ಐಪಿಎಲ್ 2024ರ 57ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿದೆ. 166 ರನ್‌ಗಳ ಗುರಿಯನ್ನು ತಂಡವು 9.4 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಬೆನ್ನಟ್ಟಿತು. ಇದು ಐಪಿಎಲ್‌ನಲ್ಲಿ 150+ ಸ್ಕೋರ್‌ಗಳ ವೇಗದ ರನ್ ಚೇಸ್ ಆಗಿದೆ. ಹಿಂದಿನ ದಾಖಲೆ ಡೆಕ್ಕನ್ ಚಾರ್ಜರ್ಸ್ ಹೆಸರಿನಲ್ಲಿತ್ತು. 2008 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚಾರ್ಜರ್ಸ್ 12 ಓವರ್‌ಗಳಲ್ಲಿ 155 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಹೈದರಾಬಾದ್ ಪರ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ ಅಜೇಯ 89 ರನ್ ಗಳಿಸಿದರೆ, ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ ಅಜೇಯ 75 ರನ್ ಗಳಿಸಿದರು. ಇಬ್ಬರೂ 166 ರನ್‌ಗಳ ಶತಕದ ಜೊತೆಯಾಟ ನೀಡಿದರು. ಇವರಿಬ್ಬರು 16 ಬೌಂಡರಿ ಹಾಗೂ 14 ಸಿಕ್ಸರ್‌ಗಳನ್ನು ಬಾರಿಸಿದರು. ಲಕ್ನೋ ಬೌಲರ್‌ಗಳಿಗೆ ಒಂದೇ ಒಂದು ವಿಕೆಟ್ ಕೂಡ ಕಬಳಿಸಲು ಸಾಧ್ಯವಾಗಲಿಲ್ಲ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 10 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಬಿರುಸಿನ ಬ್ಯಾಟಿಂಗ್ ಮಾಡಿ ಅಜೇಯ ಅರ್ಧಶತಕ ಸಿಡಿಸಿ ತಂಡವನ್ನು 9.4 ಓವರ್‌ಗಳಲ್ಲಿ ಗೆಲುವಿನ ದಡ ಸೇರಿಸಿದರು.
ಏಳು ಓವರ್‌ಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಯಾವುದೇ ವಿಕೆಟ್ ನಷ್ಟವಿಲ್ಲದೆ 126 ರನ್ ಗಳಿಸಿದೆ. ಸದ್ಯ ಟ್ರಾವಿಸ್ ಹೆಡ್ 21 ಎಸೆತಗಳಲ್ಲಿ 66 ರನ್ ಹಾಗೂ ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 57 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಹೈದರಾಬಾದ್‌ಗೆ ಬಿರುಸಿನ ಆರಂಭ ನೀಡಿದರು. ಇಬ್ಬರೂ ಆರು ಓವರ್‌ಗಳಲ್ಲಿ 107 ರನ್ ಕಲೆಹಾಕಿದರು. ಹೆಡ್ 18 ಎಸೆತಗಳಲ್ಲಿ 58 ರನ್ ಹಾಗೂ ಅಭಿಷೇಕ್ 18 ಎಸೆತಗಳಲ್ಲಿ 46 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಹೆಡ್ ಐಪಿಎಲ್‌ನಲ್ಲಿ ಐದನೇ ಅರ್ಧಶತಕ ಗಳಿಸಿದ್ದಾರೆ.
ಐದು ಓವರ್‌ಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಯಾವುದೇ ವಿಕೆಟ್ ನಷ್ಟವಿಲ್ಲದೆ 87 ರನ್ ಗಳಿಸಿದೆ. ಸದ್ಯ ಟ್ರಾವಿಸ್ ಹೆಡ್ 18 ಎಸೆತಗಳಲ್ಲಿ 58 ರನ್ ಹಾಗೂ ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 26 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಹೈದರಾಬಾದ್ ಇನ್ನಿಂಗ್ಸ್ ಆರಂಭವಾಗಿದೆ. ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಕ್ರೀಸ್‌ನಲ್ಲಿದ್ದಾರೆ. ಒಂದು ಓವರ್ ಅಂತ್ಯಕ್ಕೆ ಹೈದರಾಬಾದ್ ಸ್ಕೋರ್ ಯಾವುದೇ ವಿಕೆಟ್ ಇಲ್ಲದೆ ಎಂಟು ರನ್ ಆಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಸನ್ ರೈಸರ್ಸ್ ಹೈದರಾಬಾದ್‌ಗೆ 166 ರನ್‌ಗಳ ಗುರಿ ನೀಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 165 ರನ್ ಗಳಿಸಿತು. ತಂಡದ ಪರ ಆಯುಷ್ ಬಡೋನಿ ಮತ್ತು ನಿಕೋಲಸ್ ಪೂರನ್ 52 ಎಸೆತಗಳಲ್ಲಿ 99 ರನ್‌ಗಳ ಅಜೇಯ ಜೊತೆಯಾಟ ನಡೆಸಿದರು. ಬದೋನಿ 30 ಎಸೆತಗಳಲ್ಲಿ ಒಂಬತ್ತು ಬೌಂಡರಿಗಳ ನೆರವಿನಿಂದ ಅಜೇಯ 55 ರನ್ ಗಳಿಸಿದರೆ ಪೂರನ್ 26 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ ಅಜೇಯ 48 ರನ್ ಗಳಿಸಿದರು.
18 ಓವರ್‌ಗಳಲ್ಲಿ ಲಕ್ನೋ ನಾಲ್ಕು ವಿಕೆಟ್ ಕಳೆದುಕೊಂಡು 131 ರನ್ ಗಳಿಸಿದೆ. ಸದ್ಯ ಆಯುಷ್ ಬಡೋನಿ 23 ಎಸೆತಗಳಲ್ಲಿ 39 ರನ್ ಹಾಗೂ ನಿಕೋಲಸ್ ಪುರನ್ 21 ಎಸೆತಗಳಲ್ಲಿ 30 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇವರಿಬ್ಬರ ನಡುವೆ 60ಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ನಡೆದಿದೆ.
ಲಕ್ನೋ ತಂಡ 15ನೇ ಓವರ್‌ನಲ್ಲಿ ಶತಕ ಪೂರೈಸಿದೆ. ಇದಕ್ಕಾಗಿ ತಂಡ 4 ವಿಕೆಟ್ ಕಳೆದುಕೊಂಡಿದೆ.
ಲಕ್ನೋ 12ನೇ ಓವರ್‌ನಲ್ಲಿ ಕೃನಾಲ್ ವಿಕೆಟ್ ಕಳೆದುಕೊಂಡಿದೆ. ಕ್ರುನಾಲ್ 21 ಎಸೆತಗಳಲ್ಲಿ ಎರಡು ಸಿಕ್ಸರ್‌ಗಳ ನೆರವಿನಿಂದ 24 ರನ್ ಗಳಿಸಿದರು. ಸದ್ಯ ನಿಕೋಲಸ್ ಪುರನ್ ಮತ್ತು ಆಯುಷ್ ಬದೋನಿ ಕ್ರೀಸ್‌ನಲ್ಲಿದ್ದಾರೆ. 12 ಓವರ್‌ಗಳ ನಂತರ ಲಕ್ನೋ ಸ್ಕೋರ್ ನಾಲ್ಕು ವಿಕೆಟ್ ಕಳೆದುಕೊಂಡು 69 ರನ್ ಆಗಿದೆ.
ಲಕ್ನೋ ನಾಯಕ ಕೆಎಲ್ ರಾಹುಲ್ ಅವರ ಮತ್ತೊಂದು ಆಮೆಗತಿಯ ಇನ್ನಿಂಗ್ಸ್ ಅಂತ್ಯಗೊಂಡಿದೆ. ರಾಹುಲ್ 33 ಎಸೆತಗಳಲ್ಲಿ 29 ರನ್ ಬಾರಿಸಿದರು.
ಲಕ್ನೋ 2ನೇ ವಿಕೆಟ್ ಕಳೆದುಕೊಂಡಿದೆ. ಸ್ಫೋಟಕ ಬ್ಯಾಟರ್ ಮಾರ್ಕಸ್ ಸ್ಟೋಯ್ನಿಸ್ 3 ರನ್ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದ್ದಾರೆ.
ಲಕ್ನೋ; 21/2
ಆರಂಭಿಕ ಡಿ ಕಾಕ್ ವಿಕೆಟ್ ಪತನವಾಗಿದೆ. ಲಕ್ನೋ ಮೂರನೇ ಓವರ್ನಲ್ಲೇ ಮೊದಲ ವಿಕೆಟ್ ಕಳೆದುಕೊಂಡಿತು.
ಲಕ್ನೋ: 13/1
ಲಕ್ನೋ ಇನ್ನಿಂಗ್ಸ್ ಆರಂಭವಾಗಿದೆ. ಕ್ವಿಂಟನ್ ಡಿ ಕಾಕ್ ಮತ್ತು ನಾಯಕ ಕೆಎಲ್ ರಾಹುಲ್ ಕ್ರೀಸ್‌ನಲ್ಲಿದ್ದಾರೆ.
ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ನಾಯಕ), ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಯಶ್ ಠಾಕೂರ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್.
ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕಟ್, ವಿಜಯಕಾಂತ್, ಟಿ ನಟರಾಜನ್.
ಟಾಸ್ ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Published On - 7:09 pm, Wed, 8 May 24