ಸನ್‌ರೈಸರ್ಸ್ ಹೈದರಾಬಾದ್ ತಂಡವು ಬೌಲರ್‌ಗಳ ಅತ್ಯುತ್ತಮ ಪ್ರದರ್ಶನದ ಆಧಾರದ ಮೇಲೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 36 ರನ್‌ಗಳಿಂದ ಸೋಲಿಸುವ ಮೂಲಕ ಐಪಿಎಲ್ 2024 ರ ಸೀಸನ್‌ನ ಫೈನಲ್‌ಗೆ ತಲುಪಿದೆ. ಹೈದರಾಬಾದ್ ಭಾನುವಾರ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಕ್ವಾಲಿಫೈಯರ್-1 ಪಂದ್ಯದಲ್ಲಿ ಕೆಕೆಆರ್, ಹೈದರಾಬಾದ್ ತಂಡವನ್ನು ಸೋಲಿಸಿತ್ತು. ಇದೀಗ ಮತ್ತೊಮ್ಮೆ ಎರಡೂ ತಂಡಗಳು ಮುಖಾಮುಖಿಯಾಗಲಿವೆ.
ಸನ್‌ರೈಸರ್ಸ್ ಹೈದರಾಬಾದ್ ತಂಡವು 36 ರನ್‌ಗಳಿಂದ ರಾಜಸ್ಥಾನ ರಾಯಲ್ಸ್ ಅನ್ನು ಸೋಲಿಸುವ ಮೂಲಕ ಐಪಿಎಲ್ 2024 ರ ಫೈನಲ್‌ಗೆ ಪ್ರವೇಶಿಸಿದೆ.
19 ಓವರ್‌ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿದೆ. ಧ್ರುವ್ ಜುರೆಲ್ ಮತ್ತು ಟ್ರೆಂಟ್ ಬೌಲ್ಟ್ ಕ್ರೀಸ್‌ನಲ್ಲಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ರೋವ್‌ಮನ್ ಪೊವೆಲ್ ಔಟಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ 7 ವಿಕೆಟ್ ಕಳೆದುಕೊಂಡಿದೆ.
16 ಓವರ್‌ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿದೆ. ಧ್ರುವ್ ಜುರೆಲ್ ಮತ್ತು ರೋವ್‌ಮನ್ ಪೊವೆಲ್ ಕ್ರೀಸ್‌ನಲ್ಲಿದ್ದಾರೆ. ಜುರೆಲ್ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
76 ರನ್‌ಗಳ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ರವಿಚಂದ್ರನ್ ಅಶ್ವಿನ್ ರೂಪದಲ್ಲಿ 79 ರನ್ ಗಳಿಸಿ 5ನೇ ವಿಕೆಟ್ ಕಳೆದುಕೊಂಡಿತು. ಇನ್ನು ಉಳಿದ 8 ಓವರ್‌ಗಳಲ್ಲಿ ರಾಜಸ್ಥಾನ ಗೆಲ್ಲಲು 96 ರನ್ ಗಳಿಸಬೇಕಿದೆ.
ರಿಯಾನ್ ಪರಾಗ್ ಅವರನ್ನು ಔಟ್ ಮಾಡುವ ಮೂಲಕ ಶಹಬಾಜ್ ಅಹ್ಮದ್ ರಾಜಸ್ಥಾನಕ್ಕೆ ನಾಲ್ಕನೇ ಹೊಡೆತ ನೀಡಿದರು. ಪರಾಗ್ 10 ಎಸೆತಗಳಲ್ಲಿ ಆರು ರನ್ ಗಳಿಸಿ ಔಟಾದರು.
ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಿಲ್ಲ. ಕೇವಲ 10 ರನ್ ಗಳಿಸಿ ಔಟಾದರು.
ಯಶಸ್ವಿ ಜೈಸ್ವಾಲ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅರ್ಧಶತಕ ಪೂರೈಸಲು ಸಾಧ್ಯವಾಗಲಿಲ್ಲ. 21 ಎಸೆತಗಳಲ್ಲಿ 42 ರನ್ ಗಳಿಸಿ ಔಟಾದರು. ಶಹಬಾಜ್ ಅಹ್ಮದ್ ಅವರ ವಿಕೆಟ್ ಪಡೆದರು.
ಮೊದಲ ಹಿನ್ನಡೆಯ ಹೊರತಾಗಿಯೂ, ಯಶಸ್ವಿ ಜಸ್ವಾಲ್ ರಾಜಸ್ಥಾನದ ಇನ್ನಿಂಗ್ಸ್ ನಿಭಾಯಿಸುತ್ತಿದ್ದಾರೆ. ಪವರ್‌ಪ್ಲೇ ಅಂತ್ಯದ ವೇಳೆಗೆ ಸ್ಕೋರ್ 50 ರನ್‌ಗಳನ್ನು ದಾಟಿದೆ. ರಾಜಸ್ಥಾನ ಆರು ಓವರ್‌ಗಳಲ್ಲಿ ಒಂದು ವಿಕೆಟ್‌ಗೆ 51 ರನ್ ಗಳಿಸಿದೆ. ಯಶಸ್ವಿ 15 ಎಸೆತಗಳಲ್ಲಿ 33 ರನ್ ಮತ್ತು ಸ್ಯಾಮ್ಸನ್ ಆರು ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ರಾಜಸ್ಥಾನ ರಾಯಲ್ಸ್‌ನ ಆರಂಭಿಕ ಬ್ಯಾಟ್ಸ್‌ಮನ್ ಟಾಮ್ ಕಾಡ್ಮೋರ್ ಹೈದರಾಬಾದ್ ವಿರುದ್ಧ ಕೇವಲ 10 ರನ್ ಗಳಿಸಲಷ್ಟೇ ಶಕ್ತರಾದರು. ಅವರ ವಿಕೆಟ್ ಅನ್ನು ಪ್ಯಾಟ್ ಕಮಿನ್ಸ್ ಪಡೆದರು.
ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 175 ರನ್ ಗಳಿಸಿದೆ. ತಂಡದ ಪರ ಹೆನ್ರಿಚ್ ಕ್ಲಾಸೆನ್ ಗರಿಷ್ಠ 50 ರನ್, ಅಭಿಷೇಕ್ ಶರ್ಮಾ 34 ರನ್ ಮತ್ತು ರಾಹುಲ್ ತ್ರಿಪಾಠಿ 37 ರನ್ ಗಳಿಸಿದರು. ರಾಜಸ್ಥಾನ ಪರ ಅವೇಶ್ ಖಾನ್ ಮತ್ತು ಟ್ರೆಂಟ್ ಬೌಲ್ಟ್ ತಲಾ ಮೂರು ವಿಕೆಟ್ ಪಡೆದರು. ಸಂದೀಪ್ ಶರ್ಮಾ ಎರಡು ವಿಕೆಟ್ ಕಬಳಿಸಿದ್ದಾರೆ.
19 ಓವರ್‌ಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿದೆ. ತಂಡದ ಪರ ಪ್ಯಾಟ್ ಕಮಿನ್ಸ್ ಮತ್ತು ಶಹಬಾಜ್ ಅಹ್ಮದ್ ಕ್ರೀಸ್‌ನಲ್ಲಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅವೇಶ್ ಖಾನ್ ಅದ್ಭುತ ಬೌಲಿಂಗ್ ಮಾಡುತ್ತಿದ್ದಾರೆ. ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದಿದ್ದಾರೆ. ಅವರು ನಿತೀಶ್ ರೆಡ್ಡಿ ಮತ್ತು ಅಬ್ದುಲ್ ಸಮದ್ ಅವರನ್ನು ವಜಾಗೊಳಿಸಿದ್ದಾರೆ.
12 ಓವರ್‌ಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 4 ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿದೆ. ನಿತೀಶ್ ರೆಡ್ಡಿ 1 ರನ್ ಮತ್ತು ಹೆನ್ರಿಚ್ ಕ್ಲಾಸೆನ್ 21 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ವೇಗದ ಬೌಲರ್ ಸಂದೀಪ್ ಶರ್ಮಾ ಅದ್ಭುತ ಬೌಲಿಂಗ್ ಮಾಡಿ ಆರಂಭಿಕ ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡಿದರು. 28 ಎಸೆತಗಳಲ್ಲಿ 34 ರನ್ ಗಳಿಸಿ ಹೆಡ್ ಔಟಾದರು.
ಆರಂಭಿಕ ಹಿನ್ನಡೆಯ ನಂತರ, ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಹೆನ್ರಿಚ್ ಕ್ಲಾಸೆನ್ ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್ ನಿಭಾಯಿಸುತ್ತಿದ್ದಾರೆ. ಹೈದರಾಬಾದ್ ಎಂಟು ಓವರ್‌ಗಳ ಅಂತ್ಯಕ್ಕೆ ಮೂರು ವಿಕೆಟ್‌ಗೆ 92 ರನ್ ಗಳಿಸಿದೆ. ಹೆಡ್ 21 ಎಸೆತಗಳಲ್ಲಿ 31 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ ಮತ್ತು ಕ್ಲಾಸೆನ್ 10 ರನ್ ಗಳಿಸಿದ್ದಾರೆ.
ಹೈದರಾಬಾದ್ ಪವರ್‌ಪ್ಲೇನಲ್ಲಿ ಮೂರನೇ ವಿಕೆಟ್ ಕಳೆದುಕೊಂಡಿದೆ. ಹೊಸ ಬ್ಯಾಟ್ಸ್ಮನ್ಆಗಿ ಬಂದ ಏಡೆನ್ ಮಾರ್ಕ್ರಾಮ್ ಕೂಡ ವಿಕೆಟ್ ಕಳೆದುಕೊಂಡರು. ಮಾರ್ಕ್ರಾಮ್ ಒಂದು ರನ್ ಗಳಿಸಿ ಔಟಾದರು.
ಟ್ರೆಂಟ್ ಬೌಲ್ಟ್ ತಮ್ಮ ಅದ್ಭುತ ಬೌಲಿಂಗ್ ಮುಂದುವರಿಸಿ ಫಾರ್ಮ್ನಲ್ಲಿದ್ದ ರಾಹುಲ್ ತ್ರಿಪಾಠಿಯನ್ನು ಔಟ್ ಮಾಡಿದರು. ರಾಹುಲ್ 15 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 37 ರನ್ ಗಳಿಸಿ ಔಟಾದರು. ಇದೀಗ ಏಡನ್ ಮಾರ್ಕ್ರಾಮ್ ಕ್ರೀಸ್‌ಗೆ ಬಂದಿದ್ದಾರೆ.
ಆರಂಭಿಕ ಹಿನ್ನಡೆಯ ನಡುವೆಯೂ ಹೈದರಾಬಾದ್ ರನ್ ರೇಟ್ ಕುಂಠಿತವಾಗಿಲ್ಲ. ಅಭಿಷೇಕ್ ಔಟಾದ ಬಳಿಕ ನೂತನ ಬ್ಯಾಟ್ಸ್‌ಮನ್ ಆಗಿ ಬಂದ ರಾಹುಲ್ ತ್ರಿಪಾಠಿ ಅವರ ಅದ್ಭುತ ಬ್ಯಾಟಿಂಗ್ನಿಂದಾಗಿ ಹೈದರಾಬಾದ್ ನಾಲ್ಕು ಓವರ್‌ಗಳ ಅಂತ್ಯಕ್ಕೆ ಒಂದು ವಿಕೆಟ್‌ಗೆ 45 ರನ್ ಗಳಿಸಿದೆ. ರಾಹುಲ್ ತ್ರಿಪಾಠಿ 12 ಎಸೆತಗಳಲ್ಲಿ 26 ರನ್ ಗಳಿಸಿ ಆಡುತ್ತಿದ್ದರೆ, ಟ್ರೆವಿಡ್ ಹೆಡ್ ಆರು ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡುವ ಮೂಲಕ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಸನ್‌ರೈಸರ್ಸ್ ಹೈದರಾಬಾದ್‌ಗೆ ಮೊದಲ ಹೊಡೆತ ನೀಡಿದರು. ಐದು ಎಸೆತಗಳಲ್ಲಿ 12 ರನ್ ಗಳಿಸಿ ಅಭಿಷೇಕ್ ಔಟಾದರು. ಇದೀಗ ರಾಹುಲ್ ತ್ರಿಪಾಠಿ ಕ್ರೀಸ್‌ಗೆ ಬಂದಿದ್ದಾರೆ.
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ.ನಟರಾಜನ್.
ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್ ಕಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.
ಟಾಸ್ ಗೆದ್ದ ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Published On - 7:01 pm, Fri, 24 May 24