IPL 2025: ಐಪಿಎಲ್ ಆರಂಭಕ್ಕೂ ಮುನ್ನವೇ SRH ಬಲಿಷ್ಠ ಪ್ಲೇಯಿಂಗ್ 11 ರೆಡಿ
IPL 2025 SRH: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ 2ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮಾರ್ಚ್ 23 ರಂದು ಹೈದರಾಬಾದ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ SRH ತಂಡವು ಭರ್ಜರಿ ಅಭ್ಯಾಸದಲ್ಲಿ ನಿರತಾಗಿದ್ದಾರೆ. ಅದು ಸಹ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ಕೆಲವೇ ಕೆಲವು ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ಎಲ್ಲಾ ತಂಡಗಳು ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿವೆ. ಈ ಅಭ್ಯಾಸದ ನಡುವೆಯೇ ಸನ್ರೈಸರ್ಸ್ ಹೈದರಾಬಾದ್ ತಂಡ ತನ್ನ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಅಂದರೆ ಈ ಬಾರಿಯ ಐಪಿಎಲ್ನ ಮೊದಲ ಪಂದ್ಯದಲ್ಲಿ ಯಾರೆಲ್ಲಾ ಕಣಕ್ಕಿಳಿಯಬೇಕೆಂಬ ರೂಪುರೇಷೆಯೊಂದಿಗೆ ಎಸ್ಆರ್ಹೆಚ್ ಕಠಿಣ ಅಭ್ಯಾಸದಲ್ಲಿ ನಿರತವಾಗಿದೆ.
ಅದರಂತೆ ಈ ಬಾರಿ ಕೂಡ ಸನ್ರೈಸರ್ಸ್ ಹೈದರಾಬಾದ್ ಪರ ಆರಂಭಿಕರಾಗಿ ಸ್ಪೋಟಕ ದಾಂಡಿಗರಾದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ಅವರೇ ವಿಕೆಟ್ ಕೀಪಿಂಗ್ ಸಹ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ವಿಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ಯುವ ಆಲ್ರೌಂಡರ್ ಅನಿಕೇತ್ ವರ್ಮಾ ಅವರನ್ನು ಕಣಕ್ಕಿಳಿಸಲಿದ್ದಾರೆ.
ಏಳನೇ ಕ್ರಮಾಂಕದಲ್ಲಿ ಫಿನಿಶರ್ ಪಾತ್ರದಲ್ಲಿ ಕರ್ನಾಟಕದ ಬ್ಯಾಟರ್ ಅಭಿನವ್ ಮನೋಹರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವೇಗಿಗಳಾಗಿ ಪ್ಯಾಟ್ ಕಮಿನ್ಸ್, ಮೊಹಮ್ಮದ್ ಶಮಿ ಹಾಗೂ ಹರ್ಷಲ್ ಪಟೇಲ್ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಇವರೊಂದಿಗೆ ಸ್ಪಿನ್ನರ್ ಆಗಿ ಆ್ಯಡಂ ಝಂಪಾಗೆ ಚಾನ್ಸ್ ನೀಡಲಿದ್ದಾರೆ. ಅದರಂತೆ ಸನ್ರೈಸರ್ಸ್ ಹೈದರಾಬಾದ್ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ಟ್ರಾವಿಸ್ ಹೆಡ್
- ಅಭಿಷೇಕ್ ಶರ್ಮಾ
- ಇಶಾನ್ ಕಿಶನ್ (ವಿಕೆಟ್ ಕೀಪರ್)
- ನಿತೀಶ್ ಕುಮಾರ್ ರೆಡ್ಡಿ
- ಹೆನ್ರಿಕ್ ಕ್ಲಾಸೆನ್
- ಅನಿಕೇತ್ ವರ್ಮಾ
- ಅಭಿನವ್ ಮನೋಹರ್
- ಪ್ಯಾಟ್ ಕಮಿನ್ಸ್
- ಹರ್ಷಲ್ ಪಟೇಲ್
- ಮೊಹಮ್ಮದ್ ಶಮಿ
- ಆ್ಯಡಂ ಝಂಪಾ
ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್ ನ್ಯೂಸ್