AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs LSG: ನಂಬಲಸಾಧ್ಯ..! ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ಸನ್‌ರೈಸರ್ಸ್

IPL 2026, SRH vs LSG Match 10 Highlights: ಐಪಿಎಲ್ 2026 ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್, ವಿರುದ್ಧ ಪವರ್‌ಪ್ಲೇನಲ್ಲಿ ತೀವ್ರ ಕುಸಿತ ಕಂಡಿತು. ಕೇವಲ 22 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಕಳಪೆ ದಾಖಲೆ ಬರೆಯಿತು. ನಂತರ, ನಿತೀಶ್ ರೆಡ್ಡಿ ಮತ್ತು ಹೆನ್ರಿಚ್ ಕ್ಲಾಸೆನ್ ಅವರ ಅರ್ಧಶತಕದ ನೆರವಿನಿಂದ SRH ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. LSG ಬೌಲರ್‌ಗಳ, ವಿಶೇಷವಾಗಿ ಶಮಿ, ಪ್ರದರ್ಶನ ಗಮನಾರ್ಹವಾಗಿತ್ತು.

SRH vs LSG: ನಂಬಲಸಾಧ್ಯ..! ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ಸನ್‌ರೈಸರ್ಸ್
Srh 2026
ಪೃಥ್ವಿಶಂಕರ
|

Updated on:Apr 05, 2026 | 5:28 PM

Share

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಲಕ್ನೋ ಸೂಪರ್​ಜೈಂಟ್ಸ್ (SRH vs LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ ತವರಿನ ಲಾಭ ಪಡೆದು ಬೃಹತ್ ಮೊತ್ತವನ್ನು ಕಲೆಹಾಕಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಲಕ್ನೋ ಬೌಲರ್​ಗಳ ಮಾರಕ ದಾಳಿ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಆದಾಗ್ಯೂ ಲೋಕಲ್ ಬಾಯ್ ನಿತೀಶ್ ರೆಡ್ಡಿ ಹಾಗೂ ಕ್ಲಾಸೆನ್ ಅವರ ಅರ್ಧಶತಕದ ನೆರವಿನಿಂದ ಸನ್‌ರೈಸರ್ಸ್ ತಂಡ 20 ಓವರ್​ಗಳಲ್ಲಿ 156 ರನ್ ಕಲೆಹಾಕಿತು.

ಪವರ್‌ಪ್ಲೇನಲ್ಲಿ ಕೇವಲ 22 ರನ್

ಸನ್‌ರೈಸರ್ಸ್ ತಂಡದ ಬ್ಯಾಟಿಂಗ್‌ ಎಷ್ಟು ಕಳಪೆಯಾಗಿತ್ತು ಎಂದರೆ, ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಈ ತಂಡ ಪವರ್‌ಪ್ಲೇನಲ್ಲಿ ಕಲೆಹಾಕಿದ್ದು, ಕೇವಲ 22 ರನ್. ಇದಕ್ಕಾಗಿ ಕಳೆದುಕೊಂಡಿದ್ದು ಪ್ರಮುಖ 3 ವಿಕೆಟ್. ಅಚ್ಚರಿಯ ಸಂಗತಿಯೆಂದರೆ ಇದೇ ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿ ಅತ್ಯದಿಕ ರನ್ ಕಲೆಹಾಕಿದ ದಾಖಲೆಯನ್ನು ಹೊಂದಿದೆ. ಆದರೆ ಈ ಬಾರಿ ತನ್ನ ತವರು ಪಂದ್ಯದಲ್ಲಿ ರನ್ ಕಲೆಹಾಕಲು ಹೆಣಗಾಡಬೇಕಾಯಿತು. ಈ ಮೂಲಕ ಸನ್‌ರೈಸರ್ಸ್ ತಂಡ ಈ ಆವೃತ್ತಿಯಲ್ಲಿ ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತವನ್ನು ದಾಖಲಿಸಿದ ತಂಡವೆಂಬ ಬೇಡದ ದಾಖಲೆಯನ್ನು ಬರೆಯಿತು.

ಆರಂಭಿಕರ ಕಳಪೆ ಬ್ಯಾಟಿಂಗ್

ಅದರಲ್ಲೂ ಪವರ್‌ಪ್ಲೇನ ಕೊನೆಯ ಓವರ್​ನಲ್ಲಿ ಲಿವಿಂಗ್​ಸ್ಟೋನ್ ಸಿಕ್ಸರ್ ಬಾರಿಸದಿದ್ದರೆ, ತಂಡದ ಮೊತ್ತ ಮೊದಲ 6 ಓವರ್​ಗಳಲ್ಲಿ ಕೇವಲ 15 ರನ್​ಗಳಾಗಿರುತಿತ್ತು. ಇದರರ್ಥ ಸನ್‌ರೈಸರ್ಸ್ ಬ್ಯಾಟರ್​ಗಳನ್ನು ಕಟ್ಟಿಹಾಕುವಲ್ಲಿ ಲಕ್ನೋ ಬೌಲರ್​ಗಳು ಯಶಸ್ವಿಯಾಗಿದ್ದರು ಎನ್ನಬಹುದು. ಅದರಲ್ಲೂ ಆರಂಭಿಕ ದಾಳಿ ನಡೆಸಿದ ಸನ್‌ರೈಸರ್ಸ್ ತಂಡದ ಮಾಜಿ ಬೌಲರ್ ಮೊಹಮ್ಮದ್ ಶಮಿ, ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಅವರನ್ನು ಬೇಗನೇ ಔಟ್ ಮಾಡಿದರು. ಅಭಿಷೇಕ್ ಶೂನ್ಯಕ್ಕೆ ಔಟಾದರೆ, ಹೆಡ್ 7 ರನ್​ಗಳಿಗೆ ಸುಸ್ತಾದರು.

SRH vs LSG IPL 2026 Live Score: ಲಕ್ನೋಗೆ 157 ರನ್ ಟಾರ್ಗೆಟ್

ನಿತೀಶ್- ಕ್ಲಾಸೆನ್ ಅರ್ಧಶತಕ

ಇವರಿಬ್ಬರ ವಿಕೆಟ್ ಪತನದ ಬಳಿಕ ನಾಯಕ ಕಿಶನ್ ಮೇಲೆ ಹೆಚ್ಚಿನ ಜವಾಬ್ದಾರಿ ಬಿದ್ದಿತ್ತು. ಆದರೆ ಕಿಶನ್ ಕೂಡ 1 ರನ್​ಗೆ ಸುಸ್ತಾದರು. ಇದೇ ಮೊದಲ ಬಾರಿಗೆ ಸನ್‌ರೈಸರ್ಸ್ ತಂಡದ ಪರ ಕಣಕ್ಕಿಳಿದಿದ್ದ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ಕ್ರೀಸ್​ ಕಚ್ಚಿ ಆಡಲಿಲ್ಲ. ಕೇವಲ 14 ರನ್ ಬಾರಿಸಿ ಅವರು ಕೂಡ ಔಟಾದರು. ಈ 4 ವಿಕೆಟ್​ಗಳ ಆಘಾತದ ನಂತರ ಜೊತೆಯಾದ ನಿತೀಶ್ ಹಾಗೂ ಕ್ಲಾಸೆನ್ ಶತಕದ ಜೊತೆಯಾಟ ಕಟ್ಟಿದರು. ಇವರಿಬ್ಬರು ಕ್ರಮವಾಗಿ 56 ಹಾಗೂ 62 ರನ್​ಗಳ ಇನ್ನಿಂಗ್ಸ್ ಆಡಿದರು. ಈ ನಡುವೆ ಕ್ಲಾಸೆನ್​ಗೆ ಜೀವದಾನವೂ ಸಿಕ್ಕಿತು. ಇದರ ಲಾಭ ಪಡೆದ ಕ್ಲಾಸೆನ್ ಅರ್ಧಶತಕ ಇನ್ನಿಂಗ್ಸ್ ಆಡಿ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Sun, 5 April 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ