Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Sri lanka: ಭಾರತದ ವಿರುದ್ದದ ಸರಣಿಗೆ ಶ್ರೀಲಂಕಾ ತಂಡ ಪ್ರಕಟ: ಟೀಮ್​ನಲ್ಲಿ ಮಿಸ್ಟರಿ ಸ್ಪಿನ್ನರ್

Sri lanka squad for india: ದಸುನ್ ಶನಕ (ನಾಯಕ), ಚರಿತ್ ಅಸಲಂಕ (ಉಪನಾಯಕ), ಪಾತುಮ್ ನಿಸಂಕ, ಕುಸಲ್ ಮೆಂಡಿಸ್, ದಿನೇಶ್ ಚಾಂಡಿಮಲ್, ಧನುಷ್ಕ ಗುಣತಿಲಕ, ಕಮಿಲ್ ಮಿಶ್ರಾ, ಜನತ್ ಲಿಯಾನಗೆ, ವನಿಂದು ಹಸರಂಗ.

India vs Sri lanka: ಭಾರತದ ವಿರುದ್ದದ ಸರಣಿಗೆ ಶ್ರೀಲಂಕಾ ತಂಡ ಪ್ರಕಟ: ಟೀಮ್​ನಲ್ಲಿ ಮಿಸ್ಟರಿ ಸ್ಪಿನ್ನರ್
Sri lanka
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 21, 2022 | 3:23 PM

ಭಾರತ ವಿರುದ್ಧದ T20 ಸರಣಿಗೆ (India vs Sri lanka) ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ. ಫೆಬ್ರವರಿ 24 ರಿಂದ ಪ್ರಾರಂಭವಾಗುವ ಈ ಸರಣಿಗೆ ಲಂಕಾ ಕ್ರಿಕೆಟ್ ಮಂಡಳಿ 18 ಸದಸ್ಯರ ತಂಡವನ್ನು(Sri Lanka T20I Squad) ಆಯ್ಕೆ ಮಾಡಿದೆ . ತಂಡದ ನಾಯಕನಾಗಿ ದಸುನ್ ಶನಕ ಅವರೇ ಮುಂದುವರೆಯಲಿದ್ದು, ಚರಿತ್ ಅಸಲಂಕ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ ತಂಡದಲ್ಲಿ ಚಾಂಡಿಮಲ್, ವನಿಂದು ಹಸರಂಗ ಅವರಂತಹ ಸ್ಟಾರ್ ಆಟಗಾರರಿದ್ದಾರೆ. ಇದಲ್ಲದೇ ಮಿಸ್ಟರಿ ಸ್ಪಿನ್ನರ್ ಮಹೇಶ್ ತೀಕ್ಷಣ ಕೂಡ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ವಿಶೇಷ ಎಂದರೆ ಮಹೇಶ್ ತೀಕ್ಷಣ ಅವರನ್ನು ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಖರೀದಿಸಿದೆ.

ಟಿ20 ಸರಣಿಗೆ ಶ್ರೀಲಂಕಾ ತಂಡ ಹೀಗಿದೆ – ದಸುನ್ ಶನಕ (ನಾಯಕ), ಚರಿತ್ ಅಸಲಂಕ (ಉಪನಾಯಕ), ಪಾತುಮ್ ನಿಸಂಕ, ಕುಸಲ್ ಮೆಂಡಿಸ್, ದಿನೇಶ್ ಚಾಂಡಿಮಲ್, ಧನುಷ್ಕ ಗುಣತಿಲಕ, ಕಮಿಲ್ ಮಿಶ್ರಾ, ಜನತ್ ಲಿಯಾನಗೆ, ವನಿಂದು ಹಸರಂಗ, ಚಮಿಕ ಕರುಣರತ್ನೆ, ಲಹಿರು ಕುಮಾರ, ದುಷ್ಮಂತ ಚಮೀರಾ, ಬಿನುರ ಫೆರ್ನಾಂಡೊ, ಶೀರನ್ ಫೆರ್ನಾಂಡೊ, ಮಹೇಶ್ ತೀಕ್ಷಣ, ಜೆಫ್ರಿ ವೆಂಡರಸ್, ಪ್ರವೀಣ್ ಜಯವಿಕ್ರಮ, ಆಶಿಯಾನ್ ಡೇನಿಯಲ್ಸ್.

ಶ್ರೀಲಂಕಾ ಕಳಪೆ ಫಾರ್ಮ್​: ಶ್ರೀಲಂಕಾ ತಂಡವು ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ದ ಟಿ20 ಸರಣಿ ಆಡಿತ್ತು. ಈ ಸರಣಿಯಲ್ಲಿ 1-4 ಅಂತರದ ಹೀನಾಯ ಸೋಲು ಎದುರಿಸಬೇಕಾಯಿತು. ಮೊದಲ ನಾಲ್ಕು ಪಂದ್ಯಗಳಲ್ಲಿ ಸೋತಿದ್ದ ಶ್ರೀಲಂಕಾ ತಂಡ ಕೊನೆಯ ಪಂದ್ಯವನ್ನು ಮಾತ್ರ ಗೆದ್ದುಕೊಂಡಿತು. ಈ ಹೀನಾಯ ಸೋಲಿನ ಬೆನ್ನಲ್ಲೇ ತಂಡವು ಭಾರತ ಪ್ರವಾಸ ಕೈಗೊಳ್ಳುತ್ತಿದೆ.

ಭಾರತ-ಶ್ರೀಲಂಕಾ ಸರಣಿ ವೇಳಾಪಟ್ಟಿ: ಭಾರತ ಮತ್ತು ಶ್ರೀಲಂಕಾ ನಡುವಿನ 3 ಟಿ20 ಪಂದ್ಯಗಳ ಸರಣಿಯ ನಂತರ ಎರಡು ಟೆಸ್ಟ್‌ಗಳ ಸರಣಿಯೂ ನಡೆಯಲಿದೆ. ಫೆಬ್ರವರಿ 24 ರಿಂದ ಲಕ್ನೋದಲ್ಲಿ ಟಿ20 ಸರಣಿ ಆರಂಭವಾಗಲಿದೆ. ಇದರ ನಂತರ ಫೆಬ್ರವರಿ 26 ಮತ್ತು 27 ರಂದು ಧರ್ಮಶಾಲಾದಲ್ಲಿ ಟಿ20 ಪಂದ್ಯಗಳು ನಡೆಯಲಿವೆ. ಮೊದಲ ಟೆಸ್ಟ್ ಮಾರ್ಚ್ 4 ರಿಂದ ಮೊಹಾಲಿಯಲ್ಲಿ ಮತ್ತು ಎರಡನೇ ಟೆಸ್ಟ್ ಮಾರ್ಚ್ 12 ರಿಂದ ಬೆಂಗಳೂರಿನಲ್ಲಿ ಶುರುವಾಗಲಿದೆ.

ಟಿ20 ಸರಣಿಗೆ ಭಾರತ ತಂಡ – ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್ ಮತ್ತು ಅವೇಶ್ ಖಾನ್.

ಟೆಸ್ಟ್ ಸರಣಿಗೆ ಭಾರತ ತಂಡ – ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಭ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್ನೆಸ್ ಆಧರಿಸಿ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

(Sri lanka announced 18 members team for t20i series against india)

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ