ಸೌತ್ ಆಫ್ರಿಕಾ ಟಿ20 ತಂಡ ಪ್ರಕಟ: 18 ವರ್ಷದ ಯುವ ವೇಗಿ ಆಯ್ಕೆ

|

Updated on: Aug 15, 2024 | 8:07 PM

2024ರ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿತ್ತು.

ಸೌತ್ ಆಫ್ರಿಕಾ ಟಿ20 ತಂಡ ಪ್ರಕಟ: 18 ವರ್ಷದ ಯುವ ವೇಗಿ ಆಯ್ಕೆ
South Africa
Follow us on

ಟಿ20 ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಸೋತಿದ್ದ ಸೌತ್ ಆಫ್ರಿಕಾ ತಂಡವು ಇದೀಗ ಮತ್ತೆ ಚುಟುಕು ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಆಗಸ್ಟ್ 23 ರಿಂದ ಶುರುವಾಗಲಿರುವ ವೆಸ್ಟ್ ಇಂಡೀಸ್​ ವಿರುದ್ಧದ ಸರಣಿಗಾಗಿ ಸೌತ್ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ಹಲವು ಆಟಗಾರರಿಲ್ಲ ಎಂಬುದು ವಿಶೇಷ.

ಅಂದರೆ ಕೆಲಸದ ಒತ್ತಡ ಮತ್ತು ವಿಶ್ರಾಂತಿಯ ಸಲುವಾಗಿ ಅನೇಕ ಆಟಗಾರರು ಸೌತ್ ಆಫ್ರಿಕಾ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ವಿಂಡೀಸ್ ವಿರುದ್ಧದ ಸರಣಿಯಲ್ಲಿ ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್, ಕ್ವಿಂಟನ್ ಡಿಕಾಕ್, ಡೇವಿಡ್ ಮಿಲ್ಲರ್ ಸೇರಿದಂತೆ ಕೆಲ ಆಟಗಾರರು ಅಲಭ್ಯರಾಗಿದ್ದಾರೆ.

ಇನ್ನು ಈ ಸರಣಿಯಿಂದ ವೇಗದ ಬೌಲರ್ ಕಗಿಸೊ ರಬಾಡ ಸಹ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ 18 ವರ್ಷದ ಯುವ ವೇಗಿ ಕ್ವೆನಾ ಮಫಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಆಲ್ ರೌಂಡರ್ ಜೇಸನ್ ಸ್ಮಿತ್ ಅವರನ್ನು ಸಹ ವೆಸ್ಟ್ ಇಂಡೀಸ್‌ ವಿರುದ್ಧದ ಮೂರು ಪಂದ್ಯಗಳ ಸರಣಿಗಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಸೌತ್ ಆಫ್ರಿಕಾ ಟಿ20 ತಂಡ ಈ ಕೆಳಗಿನಂತಿದೆ…

ಸೌತ್ ಆಫ್ರಿಕಾ ಟಿ20 ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮ್ಯಾನ್, ನಾಂಡ್ರೆ ಬರ್ಗರ್, ಡೊನೊವನ್ ಫೆರೇರಾ, ಜಾರ್ನ್ ಫೋರ್ಚುಯಿನ್, ರೀಝ ಹೆಂಡ್ರಿಕ್ಸ್, ಪ್ಯಾಟ್ರಿಕ್ ಕ್ರುಗರ್, ಕ್ವೆನಾ ಮಫಕಾ, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ರಿಯಾನ್ ರಿಕೆಲ್ಟನ್, ಜೇಸನ್ ಸ್ಮಿತ್, ಟ್ರಿಸ್ಟನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಲಿಝಾಡ್ ವಿಲಿಯಮ್ಸ್.

ಇದನ್ನೂ ಓದಿ: ICC Rankings: ಐಸಿಸಿ ರ‍್ಯಾಕಿಂಗ್ ಪ್ರಕಟ: ಟಾಪ್-10 ನಲ್ಲಿ 6 ಭಾರತೀಯರು

 

ಸೌತ್ ಆಫ್ರಿಕಾ-ವೆಸ್ಟ್ ಇಂಡೀಸ್ ಸರಣಿ ಯಾವಾಗ?

ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯು ಆಗಸ್ಟ್ 23 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಸೌತ್ ಆಫ್ರಿಕಾ ತಂಡವು ಒಟ್ಟು 3 ಪಂದ್ಯಗಳನ್ನಾಡಲಿದೆ. ಮೊದಲ ಪಂದ್ಯವು ಆಗಸ್ಟ್ 23 ರಂದು ನಡೆದರೆ, 2ನೇ ಪಂದ್ಯವು ಆಗಸ್ಟ್ 25 ರಂದು ಜರುಗಲಿದೆ. ಇನ್ನು ಮೂರನೇ ಪಂದ್ಯವು ಆಗಸ್ಟ್ 27 ರಂದು ನಡೆಯಲಿದೆ. ಈ ಎಲ್ಲಾ ಪಂದ್ಯಗಳಿಗೆ ಟ್ರಿನಿಡಾಡ್ – ಟೊಬಾಗೊದಲ್ಲಿರುವ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನ ಆತಿಥ್ಯವಹಿಸಲಿದೆ.

 

Published On - 1:29 pm, Thu, 15 August 24