೆ ಉಳಿದ 22 ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡ ಗೆಲುವು ದಾಖಲಿಸಿದೆ. ಹಾಗೆಯೇ ಮೂರು ಮ್ಯಾಚ್​ಗಳನ್ನು ಡ್ರಾನಲ್ಲಿ ಅಂತ್ಯಗೊಳಿಸಿದೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಲ್ಲೂ ಗೆಲ್ಲುವ ಫೇವರೇಟ್ ಆಗಿ ಸೌತ್ ಆಫ್ರಿಕಾ ಗುರುತಿಸಿಕೊಂಡಿದೆ.

ಆದರೆ ಈ ಬಾರಿ ಸೌತ್ ಆಫ್ರಿಕಾ ಮುಖಾಮುಖಿಯಾಗುತ್ತಿರುವುದು ಬಲಿಷ್ಠ ಭಾರತ ತಂಡದ ವಿರುದ್ಧ ಎಂಬುದು ಇಲ್ಲಿ ಉಲ್ಲೇಖಾರ್ಹ. ಏಕೆಂದರೆ ಇದೇ ಮೈದಾನದಲ್ಲಿ ಸೌತ್ ಆಫ್ರಿಕಾ ತಂಡವನ್ನು ಸೋಲಿಸಿದ ಮೂರು ತಂಡಗಳಲ್ಲಿ ಒಂದು ಭಾರತ.

ಸೆಂಚುರಿಯನ್​​ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದ ಮೊದಲ ತಂಡ ಇಂಗ್ಲೆಂಡ್. 2000ರಲ್ಲಿ ನಡೆದ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಇದಾದ ಬಳಿಕ 2014 ರಲ್ಲಿ ಆಸ್ಟ್ರೇಲಿಯಾ ತಂಡವು ಇದೇ ಮೈದಾನದಲ್ಲಿ ಸೌತ್ ಆಫ್ರಿಕಾವನ್ನು 281 ರನ್​ಗಳಿಸಿ ಮಣಿಸಿತ್ತು.

ಈ ಎರಡು ಸೋಲುಗಳ ಬಳಿಕ ಈ ಮೈದಾನದಲ್ಲಿ ಸೌತ್ ಆಫ್ರಿಕಾ ಪಾರುಪತ್ಯ ಮೆರೆಯುತ್ತಾ ಬಂದಿದೆ. ಆದರೆ 2021 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ 113 ರನ್​ಗಳಿಂದ ಆಫ್ರಿಕಾ ಪಡೆಯನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸಿತ್ತು.

ಹಾಗೆಯೇ ಈ ಮೈದಾನದಲ್ಲಿ ನಡೆದ ಕೊನೆಯ 9 ಟೆಸ್ಟ್ ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡ 8 ರಲ್ಲಿ ಜಯ ಸಾಧಿಸಿದೆ. ಇನ್ನು ಸೋತಿರುವುದು ಟೀಮ್ ಇಂಡಿಯಾ ವಿರುದ್ಧ ಮಾತ್ರ.  ಹೀಗಾಗಿಯೇ ಸೆಂಚುರಿಯನ್ ಮೈದಾನದಲ್ಲಿ ಸೌತ್ ಆಫ್ರಿಕಾ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡರೂ ಈ ಬಾರಿ ಕಣಕ್ಕಿಳಿಯುತ್ತಿರುವುದು ಭಾರತ ತಂಡದ ವಿರುದ್ಧ ಎಂಬುದು ಇಲ್ಲಿ ಮುಖ್ಯವಾಗುತ್ತದೆ. ಹೀಗಾಗಿ ಈ ಪಂದ್ಯದಲ್ಲೂ ಅಚ್ಚರಿಯ ಫಲಿತಾಂಶವನ್ನು ನಿರೀಕ್ಷಿಸಬಹುದು.

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.

ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ನಾಂಡ್ರೆ ಬರ್ಗರ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್ನೆ, ಜೆರಾಲ್ಡ್ ಕೊಯೆಟ್ಝಿ, ಟೋನಿ ಡಿ ಝೋರ್ಝಿ, ಡೀನ್ ಎಲ್ಗರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಕೀಗನ್ ಪೀಟರ್ಸನ್.

ಇದನ್ನೂ ಓದಿ: IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!

ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ:

  • ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
  • ಜನವರಿ 3 ರಿಂದ- ಎರಡನೇ ಟೆಸ್ಟ್ ಪಂದ್ಯ (ಕೇಪ್​ಟೌನ್).
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ