AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs SL A: ಶ್ರೀಲಂಕಾ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ

Sri Lanka A vs India A: ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯ 4ನೇ ಪಂದ್ಯವು ದಂಬುಲ್ಲಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಶ್ರೀಲಂಕಾ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ಲಂಕಾ ಪಡೆ ಬೌಲಿಂಗ್ ಆಯ್ದುಕೊಂಡಿದ್ದರು.

IND A vs SL A: ಶ್ರೀಲಂಕಾ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ
Ind A Vs Sl A
ಝಾಹಿರ್ ಯೂಸುಫ್
|

Updated on:Jun 15, 2026 | 3:23 PM

Share

ಭಾರತ, ಶ್ರೀಲಂಕಾ, ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 265 ರನ್​​ಗಳಿಸಿದೆ.  ದಂಬುಲ್ಲಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಎ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು.

ಆರಂಭಿಕರಾದ ವೈಭವ್ ಸೂರ್ಯವಂಶಿ (21) ಹಾಗೂ ಪ್ರಭ್​ಸಿಮ್ರಾನ್ ಸಿಂಗ್ (11) ಬೇಗನೆ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ರುತುರಾಜ್ ಗಾಯಕ್ವಾಡ್ (37) ಹಾಗೂ ತಿಲಕ್ ವರ್ಮಾ (23) ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಆದರೆ ಆ ಬಳಿಕ ಬಂದ ಆಯುಷ್ ಬದೋನಿ ಕೇವಲ 15 ರನ್​ಗಳಿಸಿ ಔಟಾದರೆ, ನಿಶಾಂತ್ ಸಿಂಧು 6 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆ ಕಣಕ್ಕಿಳಿದ ಸೂರ್ಯಾಂಶ್ ಶೆಡ್ಗೆ 66 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 77 ರನ್ ಬಾರಿಸಿದರು.

ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ವಿಪ್ರಾಜ್ ನಿಗಮ್ 49 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 51 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಭಾರತ ಎ ತಂಡ 49.2 ಓವರ್​ಗಳಲ್ಲಿ 265 ರನ್​ ಬಾರಿಸಿ ಆಲೌಟ್ ಆಗಿದೆ.

ಇದೀಗ 266 ರನ್​ಗಳ ಗುರಿ ಬೆನ್ನತ್ತಲಾರಂಭಿಸಿರುವ ಶ್ರೀಲಂಕಾ ತಂಡವು 10 ಓವರ್​ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ನಷ್ಟಕ್ಕೆ 86 ರನ್ ಕಲೆಹಾಕಿದೆ.

ಶ್ರೀಲಂಕಾ ಎ ಪ್ಲೇಯಿಂಗ್ 11: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್) , ಅವಿಷ್ಕಾ ಫೆರ್ನಾಂಡೊ , ವಿಷೇನ್ ಹಾಲಂಬಗೆ , ಸದೀರ ಸಮರವಿಕ್ರಮ , ಅಹಾನ್ ವಿಕ್ರಮಸಿಂಘೆ , ಸಹನ್ ಅರಚ್ಚಿಗೆ (ನಾಯಕ) , ವನುಜಾ ಸಹನ್ , ವಿಜಯಕಾಂತ್ ವಿಯಸ್ಕಾಂತ್ , ಕುಗಥಾಸ್ ಮಥುಲನ್ , ಮೊಹಮ್ಮದ್ ಶಿರಾಜ್ , ಚಾಮಿಕಾ ಗುಣಶೇಖರ.

ಇದನ್ನೂ ಓದಿ: ಮೊದಲ ಪಂದ್ಯದಲ್ಲೇ 7 ಗೋಲು ಬಾರಿಸಿ ವಿಶ್ವ ದಾಖಲೆ ಬರೆದ ಜರ್ಮನಿ!

ಭಾರತ ಎ ಪ್ಲೇಯಿಂಗ್ 11: ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್ ), ವೈಭವ್ ಸೂರ್ಯವಂಶಿ , ರುತುರಾಜ್ ಗಾಯಕ್ವಾಡ್ , ತಿಲಕ್ ವರ್ಮಾ (ನಾಯಕ) , ಆಯುಷ್ ಬದೋನಿ , ಸೂರ್ಯಾಂಶ್ ಶೆಡ್ಗೆ , ನಿಶಾಂತ್ ಸಿಂಧು , ಅನುಕೂಲ್ ರಾಯ್ , ಅರ್ಷದ್ ಖಾನ್ , ವಿಪ್ರಾಜ್ ನಿಗಮ್ , ಯಶ್ ಠಾಕೂರ್.

Published On - 2:39 pm, Mon, 15 June 26

Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ