ವೈಭವ್ ಸಿಡಿಲಬ್ಬರ: ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ

Sri Lanka A vs India A, Final: ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ನಡುವಣ ತ್ರಿಕೋನ ಸರಣಿಯ ಅಂತಿಮ ಪಂದ್ಯವು ದಂಬುಲ್ಲಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ ಮತ್ತು ಭಾರತ ಎ ತಂಡಗಳು ಮುಖಾಮುಖಿಯಾಗಿದ್ದು, ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿದೆ.

ವೈಭವ್ ಸಿಡಿಲಬ್ಬರ: ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ
Vaibhav - Priyansh
Image Credit source: BCCI

Updated on: Jun 21, 2026 | 1:52 PM

ದಂಬುಲ್ಲಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಎ ತಂಡ 333 ರನ್​ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಚ್ಚಿಗೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ವೈಭವ್ ಸೂರ್ಯವಂಶಿ ತಾನೆದುರಿಸಿದ ಮೊದಲ 11 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್​ಗಳನ್ನು ಬಾರಿಸಿದ್ದರು. ಈ ಮೂಲಕ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಅರ್ಧಶತಕದ ಬಳಿಕ ಕೂಡ ಅಬ್ಬರಿಸಿದ ವೈಭವ್ ಸೂರ್ಯವಂಶಿ 29 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 94 ರನ್ ಬಾರಿಸಿ ಔಟಾದರು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾ ಸ್ಕೋರ್ 8.1 ಓವರ್​ಗಳಲ್ಲಿ 132 ಕ್ಕೆ ಬಂದು ನಿಂತಿತ್ತು. ಅತ್ತ ವೈಭವ್ ಔಟಾಗುತ್ತಿದ್ದಂತೆ ಪ್ರಿಯಾಂಶ್ ಆರ್ಯ (39) ಕೂಡ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ರುತುರಾಜ್ ಗಾಯಕ್ವಾಡ್ 40 ರನ್ ಬಾರಿಸಿದರೆ, ನಾಯಕ ತಿಲಕ್ ವರ್ಮಾ 67 ರನ್​ ಸಿಡಿಸಿದರು. ಇನ್ನು ಕುಮಾರ್ ಕುಶಾಗ್ರ 36 ರನ್​ಗಳ ಕೊಡುಗೆ ನೀಡಿದರು.  ಆದರೆ ಕಳೆದ ಮ್ಯಾಚ್​ನಲ್ಲಿ ಅಬ್ಬರಿಸಿದ್ದ ಸೂರ್ಯಂಶ್ ಶೆಡ್ಗೆ ಈ ಬಾರಿ ಕೇವಲ 2 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು.

ಇನ್ನು ಅಂತಿಮ ಹಂತದಲ್ಲಿ ಅಬ್ಬರಿಸಿದ ಅನ್ಕೂಲ್ ರಾಯ್ 15 ಎಸೆತಗಳಲ್ಲಿ 39 ರನ್ ಚಚ್ಚಿದರು. ಈ ಮೂಲಕ ಭಾರತ ಎ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 377 ರನ್ ಕಲೆಹಾಕಿದೆ.

ಶ್ರೀಲಂಕಾ ಎ ಪ್ಲೇಯಿಂಗ್ 11: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್) , ಅವಿಷ್ಕಾ ಫೆರ್ನಾಂಡೊ , ನುವಾನಿಡು ಫೆರ್ನಾಂಡೊ ,
ಸದೀರ ಸಮರವಿಕ್ರಮ , ಸಹನ್ ಅರಚ್ಚಿಗೆ (ನಾಯಕ) , ರವಿಂದು ಫರ್ನಾಂಡೊ , ವನುಜಾ ಸಹನ್ , ಮೊಹಮ್ಮದ್ ಶಿರಾಜ್ , ವಿಜಯಕಾಂತ್ ವಿಯಸ್ಕಾಂತ್ , ದುಲಾಜ್ ಸಮುದಿತಾ ,ಕುಗಥಾಸ್ ಮಥುಲನ್.

ಇದನ್ನೂ ಓದಿ: ಪೊಲಾರ್ಡ್​ ಪವರ್​ಗೆ ಗೇಲ್ ಸಾರ್ವಕಾಲಿಕ ವಿಶ್ವ ದಾಖಲೆ ಉಡೀಸ್!

ಭಾರತ ಎ ಪ್ಲೇಯಿಂಗ್ 11: ಪ್ರಿಯಾಂಶ್ ಆರ್ಯ , ವೈಭವ್ ಸೂರ್ಯವಂಶಿ , ರುತುರಾಜ್ ಗಾಯಕ್ವಾಡ್ , ತಿಲಕ್ ವರ್ಮಾ (ನಾಯಕ) , ಕುಮಾರ್ ಕುಶಾಗ್ರ (ವಿಕೆಟ್ ಕೀಪರ್) , ಸೂರ್ಯಾಂಶ್ ಶೆಡ್ಗೆ , ನಿಶಾಂತ್ ಸಿಂಧು , ಅನ್ಕೂಲ್ ರಾಯ್ , ವಿಪ್ರಾಜ್ ನಿಗಮ್ , ಅಶೋಕ್ ಶರ್ಮಾ , ಯಶ್ ಠಾಕೂರ್.

 

Follow Us