ದುಲೀಪ್ ಟ್ರೋಫಿ 2ನೇ ಸುತ್ತಿನ ಪಂದ್ಯಗಳಿಗೆ ನಾಲ್ಕು ತಂಡಗಳನ್ನು ಪ್ರಕಟಿಸಲಾಗಿದೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದಿದ್ದ ಕೆಲ ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದು, ಹೀಗಾಗಿ ಬದಲಿ ಆಟಗಾರರೊಂದಿಗೆ ಪರಿಷ್ಕೃತ ತಂಡಗಳನ್ನು ಘೋಷಿಸಲಾಗಿದೆ. ಭಾರತ ಎ ತಂಡದ ನಾಯಕ ಶುಭ್ಮನ್ ಗಿಲ್, ಕೆಎಲ್ ರಾಹುಲ್, ಧ್ರುವ್ ಜುರೇಲ್, ಕುಲ್ದೀಪ್ ಯಾದವ್ ಮತ್ತು ಆಕಾಶ್ ದೀಪ್ ಅವರು ಬಾಂಗ್ಲಾದೇಶ್ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾ ಸ್ಥಾನ ಪಡೆದಿದ್ದಾರೆ. ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಗಿಲ್ ಅನುಪಸ್ಥಿತಿಯಲ್ಲಿ ಭಾರತ ಎ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ.
ಇಲ್ಲಿ ಶುಭ್ಮನ್ ಗಿಲ್ ಬದಲಿಗೆ ಪ್ರಥಮ್ ಸಿಂಗ್ (ರೈಲ್ವೇಸ್), ಕೆಎಲ್ ರಾಹುಲ್ ಬದಲಿಗೆ ಅಕ್ಷಯ್ ವಾಡ್ಕರ್ (ವಿದರ್ಭ) ಮತ್ತು ಜುರೇಲ್‌ಗೆ ಬದಲಿಯಾಗಿ ಶೇಖ್ ರಶೀದ್ (ಆಂಧ್ರ ಪ್ರದೇಶ) ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗೆಯೇ ಸ್ಪಿನ್ನರ್ ಕುಲ್ದೀಪ್ ಯಾದವ್ ಬದಲಿಗೆ ಎಡಗೈ ಸ್ಪಿನ್ನರ್ ಶಮ್ಸ್ ಮುಲಾನಿ (ಮುಂಬೈ) ಹಾಗೂ ಆಕಾಶ್ ದೀಪ್ ಸ್ಥಾನದಲ್ಲಿ ಉತ್ತರ ಪ್ರದೇಶದ ಆಕಿಬ್ ಖಾನ್ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಬಿ ತಂಡದಿಂದ ಟೀಮ್ ಇಂಡಿಯಾಗೆ ಆಯ್ಕೆಯಾಗಿರುವ ಯಶಸ್ವಿ ಜೈಸ್ವಾಲ್ ಮತ್ತು ರಿಷಭ್ ಪಂತ್ ಸ್ಥಾನಗಳಲ್ಲಿ ಸುಯಶ್ ಪ್ರಭುದೇಸಾಯಿ ಮತ್ತು ರಿಂಕು ಸಿಂಗ್ ದುಲೀಪ್ ಟ್ರೋಫಿಗೆ ಆಯ್ಕೆಯಾಗಿದ್ದಾರೆ. ಅದೇ ರೀತಿ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿರುವ ವೇಗದ ಬೌಲರ್ ಯಶ್ ದಯಾಳ್ ಅವರ ಬದಲಿಗೆ ಹಿಮಾಂಶು ಮಂತ್ರಿ (ಮಧ್ಯ ಪ್ರದೇಶ) ಅವಕಾಶ ಪಡೆದಿದ್ದಾರೆ.
ಅಕ್ಷರ್ ಪಟೇಲ್ ಅವರು ಭಾರತ ಡಿ ತಂಡದಿಂದ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದು, ಅವರ ಸ್ಥಾನದಲ್ಲಿ ನಿಶಾಂತ್ ಸಿಂಧು (ಹರಿಯಾಣ) ಅವರನ್ನು 2ನೇ ಸುತ್ತಿನ ಪಂದ್ಯಗಳಿಗೆ ಆಯ್ಕೆ ಮಾಡಲಾಗಿದೆ. ಇನ್ನು ತುಷಾರ್ ದೇಶಪಾಂಡೆ ಎರಡನೇ ಸುತ್ತಿನಿಂದ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಭಾರತ ಎ ತಂಡದಲ್ಲಿ ವಿದ್ವತ್ ಕಾವೇರಪ್ಪ ಕಣಕ್ಕಿಳಿಯಲಿದ್ದಾರೆ. ಇದಾಗ್ಯೂ ಭಾರತ ಸಿ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಭಾರತ A ತಂಡ: ಮಯಾಂಕ್ ಅಗರ್ವಾಲ್ (ನಾಯಕ), ರಿಯಾನ್ ಪರಾಗ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ಕುಮಾರ್ ಕುಶಾಗ್ರಾ, ಶಾಶ್ವತ್ ರಾವತ್, ಪ್ರಥಮ್ ಸಿಂಗ್, ಅಕ್ಷಯ್ ವಾಡ್ಕರ್, ಶೇಖ್ ರಶೀದ್, ಶಮ್ಸ್ ಮುಲಾನಿ, ಆಕಿಬ್ ಖಾನ್.
ಭಾರತ B ತಂಡ: ಅಭಿಮನ್ಯು ಈಶ್ವರನ್ (ನಾಯಕ), ಸರ್ಫರಾಝ್ ಖಾನ್, ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ, ಎನ್ ಜಗದೀಸನ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ರಿಂಕು ಸಿಂಗ್, ಹಿಮಾಂಶು ಮಂತ್ರಿ.
ಭಾರತ C ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಾಂಡೆ , ಸಂದೀಪ್ ವಾರಿಯರ್, ಗೌರವ್ ಯಾದವ್.
ಇದನ್ನೂ ಓದಿ: CSK ಪರ ಆಡಬೇಕು… RCB ಆಟಗಾರನ ಹೇಳಿಕೆ..!
ಭಾರತ D ತಂಡ: ಶ್ರೇಯಸ್ ಲೈಯರ್ (ನಾಯಕ), ಅಥರ್ವ ತೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ರಿಕಿ ಭುಯಿ, ಸರನ್ಶ್ ಜೈನ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ಆಕಾಶ್ ಸೆಂಗುಪ್ತ, ಕೆಎಸ್ ಭರತ್ (ವಿಕೆಟ್ ಕೀಪರ್), ಸೌರಭ್ ಕುಮಾರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿಶಾಂತ್ ಸಿಂಧು, ವಿದ್ವತ್ ಕಾವೇರಪ್ಪ.
Published On - 7:32 am, Wed, 11 September 24