IPL 2021, SRH: ಪಂದ್ಯ ನಡೆಯುವುದು ಖಚಿತ: SRH ತಂಡದಲ್ಲಿ 2 ಪ್ರಮುಖ ಬದಲಾವಣೆ

IPL 2021: ಈಗಾಗಲೇ ದ್ವಿತಿಯಾರ್ಧದಿಂದ ಎಸ್​ಆರ್​ಹೆಚ್​ ಓಪನರ್ ಜಾನಿ ಬೈರ್​ಸ್ಟೋ ಹೊರಗುಳಿದಿದ್ದಾರೆ. ಇದೀಗ ತಂಡದ ಇಬ್ಬರು ಆಟಗಾರರು ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತ.

IPL 2021, SRH: ಪಂದ್ಯ ನಡೆಯುವುದು ಖಚಿತ: SRH ತಂಡದಲ್ಲಿ 2 ಪ್ರಮುಖ ಬದಲಾವಣೆ
SRH
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 22, 2021 | 4:20 PM

IPL 2021 SRH vs DC: ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧದ ಪಂದ್ಯಕ್ಕೂ ಮುನ್ನ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಆಟಗಾರನಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ವೇಗದ ಬೌಲರ್ ಟಿ ನಟರಾಜನ್ (T. Natarajan) ಆರ್​ಟಿ ಪಿಸಿಆರ್ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಆಗಿರುವುದು ಕಂಡು ಬಂದಿದೆ. ಇದೀಗ ನಟರಾಜನ್​ ಅವರನ್ನು ತಂಡದ ಉಳಿದ ಆಟಗಾರರಿಂದ ಪತ್ಯೇಕವಾಗಿ ಇರಿಸಲಾಗಿದ್ದು, ಹಾಗೆಯೇ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಹೈದರಾಬಾದ್‌ನ ಆರು ಸದಸ್ಯರನ್ನು ಕೂಡ ಪ್ರತ್ಯೇಕವಾಗಿ ಇರಿಸಲಾಗಿದೆ.

ನಟರಾಜನ್ ಅಲ್ಲದೆ ಆಲ್​ರೌಂಡರ್ ವಿಜಯ್ ಶಂಕರ್, ತಂಡದ ಮ್ಯಾನೇಜರ್ ವಿಜಯ್ ಕುಮಾರ್, ಫಿಸಿಯೋಥೆರಪಿಸ್ಟ್ ಶ್ಯಾಮ್ ಸುಂದರ್​, ಡಾ ಅಂಜನಾ ವನನ್, ಲಾಜಿಸ್ಟಿಕ್ಸ್ ಮ್ಯಾನೇಜರ್ ತುಷಾರ್ ಖೇಡ್ಕರ್ ಮತ್ತು ನೆಟ್ ಬೌಲರ್ ಪೆರಿಯಸ್ವಾಮಿ ಗಣೇಶನ್ ಅವರನ್ನು ಪತ್ಯೇಕವಾಗಿ ಇರಿಸಲಾಗಿದೆ. ಇದಾಗ್ಯೂ ಇಂದಿನ ಪಂದ್ಯವನ್ನು ನಡೆಸಲಾಗುವುದು ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ.

ಇದೀಗ ನಟರಾಜನ್ ಹಾಗೂ ವಿಜಯ್ ಶಂಕರ್ ಅವರನ್ನು ತಂಡದ ಆಯ್ಕೆಯಿಂದ ಕೈ ಬಿಡಲಾಗಿದೆ. ಹೀಗಾಗಿ ಇಂದು ಕಣಕ್ಕಿಳಿಯುವ ಸನ್​ರೈಸರ್ಸ್​ ಹೈದರಾಬಾದ್ ತಂಡದಲ್ಲಿ ಪ್ರಮುಖ ಬದಲಾವಣೆ ಕಂಡು ಬರಲಿದೆ. ಏಕೆಂದರೆ ನಟರಾಜನ್ ಹಾಗೂ ವಿಜಯ್ ಶಂಕರ್ ಪ್ಲೇಯಿಂಗ್​ ಇಲೆವೆನ್​ನ ಖಾಯಂ ಸದಸ್ಯರಾಗಿದ್ದು, ಇದೀಗ ಇಬ್ಬರ ಅನುಪಸ್ಥಿತಿ ಎಸ್​ಆರ್​ಹೆಚ್​ ತಂಡ ಚಿಂತೆಗೆ ಕಾರಣವಾಗಿದೆ.

ಈಗಾಗಲೇ ದ್ವಿತಿಯಾರ್ಧದಿಂದ ಎಸ್​ಆರ್​ಹೆಚ್​ ಓಪನರ್ ಜಾನಿ ಬೈರ್​ಸ್ಟೋ ಹೊರಗುಳಿದಿದ್ದಾರೆ. ಇದೀಗ ತಂಡದ ಇಬ್ಬರು ಆಟಗಾರರು ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತ. ಇವರ ಬದಲಿಗೆ ಹೊಸ ಆಟಗಾರರಿಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಅದರಂತೆ ಎಸ್​ಆರ್​ಹೆಚ್​ ತಂಡದಲ್ಲಿ 2 ಬದಲಾವಣೆ ಕಾಣಿಸಿಕೊಳ್ಳಲಿದ್ದು, ನಟರಾಜನ್ ಬದಲಿಗೆ ಎಡಗೈ ವೇಗಿ ಖಲೀಲ್ ಅಹ್ಮದ್ ಸ್ಥಾನ ಪಡೆಯಲಿದ್ದಾರೆ. ಹಾಗೆಯೇ ಆಲ್​ರೌಂಡರ್ ವಿಜಯ ಶಂಕರ್ ಸ್ಥಾನದಲ್ಲಿ ಅಭಿಷೇಕ್ ಶರ್ಮಾ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಸನ್ ರೈಸರ್ಸ್ ಹೈದರಾಬಾದ್ (SRH) ಸಂಭಾವ್ಯ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಮನೀಶ್ ಪಾಂಡೆ, ಅಭಿಷೇಕ್ ಶರ್ಮಾ , ಅಬ್ದುಲ್ ಸಮದ್ , ಮೊಹಮ್ಮದ್ ನಬಿ, ರಶೀದ್ ಖಾನ್ , ಭುವನೇಶ್ವರ್ ಕುಮಾರ್ , ಸಂದೀಪ್ ಶರ್ಮಾ , ಖಲೀಲ್ ಅಹ್ಮದ್

ಇದನ್ನೂ ಓದಿ: Virat Kohli: ನಮಗೆ ಸೋಲುಣಿಸಿದ ಆತನೇ ನಮ್ಮ ಪ್ರಮುಖ ಅಸ್ತ್ರ..!

ಇದನ್ನೂ ಓದಿ: Virat Kohli: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ಇದನ್ನೂ ಓದಿ: 90 ಕಿ.ಮೀ ಮೈಲೇಜ್ ನೀಡುವ ಕಡಿಮೆ ಬೆಲೆಯ ಬೈಕ್​ಗಳ ಪಟ್ಟಿ ಇಲ್ಲಿದೆ

ಇದನ್ನೂ ಓದಿ: IPL 2021: ಪ್ಲೇ ಆಫ್​ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಗೌತಮ್ ಗಂಭೀರ್

(SRH Players to replace Vijay Shankar and T. Natarajan in Playing XI)

Published On - 4:12 pm, Wed, 22 September 21

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ