IPL 2022: ಸೋಲಿನ ಸುಳಿಯಲ್ಲಿರುವ ಹೈದರಾಬಾದ್​ಗೆ ಲಕ್ನೋ ಎದುರಾಳಿ! ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

SRH vs LSG Playing XI IPL 2022: ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ಗೆ ಅಷ್ಟೇನೂ ಉತ್ತಮವಾಗಿರಲಿಲ್ಲ. ತಂಡದ ಬ್ಯಾಟಿಂಗ್ ಆಗಲಿ, ಬೌಲಿಂಗ್ ಆಗಲಿ ಉತ್ತಮ ಪ್ರದರ್ಶನ ನೀಡಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅವರು ಈ ಎರಡೂ ವಿಭಾಗಗಳಲ್ಲೂ ಸುಧಾರಿಸಿಕೊಳ್ಳುವುದು ಅಗತ್ಯವಾಗಿದೆ.

IPL 2022: ಸೋಲಿನ ಸುಳಿಯಲ್ಲಿರುವ ಹೈದರಾಬಾದ್​ಗೆ ಲಕ್ನೋ ಎದುರಾಳಿ! ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
SRH vs LSG
Follow us
| Updated By: ಪೃಥ್ವಿಶಂಕರ

Updated on: Apr 03, 2022 | 5:37 PM

ಐಪಿಎಲ್ 2022 (IPL 2022)ರಲ್ಲಿ ಕೆಎಲ್ ರಾಹುಲ್ (KL Rahul)ನಾಯಕತ್ವದ ಲಕ್ನೋ ಸೂಪರ್‌ಜೈಂಟ್ಸ್ ತಂಡವು ಸೋಮವಾರ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಅನ್ನು ಎದುರಿಸಲಿದೆ. ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಲಖನೌ ತಂಡ ತನ್ನ ಮೊದಲು ಗೆಲುವು ಸಾಧಿಸಿತ್ತು. ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಬೇಕಾಯಿತು. ಮತ್ತೊಂದೆಡೆ, ಸನ್‌ರೈಸರ್ಸ್ ಇದುವರೆಗೆ ಕೇವಲ ಒಂದು ಪಂದ್ಯವನ್ನು ಆಡಿದ್ದು, ರಾಜಸ್ಥಾನ್ ರಾಯಲ್ಸ್ ಎದುರು ಹೀನಾಯ ಸೋಲನುಭವಿಸಿದೆ. ಈ ಬಾರಿ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಈ ಋತುವಿನಲ್ಲಿ ಇದೇ ಮೈದಾನದಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಲಕ್ನೋ ತಂಡ ಗೆಲುವಿನ ಕ್ರಮಾಂಕ ಕಾಯ್ದುಕೊಳ್ಳಲು ಪ್ರಯತ್ನಿಸಿದರೆ, ಸನ್‌ರೈಸರ್ಸ್ ತಂಡವು ಗೆಲುವಿನ ಖಾತೆ ತೆರೆಯಲು ಬಯಸಿದೆ.

ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ಗೆ ಅಷ್ಟೇನೂ ಉತ್ತಮವಾಗಿರಲಿಲ್ಲ. ತಂಡದ ಬ್ಯಾಟಿಂಗ್ ಆಗಲಿ, ಬೌಲಿಂಗ್ ಆಗಲಿ ಉತ್ತಮ ಪ್ರದರ್ಶನ ನೀಡಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅವರು ಈ ಎರಡೂ ವಿಭಾಗಗಳಲ್ಲೂ ಸುಧಾರಿಸಿಕೊಳ್ಳುವುದು ಅಗತ್ಯವಾಗಿದೆ. ಅದೇ ಸಮಯದಲ್ಲಿ, ಲಕ್ನೋಗೆ ಕೊನೆಯ ಪಂದ್ಯವು ಅತ್ಯುತ್ತಮವಾಗಿತ್ತು. ಮೊದಲ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡಿದ ಅವರು ಕೊನೆಯ ಕ್ಷಣದಲ್ಲಿ ಪಂದ್ಯದಲ್ಲಿ ಸೋಲನುಭವಿಸಿದ್ದರು.

ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಬದಲಾವಣೆ? ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡ ಸೋತಿದ್ದರೂ ಅದನ್ನು ನಿರ್ಲಕ್ಷಿಸಲು ಯಾವುದೇ ತಂಡಕ್ಕೆ ಸಾಧ್ಯವಿಲ್ಲ. ಲಕ್ನೋ ವಿರುದ್ಧ ವಿಲಿಯಮ್ಸನ್ ಕೆಲವು ಬದಲಾವಣೆಗಳನ್ನು ಮಾಡಬಹುದು. ಡಿವೈ ಪಾಟೀಲ್ ಕ್ರೀಡಾಂಗಣದ ಪಿಚ್‌ ಬ್ಯಾಟ್ಸ್‌ಮನ್‌ಗಳಿಗೆ ಸಹಕಾರಿಯಾಗುತ್ತದೆ. ಅದೇ ಸಮಯದಲ್ಲಿ ಇದು ಸ್ಪಿನ್‌ಗೂ ಸಹಾಯ ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ವಿಲಿಯಮ್ಸನ್, ವಾಷಿಂಗ್ಟನ್ ಸುಂದರ್ ಜೊತೆಗೆ ಮತ್ತೊಬ್ಬ ಸ್ಪಿನ್ನರ್ನನ್ನು ತಂಡಕ್ಕೆ ಕರೆತರಬಹುದು. ಇಂತಹ ಪರಿಸ್ಥಿತಿಯಲ್ಲಿ ಶ್ರೇಯಸ್ ಗೋಪಾಲ್ ತಂಡದಲ್ಲಿ ಅವಕಾಶ ಪಡೆಯಬಹುದು. ಅವರ ಬದಲಿಗೆ ಟಿ.ನಟರಾಜನ್ ಅಥವಾ ಉಮ್ರಾನ್ ಮಲಿಕಾ ತಂಡದಿಂದ ಕೋಕ್ ಪಡೆಯಲಿದ್ದಾರೆ.

ಲಕ್ನೋ ತಂತ್ರವೇನು? ಚೆನ್ನೈ ವಿರುದ್ಧ ಲಕ್ನೋ ಪ್ರಬಲ ಪ್ರದರ್ಶನ ನೀಡಿತ್ತು. ತಂಡದ ಗೆಲುವಿಗೆ ಎಲ್ಲಾ ಆಟಗಾರರು ಸಹಕರಿಸಿದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ಕೆಎಲ್ ರಾಹುಲ್ ತಂಡದಲ್ಲಿ ಬದಲಾವಣೆ ಮಾಡುವುದು ತೀರ ಕಡಿಮೆ.

ಎರಡೂ ತಂಡಗಳ ಸಂಭಾವ್ಯ XI ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಏಡೆನ್ ಮರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ರೊಮಾರಿಯಾ ಶೆಫರ್ಡ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಶ್ರೇಯಸ್ ಗೋಪಾಲ್.

ಲಕ್ನೋ ಸೂಪರ್ ಜೈಂಟ್ಸ್ – ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಆಂಡ್ರ್ಯೂ ಟೈ, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್.

ಇದನ್ನೂ ಓದಿ:Ayush Badoni IPL 2022: ಅಂದು ಜೀರೋ.. ಇಂದು ಹೀರೋ; ಐಪಿಎಲ್​ನ ಬೇಬಿ ಎಬಿಡಿ ಆಯುಷ್ ಬದೋನಿ

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್