AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RCB: 1500 ರನ್​ಗಳ ರಾಶಿ ಹಾಕಿದ ಸನ್‌ರೈಸರ್ಸ್ ತ್ರಿಮೂರ್ತಿಗಳು

SRH IPL 2026: ಪ್ರಸಕ್ತ ಐಪಿಎಲ್ ಸೀಸನ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸೆನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಮೂವರು ತಲಾ 500+ ರನ್ ಗಳಿಸುವ ಮೂಲಕ IPL ಇತಿಹಾಸದಲ್ಲಿ ಒಂದೇ ತಂಡದ ಮೂವರು ಆಟಗಾರರು ಈ ಸಾಧನೆ ಮಾಡಿದ ದಾಖಲೆ ಬರೆದಿದ್ದಾರೆ. ಇವರು ಆರೆಂಜ್ ಕ್ಯಾಪ್ ಸ್ಪರ್ಧೆಯಲ್ಲೂ ಇದ್ದು, SRH ಪ್ಲೇಆಫ್ ಯಶಸ್ಸಿಗೆ ಪ್ರಮುಖ ಕಾರಣರಾಗಿದ್ದಾರೆ.

SRH vs RCB: 1500 ರನ್​ಗಳ ರಾಶಿ ಹಾಕಿದ ಸನ್‌ರೈಸರ್ಸ್ ತ್ರಿಮೂರ್ತಿಗಳು
Srh
ಪೃಥ್ವಿಶಂಕರ
|

Updated on:May 22, 2026 | 9:51 PM

Share

ಪ್ರತಿ ಬಾರಿಯಂತೆ ಈ ಐಪಿಎಲ್​ನಲ್ಲಿಯೂ (IPL 2026) ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಬ್ಯಾಟಿಂಗ್ ಅಬ್ಬರದಿಂದ ಕೂಡಿದೆ. ತಂಡವು ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇದಕ್ಕೆ ಹೆಚ್ಚಿನ ಕಾರಣ ತಂಡದ ಮೂವರು ಆಟಗಾರರಾದ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರ ಅತ್ಯುತ್ತಮ ಫಾರ್ಮ್. ಈ ಸೀಸನ್​ನಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿರುವ ಈ ಜೋಡಿ ರನ್​ಗಳ ರಾಶಿ ಹಾಕಿದೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ತಮ್ಮ ಅಂತಿಮ ಲೀಗ್ ಪಂದ್ಯದಲ್ಲಿಯೂ ಸಹ, ಈ ಮೂವರೂ 50 ಕ್ಕೂ ಹೆಚ್ಚು ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ದಾಖಲೆಯನ್ನು ಸೃಷ್ಟಿಸಿದೆ.

ಇತಿಹಾಸ ಸೃಷ್ಟಿಸಿದ SRH ತ್ರಿಮೂರ್ತಿಗಳು

ಈ ಮೂವರು ಆಟಗಾರರು ಪ್ರಸಕ್ತ ಆವೃತ್ತಿಯಲ್ಲಿ 1500 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅಂದರೆ ಈ ಮೂವರು ಆಟಗಾರರು ತಲಾ 500 ರನ್‌ಗಳ ಗಡಿ ದಾಟಿದ್ದಾರೆ. ಅಭಿಷೇಕ್ ಶರ್ಮಾ ಮತ್ತು ಹೆನ್ರಿಕ್ ಕ್ಲಾಸೆನ್ 550 ಕ್ಕೂ ಹೆಚ್ಚು ರನ್ ಗಳಿಸಿದರೆ, ಇಶಾನ್ ಕಿಶನ್ ಕೂಡ 500 ರನ್‌ಗಳ ಗಡಿ ದಾಟಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಒಂದೇ ತಂಡದ ಮೂವರು ಆಟಗಾರರು ಒಂದೇ ಆವೃತ್ತಿಯಲ್ಲಿ 500+ ರನ್ ಗಳಿಸಿದ್ದು ದಾಖಲೆಯಾಗಿದೆ. ಇದಕ್ಕೂ ಮೊದಲು, ಗುಜರಾತ್ ಟೈಟಾನ್ಸ್ ತಂಡದ ತ್ರಿಮೂರ್ತಿಗಳಾದ ಶುಭ್ಮನ್ ಗಿಲ್, ಸಾಯಿ ಸುದರ್ಶನ್ ಮತ್ತು ಜೋಸ್ ಬಟ್ಲರ್ 2025 ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ್ದರು.

ಆರೆಂಜ್ ಕ್ಯಾಪ್ ಸ್ಪರ್ಧೆಯಲ್ಲಿ ಮೂವರು

ಈ ಸೀಸನ್​ನಲ್ಲಿ ಈ ಮೂವರು ಆಟಗಾರರು ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದಾರೆ. ಹೆನ್ರಿಕ್ ಕ್ಲಾಸೆನ್ ಆಡಿರುವ 14 ಇನ್ನಿಂಗ್ಸ್‌ಗಳಲ್ಲಿ 606 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇತ್ತ ಅಭಿಷೇಕ್ ಶರ್ಮಾ ಆಡಿರುವ 14 ಇನ್ನಿಂಗ್ಸ್‌ಗಳಲ್ಲಿ 563 ರನ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಇಶಾನ್ ಕಿಶನ್ ಕೂಡ ಆಡಿರುವ 14 ಇನ್ನಿಂಗ್ಸ್‌ಗಳಲ್ಲಿ 556 ರನ್‌ಗಳೊಂದಿಗೆ ಪ್ರಸ್ತುತ ಏಳನೇ ಸ್ಥಾನದಲ್ಲಿದ್ದಾರೆ.

SRH vs RCB IPL 2026 Live Score: ಆರ್​​ಸಿಬಿ ಬ್ಯಾಟಿಂಗ್ ಆರಂಭ

ಈ ಮೂವರು ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್‌ಮನ್‌ಗಳು ಇಡೀ ಸೀಸನ್ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅಭಿಷೇಕ್ ಶರ್ಮಾ ಅವರ ಸ್ಫೋಟಕ ಆರಂಭಿಕ ಇನ್ನಿಂಗ್ಸ್, ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್ ಅವರ ಸ್ಥಿರತೆ ಮತ್ತು ಹೆನ್ರಿಚ್ ಕ್ಲಾಸೆನ್ ಅವರ ಫೈನಲ್ ಟಚ್ ತಂಡದ ಗೆಲುವಿಗೆ ಭದ್ರ ಬುನಾದಿ ಒದಗಿಸಿವೆ. ಇದೀಗ ಪ್ಲೇಆಫ್‌ನಲ್ಲಿ ತಮ್ಮ ಉತ್ತಮ ಫಾರ್ಮ್​ ಅನ್ನು ಮುಂದುವರೆಸಲು ಈ ಮೂವರು ಸಜ್ಜಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 pm, Fri, 22 May 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ