SRH vs RR Predicted XI: ಸ್ಯಾಮ್ಸನ್ vs ವಿಲಿಯಮ್ಸನ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

| Updated By: ಝಾಹಿರ್ ಯೂಸುಫ್

Updated on: Mar 28, 2022 | 8:17 PM

SRH vs RR Predicted XI: ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಜೆ ಸುಚಿತ್, ಶ್ರೇಯಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಸೌರಭ್ ದುಬೆ

SRH vs RR Predicted XI: ಸ್ಯಾಮ್ಸನ್ vs ವಿಲಿಯಮ್ಸನ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11
SRH vs RR Predicted XI
Follow us on

IPL 2022: ಮಂಗಳವಾರ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 5ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ 15 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಸ್​ಆರ್​ಹೆಚ್ ತಂಡವು 8 ಬಾರಿ ಗೆದ್ದರೆ, ರಾಜಸ್ಥಾನ್ ರಾಯಲ್ಸ್ 7 ಸಲ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಗೆಲುವಿನ ಸಂಖ್ಯೆಯಲ್ಲಿ ಸಮಬಲ ಸಾಧಿಸುವ ಇರಾದೆಯಲ್ಲಿದೆ ರಾಜಸ್ಥಾನ್ ರಾಯಲ್ಸ್. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯಲಿದೆ. ಮತ್ತೊಂದೆಡೆ ಎಸ್​ಆರ್​ಹೆಚ್​ ತಂಡ ಈ ಬಾರಿ ಭರ್ಜರಿ ಗೆಲುವಿನೊಂದಿಗೆ ಐಪಿಎಲ್​ನಲ್ಲಿ ಶುಭಾರಂಭ ಮಾಡುವ ಇರಾದೆಯಲ್ಲಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ತಂಡವು 8ನೇ ಸ್ಥಾನ ಪಡೆದಿತ್ತು. ಹೀಗಾಗಿ ಈ ಬಾರಿ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಬಹುತೇಕ ಆಟಗಾರರು ಬದಲಾಗಿದ್ದಾರೆ.

ಅದರಂತೆ ಎಸ್​ಆರ್​ಹೆಚ್​ ತಂಡದಲ್ಲಿ ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ವಾಷಿಂಗ್ಟನ್ ಸುಂದರ್ ಸೇರಿದಂತೆ ಅನೇಕ ಸ್ಟಾರ್ ಆಟಗಾರರ ಆಗಮನವಾಗಿದೆ. ಹೀಗಾಗಿ ಸನ್​ರೈಸರ್ಸ್​ ಕೂಡ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯುವುದರಲ್ಲಿ ಅನುಮಾನವೇ ಇಲ್ಲ. ಆದರೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಈ ಬಾರಿ ಕೂಡ ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ದೇವದತ್ ಪಡಿಕ್ಕಲ್, ಚಹಲ್, ಶಿಮ್ರಾನ್ ಹೆಟ್ಮೆಯರ್​ನಂತಹ ಆಟಗಾರರು ಕೂಡ ಈ ಬಾರಿ ತಂಡದಲ್ಲಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಹಾಗಿದ್ರೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ ನೋಡೋಣ…

SRH ಸಂಭಾವ್ಯ ಪ್ಲೇಯಿಂಗ್ 11: ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್,ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್.

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), 4 ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಮ್ಸ್ ನೀಶಮ್, ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ.

ಸನ್ ರೈಸರ್ಸ್ ಹೈದರಾಬಾದ್ (SRH) ಸಂಪೂರ್ಣ ತಂಡ:
ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಜೆ ಸುಚಿತ್, ಶ್ರೇಯಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಸೌರಭ್ ದುಬೆ, ಸೀನ್ ಅಬಾಟ್, ಆರ್ ಸಮರ್ಥ್, ಜೆ ಸುಚಿತ್, ರೊಮಾರಿಯೋ ಶೆಫರ್ಡ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ರಾಜಸ್ಥಾನ್ ರಾಯಲ್ಸ್ (RR) ಸಂಪೂರ್ಣ ತಂಡ:
ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ, ಕೆಸಿ ಕಾರ್ಯಪ್ಪ, ನವದೀಪ್ ಸೈನಿ, ತೇಜಸ್ ಬರೋಕಾ, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಕುಲ್ದ್ರುವ್ ಜುರೆಲ್ , ಶುಭಂ ಗರ್ವಾಲ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವಾನ್ ಡೆರ್ ಡುಸ್ಸೆನ್, ಜೇಮ್ಸ್ ನೀಶಮ್, ಡೇರಿಲ್ ಮಿಚೆಲ್, ಕರುಣ್ ನಾಯರ್, ಒಬೆಡ್ ಮೆಕಾಯ್.

 

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

Published On - 8:17 pm, Mon, 28 March 22