SRH vs GT Playing XI IPL 2022: ಟೈಟನ್ಸ್ಗೆ ಸನ್‌ರೈಸರ್ಸ್ ಸವಾಲು: ಗುಜರಾತ್ ತಂಡದಲ್ಲಿ 1 ಬದಲಾವಣೆ ಸಾಧ್ಯತೆ
SRH vs GT Playing XI IPL 2022: ಪಂಜಾಬ್ ವಿರುದ್ಧ ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಇಬ್ಬರು ಆಟಗಾರರಿಗೆ ಪದಾರ್ಪಣೆ ಮಾಡುವ ಅವಕಾಶ ನೀಡಿದರು. ಕಳೆದ ಪಂದ್ಯದಲ್ಲಿ ಸಾಯಿ ಸುದರ್ಶನ್ ಮತ್ತು ದರ್ಶನ್ ನಲಕಂಡೆ ಪದಾರ್ಪಣೆ ಮಾಡಿದ್ದರು.
IPL 2022 ರ 20ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿದೆ. ಕೇನ್ ವಿಲಿಯಮ್ಸನ್ ನೇತೃತ್ವದ SRH ತಂಡವು ಮೂರು ಪಂದ್ಯಗಳಲ್ಲಿ ಕೇವಲ ಒಂದು ಜಯ ಸಾಧಿಸಿದೆ. ಇದೀಗ SRH ತಂಡ ಈ ಟೂರ್ನಿಯ ಅತ್ಯುತ್ತಮ ತಂಡಗಳಲ್ಲಿ ಒಂದಾದ ಗುಜರಾತ್ ಟೈಟನ್ಸ್ ಎದುರು ಕಣಕ್ಕಿಳಿಯಲಿದೆ. ಗುಜರಾತ್ ಟೈಟನ್ಸ್ ಈ ಸೀಸನ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಅಲ್ಲದೆ ಆಡಿರುವ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಈ ಸೀಸನ್ನಲ್ಲಿ ಗುಜರಾತ್ ಟೈಟನ್ಸ್ ಅತ್ಯುತ್ತಮವಾಗಿ ಆಡುತ್ತಿದೆ. ತಂಡದಲ್ಲಿ ಮೊಹಮ್ಮದ್ ಶಮಿಯಂತಹ ಬೌಲರ್ ಇದ್ದರೆ, ರಶೀದ್ ಖಾನ್ ಅವರಂತ ಸ್ಪಿನ್ ಮೋಡಿಗಾರರಿದ್ದಾರೆ. ಹಾಗೆಯೇ ಬ್ಯಾಟಿಂಗ್‌ನಲ್ಲಿ ಶುಭಮನ್ ಗಿಲ್ನಂತಹ ಆರಂಭಿಕ ಆಟಗಾರ ಫಾರ್ಮ್‌ನಲ್ಲಿದ್ದಾರೆ. ಅಷ್ಟೇ ಅಲ್ಲದೆ ರಾಹುಲ್ ತಿವಾಠಿಯಾ ಅವರಂತಹ ಫಿನಿಶರ್ ಕೂಡ ಇದ್ದಾರೆ. ಇದಾಗ್ಯೂ ಗುಜರಾತ್ ಟೈಟನ್ಸ್ ತಂಡದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.
ಪಂಜಾಬ್ ವಿರುದ್ಧ ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಇಬ್ಬರು ಆಟಗಾರರಿಗೆ ಪದಾರ್ಪಣೆ ಮಾಡುವ ಅವಕಾಶ ನೀಡಿದರು. ಕಳೆದ ಪಂದ್ಯದಲ್ಲಿ ಸಾಯಿ ಸುದರ್ಶನ್ ಮತ್ತು ದರ್ಶನ್ ನಲಕಂಡೆ ಪದಾರ್ಪಣೆ ಮಾಡಿದ್ದರು. ಸಾಯಿ ಸುದರ್ಶನ್ ತಮ್ಮ ಬ್ಯಾಟಿಂಗ್‌ನಿಂದ ಸಾಕಷ್ಟು ಪ್ರಭಾವಿತರಾಗಿದ್ದರು. ಹೀಗಾಗಿ ಅವರು ತಂಡದಲ್ಲಿ ಉಳಿಯುವುದು ಸಹಜ. ಮತ್ತೊಂದೆಡೆ ಪಾಂಡ್ಯ ಕೂಡ ದರ್ಶನ್‌ಗೆ ಮತ್ತೊಂದು ಅವಕಾಶ ನೀಡಲಿದ್ದಾರೆ. ಇದಾಗ್ಯೂ ಆರಂಭಿಕ ಆಟಗಾರ ಮ್ಯಾಥ್ಯೂ ವೇಡ್ ಸ್ಥಾನದಲ್ಲಿ ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್‌ಗೆ ಅವಕಾಶ ಸಿಗಬಹುದು.
ಮತ್ತೊಂದೆಡೆ, ಸನ್‌ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ವಿರುದ್ಧ ಎರಡು ಬದಲಾವಣೆಗಳನ್ನು ಮಾಡಿದ್ದರು. ದಕ್ಷಿಣ ಆಫ್ರಿಕಾದ ಎಡಗೈ ವೇಗದ ಬೌಲರ್ ಮಾರ್ಕೊ ಯಾನ್ಸನ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೇ ವೇಳೆ ಶಶಾಂಕ್ ಸಿಂಗ್ ಅವರಿಗೂ ಅವಕಾಶ ಸಿಕ್ಕಿತು. ಆದರೆ, ಶಶಾಂಕ್ ಅವರ ಬ್ಯಾಟಿಂಗ್ ಬರಲಿಲ್ಲ. ಇನ್ನು ಅಭಿಷೇಕ್ ಶರ್ಮಾ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಹೀಗಾಗಿ ಎಸ್ಆರ್ಹೆಚ್ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇಲ್ಲ. ಅದರಂತೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ.
ಸನ್‌ರೈಸರ್ಸ್ ಹೈದರಾಬಾದ್ – ಕೇನ್ ವಿಲಿಯಮ್ಸನ್ (ನಾಯಕ) ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸನ್, ಉಮ್ರಾನ್ ಮಲಿಕ್, ಟಿ ನಟರಾಜನ್.
ಗುಜರಾತ್ ಟೈಟನ್ಸ್ – ಹಾರ್ದಿಕ್ ಪಾಂಡ್ಯ, ರಹಮಾನುಲ್ಲಾ ಗುರ್ಬಾಜ್, ಶುಭಮನ್ ಗಿಲ್, ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ.
ಇದನ್ನೂ ಓದಿ: Virat Kohli: ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ
ಇದನ್ನೂ ಓದಿ: Prithvi Shaw: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸೆಹ್ವಾಗ್ ದಾಖಲೆ ಸರಿಗಟ್ಟಿದ ಪೃಥ್ವಿ ಶಾ