SRH vs KkR, IPL 2023: ಐಪಿಎಲ್​ನಲ್ಲಿಂದು ಹೈದರಾಬಾದ್-ಕೋಲ್ಕತ್ತಾ ಮುಖಾಮುಖಿ: ಉಭಯ ತಂಡಗಳಿಗೆ ಗೆಲುವು ಅನಿವಾರ್ಯ

|

Updated on: May 04, 2023 | 7:37 AM

ಐಪಿಎಲ್ 2023 ರಲ್ಲಿ ಇಂದು ಸನ್​ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮುಖಾಮುಖಿ ಆಗುತ್ತಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜಿಸಲಾಗಿದೆ.

SRH vs KkR, IPL 2023: ಐಪಿಎಲ್​ನಲ್ಲಿಂದು ಹೈದರಾಬಾದ್-ಕೋಲ್ಕತ್ತಾ ಮುಖಾಮುಖಿ: ಉಭಯ ತಂಡಗಳಿಗೆ ಗೆಲುವು ಅನಿವಾರ್ಯ
SRH vs KKR
Follow us on

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿ ಕುತೂಹಲ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು-ಗೆಲುವಿನ ಲೆಕ್ಕಚಾರ ಮತ್ತೊಂದು ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ಅದರಂತೆ ಇಂದು ಐಪಿಎಲ್ 2023 ರಲ್ಲಿ ಆ್ಯಡಂ ಮರ್ಕ್ರಮ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ಹಾಗೂ ನಿತೀಶ್ ರಾಣ (Nitish Rana) ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ (SRH vs KKR) ಮುಖಾಮುಖಿ ಆಗುತ್ತಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜಿಸಲಾಗಿದೆ. ಅಂಕಪಟ್ಟಿಯಲ್ಲಿ ಮೇಲಕ್ಕೇರಲು ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದ್ದು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.

ಹೈದರಾಬಾದ್:

ಸನ್​ರೈಸರ್ಸ್ ಹೈದರಾಬಾದ್ ತಂಡ ಆಡಿದ ಎಂಟು ಪಂದ್ಯಗಳ ಪೈಕಿ ಐದರಲ್ಲಿ ಸೋಲುಂಡು ಕೇಲ ಮೂರು ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿರುವ ಕಾರಣ ಎಸ್​ಆರ್​ಹೆಚ್​ಗೆ ಗೆಲುವು ಬೇಕಾಗಿದೆ. ಇಡೀ ಟೂರ್ನಿಯಲ್ಲಿ ತಂಡ ಉತ್ತಮ ಆರಂಭ ಪಡೆದುಕೊಂಡಿಲ್ಲ. ಅಭಿಷೇಕ್ ಶರ್ಮಾ ಬ್ಯಾಟ್ ಬೀಸಿದರೆ ಮಯಾಂಕ್ ಅಗರ್ವಾಲ್ ಸಂಪೂರ್ಣ ವೈಫಲ್ಯ ಅನುಭವಿಸುತ್ತಿದ್ದಾರೆ. ಹ್ಯಾರಿ ಬ್ರೂಕ್ ಒಂದು ಶತಕ ಸಿಡಿಸಿ ಮಂಕಾಗಿದ್ದಾರೆ.

ರಾಹುಲ್ ತ್ರಿಪಾಠಿ, ನಾಯಕ ಮರ್ಕ್ರಮ್, ಹೆನ್ರಿಚ್ ಕ್ಲಾಸೆನ್ ಅಬ್ಬರಿಸ ಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಬೌಲಿಂಗ್​ನಲ್ಲಿ ಹೈದರಬಾದ್ ಪರ ಭುವನೇಶ್ವರ್ ಕುಮಾರ್ ಬಿಟ್ಟರೆ ಮತ್ಯಾರು ಮಾರಕವಾಗಿ ಗೋಚರಿಸುತ್ತಿಲ್ಲ. ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಟಿ. ನಟರಾಜನ್, ಮಯಾಂಕ್ ಮಾರ್ಕಂಡೆ ಲಯಕಂಡುಕೊಳ್ಳಬೇಕಿದೆ.

ಇದನ್ನೂ ಓದಿ
IPL 2023: ಪ್ರತಿ ಸೀಸನ್ ಐಪಿಎಲ್ ಆಡಿದ 7 ಆಟಗಾರರು ಯಾರು ಗೊತ್ತಾ?
IPL 2023: ನಾನು ಬಂದಿರೋದು ಐಪಿಎಲ್ ಆಡುವುದಕ್ಕೆ, ಬೈಗುಳ ಕೇಳೋಕ್ಕಲ್ಲ: ನವೀನ್ ಉಲ್ ಹಕ್
IPL 2023: RCB ಆಟಗಾರನ ಮಗನಿಗೆ ವಿಶೇಷ ಗಿಫ್ಟ್ ಕಳಿಸಿದ ವಿರಾಟ್ ಕೊಹ್ಲಿ
Asia Cup 2023: ಏಷ್ಯಾಕಪ್​ಗೆ 6 ತಂಡಗಳು ಫೈನಲ್

IPL 2023: ಶಸ್ತ್ರಚಿಕಿತ್ಸೆಗೆ ಒಳಗಾದ RCB ಆಟಗಾರ..!

ಕೆಕೆಆರ್:

ಇತ್ತ ಕೆಕೆಆರ್ ಆಡಿದ ಒಂಬತ್ತು ಪಂದ್ಯಗಳ ಪೈಕಿ ಆರರಲ್ಲಿ ಸೋಲು ಮೂರರಲ್ಲಿ ಗೆಲುವು ಕಂಡಿದೆ. ಕೆಕೆಆರ್ ತಂಡದ ಪ್ರಮುಖ ಅಸ್ತ್ರ ಬ್ಯಾಟಿಂಗ್ ಶಕ್ತಿ. ಕಳೆದ ಪಂದ್ಯದಲ್ಲಿ ಜೇಸನ್ ರಾಯ್ ಬದಲು ಕಣಕ್ಕಿಳಿದ ರಹಮಾನುಲ್ಲಾ ಗುರ್ಬಾಜ್ ಅಬ್ಬರಿಸಿದ್ದರು. ಆದರೆ, ಇದೀಗ ರಾಯ್ ಫಿಟ್ ಆಗಿದ್ದು ಗುರ್ಬಾಜ್​ಗೆ ಸ್ಥಾನ ಇದೆಯೇ ನೋಡಬೇಕು.

ನಾಯಕ ನಿತೀಶ್ ರಾಣ ಹಾಗೂ ರಿಂಕು ಸಿಂಗ್ ಬರಬರುತ್ತ ಮಂಕಾಗಿದ್ದಾರೆ. ಎನ್. ಜಗದೀಸನ್ ಕಡೆಯಿಂದ ಒಂದೊಳ್ಳೆ ಆಟ ಬರಬೇಕು. ವೆಂಕಟೇಶ್ ಅಯ್ಯರ್ ಫಾರ್ಮ್​ನಲ್ಲಿದ್ದಾರೆ. ಶಾರ್ದೂಲ್ ಥಾಕೂರ್ ಬ್ಯಾಟಿಂಗ್​ನಲ್ಲಿ ಬಲ ತುಂಬಿದರೆ ತಂಡದ ಮೊತ್ತ 200+ ಆಗುವುದು ಖಚಿತ. ಆಂಡ್ರೆ ರಸೆಲ್ ಅಬ್ಬರಿಸಲು ಶುರು ಮಾಡಿದ್ದಾರೆ. ಸುನಿಲ್ ನರೈನ್, ವರುಣ್ ಚಕ್ರವರ್ತಿ, ಉಮೇಶ್ ಯಾದವ್, ಸುಯೇಶ್ ಶರ್ಮಾ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ: ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಆ್ಯಡಂ ಮರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಅಕೇಲ್ ಹೊಸೈನ್, ಉಮ್ರಾನ್ ಮಲಿಕ್, ಮಾರ್ಕೊ ಜಾನ್ಸೆನ್, ಟಿ ನಟರಾಜನ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಮಯಾಂಕ್ ಡಾಗರ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಆದಿಲ್ ರಶೀದ್, ಕಾರ್ತಿಕ್ ತ್ಯಾಗಿ, ಉಪೇಂದ್ರ ಯಾದವ್, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ಎನ್ ಜಗದೀಸನ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಡೇವಿಡ್ ವೈಸ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಸುಯಶ್ ಶರ್ಮಾ, ಮನದೀಪ್ ಸಿಂಗ್ ಜೇಸನ್ ರಾಯ್, ಅನುಕೂಲ್ ರಾಯ್, ಟಿಮ್ ಸೌಥಿ, ಉಮೇಶ್ ಯಾದವ್, ಲಾಕಿ ಫರ್ಗುಸನ್, ಕುಲ್ವಂತ್ ಖೆಜ್ರೋಲಿಯಾ, ವೈಭವ್ ಅರೋರಾ, ಆರ್ಯ ದೇಸಾಯಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ