Champions Trophy 2025: ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಹೋಗುತ್ತಾ ಭಾರತ? ಸ್ಪಷ್ಟನೆ ನೀಡಿದ ಕ್ರೀಡಾ ಸಚಿವರು

Champions Trophy 2025: ಎಲ್ಲಿಯವರೆಗೆ ಪಾಕ್ ತನ್ನ ಈ ರೀತಿಯ ಭಯೋತ್ಪಾದನ ಚಟುವಟಿಕೆಗಳನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೆ ನಾವು ಕ್ರಿಕೆಟ್ ಪಂದ್ಯಗಳನ್ನು ಆಡಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ. ಈ ಬಗ್ಗೆ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಳ್ಳುತ್ತದೆ, ಆದರೆ ನನ್ನ ಪ್ರಕಾರ ಭಾರತವು ಪಂದ್ಯಾವಳಿಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ಹೋಗಬಾರದು.

Champions Trophy 2025: ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಹೋಗುತ್ತಾ ಭಾರತ? ಸ್ಪಷ್ಟನೆ ನೀಡಿದ ಕ್ರೀಡಾ ಸಚಿವರು
ಅನುರಾಗ್ ಠಾಕೂರ್, ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Apr 05, 2024 | 5:50 PM

ಮುಂದಿನ ವರ್ಷ ಅಂದರೆ 2025 ರಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ (Champions Trophy 2025) ಪಾಕಿಸ್ತಾನ ಆತಿಥ್ಯ ವಹಿಸಲಿದೆ. ಹೀಗಾಗಿ ಈ ಹೈವೋಲ್ಟೇಜ್ ಟೂರ್ನಿಯನ್ನು ಆಡಲು ಭಾರತ ತಂಡ (Team India) ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ ಎಂಬ ಚರ್ಚೆ ಈಗಾಗಲೇ ನಡೆಯುತ್ತಿದೆ. ಇದಕ್ಕೂ ಮೊದಲು 2023 ರ ಏಷ್ಯಾಕಪ್ (Asia Cup 2023) ಆಯೋಜಕತ್ವವನ್ನು ಪಾಕಿಸ್ತಾನ ಪಡೆದುಕೊಂಡಿತ್ತು. ಆದರೆ ಭಾರತ ಸರ್ಕಾರ, ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿತ್ತು. ಈ ಕಾರಣಕ್ಕಾಗಿ ಭಾರತದ ಎಲ್ಲಾ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು. ಇಂತಹ ಪರಿಸ್ಥಿತಿಯಲ್ಲಿ ಇದೀಗ 2025ರ ಚಾಂಪಿಯನ್ಸ್ ಟ್ರೋಫಿ ಕೂಡ ಪಾಕಿಸ್ತಾನದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮತ್ತೊಮ್ಮೆ ಪಾಕಿಸ್ತಾನಕ್ಕೆ ಹೋಗಿ ಪಂದ್ಯ ಆಡಲು ನಿರಾಕರಿಸುತ್ತಿದೆ. ಇದೀಗ ಈ ವಿಷಯಕ್ಕೆ ಸಂಬಂದಪಟ್ಟಂತೆ, ಕೇಂದ್ರ ಕೀಡಾ ಸಚಿವ ಅನುರಾಗ್ ಠಾಕೂರ್ (Anurag Thakur) ಮಹತ್ವದ ಹೇಳಿಕೆ ನೀಡಿದ್ದಾರೆ.

ಅನುರಾಗ್ ಠಾಕೂರ್ ಹೇಳಿದ್ದೇನು?

ಚಾಂಪಿಯನ್ಸ್ ಟ್ರೋಫಿ ಆಡಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲಿದೆಯೇ ಎಂದು ಕಾರ್ಯಕ್ರಮವೊಂದರಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್, ಪಾಕಿಸ್ತಾನವು ಭಾರತದಲ್ಲಿ ಭಯೋತ್ಪಾದಕರನ್ನು ಉತ್ತೇಜಿಸಲು ಬಯಸುತ್ತದೆ. ಎಲ್ಲಿಯವರೆಗೆ ಪಾಕ್ ತನ್ನ ಈ ರೀತಿಯ ಭಯೋತ್ಪಾದನ ಚಟುವಟಿಕೆಗಳನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೆ ನಾವು ಕ್ರಿಕೆಟ್ ಪಂದ್ಯಗಳನ್ನು ಆಡಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ. ಈ ಬಗ್ಗೆ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಳ್ಳುತ್ತದೆ, ಆದರೆ ನನ್ನ ಪ್ರಕಾರ ಭಾರತವು ಪಂದ್ಯಾವಳಿಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ಹೋಗಬಾರದು. ಪಾಕಿಸ್ತಾನವು ತನ್ನ ಭಯೋತ್ಪಾದಕ ಚಟುವಟಿಕೆಗಳನ್ನು ತ್ಯಜಿಸಿದರೆ ಮಾತ್ರ ಭಾರತ ತಂಡವು ಪಾಕಿಸ್ತಾನಕ್ಕೆ ಕ್ರಿಕೆಟ್ ಆಡಲು ಹೋಗಲಿದೆ ಅಥವಾ ಐಸಿಸಿ ಪಂದ್ಯಾವಳಿಗಳನ್ನು ಹೊರತುಪಡಿಸಿ, ಎರಡು ತಂಡಗಳ ನಡುವೆ ದ್ವಿಪಕ್ಷೀಯ ಸರಣಿಗಳನ್ನು ಸಹ ಆಡಲಾಗುತ್ತದೆ ಎಂದು ಅವರು ಹೇಳಿದರು.

ICC: 60 ಸೆಕೆಂಡ್ ಗಡುವು; ಬೌಲರ್​ಗಳಿಗೆ ಸಂಕಷ್ಟ ತಂದ ಐಸಿಸಿ ಹೊಸ ನಿಯಮ..!

ಐಸಿಸಿಗೆ ದೂರು ನೀಡಿದ ಪಾಕಿಸ್ತಾನ

ವಾಸ್ತವವಾಗಿ ಕಳೆದ ವರ್ಷ ನಡೆದ ಏಷ್ಯಾಕಪ್ ಪಂದ್ಯಾವಳಿ ಆಡಲು ಭಾರತ ತಂಡವು ಪಾಕಿಸ್ತಾನಕ್ಕೆ ಹೋಗದಿದ್ದಾಗ, ಪಿಸಿಬಿ ಅದರ ಬಗ್ಗೆ ತುಂಬಾ ಅಸಮಾಧಾನಗೊಂಡಿತ್ತು. ಆ ಬಗ್ಗೆ ಎಸಿಎಗೆ ದೂರು ಸಹ ಸಲ್ಲಿಸಿತ್ತು. ಇದೀಗ ಚಾಂಪಿಯನ್ಸ್ ಟ್ರೋಫಿ ವಿಚಾರದಲ್ಲೂ ಪಾಕಿಸ್ತಾನ ಭಾರತದ ನಡೆಯ ವಿರುದ್ಧ ಐಸಿಸಿಗೂ ದೂರು ನೀಡಿದೆ. ಭಾರತ ತಂಡದ ವಿರುದ್ಧ ಐಸಿಸಿಗೆ ದೂರು ನೀಡಿರುವ ಪಿಸಿಬಿ, ಪಾಕಿಸ್ತಾನಕ್ಕೆ ಪಂದ್ಯ ಆಡಲು ಬರಬೇಕು, ಬರದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ. ಈ ಕುರಿತು ಸಾಕಷ್ಟು ವಿವಾದಗಳು ನಡೆದಿದ್ದವು. ಹೀಗಿರುವಾಗ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಭಾರತ ಪಾಕಿಸ್ತಾನಕ್ಕೆ ಹೋಗುತ್ತದೋ ಇಲ್ಲವೋ ಎಂಬ ಪ್ರಶ್ನೆಯೂ ಅಭಿಮಾನಿಗಳಿಗೆ ಕೇಳಿ ಬರುತ್ತಿದ್ದು, ಇದೀಗ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಕ್ರೀಡಾ ಸಚಿವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ