T20 World Cup: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಏಷ್ಯನ್ ಚಾಂಪಿಯನ್ ಶ್ರೀಲಂಕಾ; ಯಾರಿಗೆಲ್ಲ ಸ್ಥಾನ?

T20 World Cup: ಏಷ್ಯಾಕಪ್ ಗೆದ್ದ ತಂಡದಲ್ಲಿ ಶ್ರೀಲಂಕಾ ಮಂಡಳಿ ಹೆಚ್ಚಿನ ಬದಲಾವಣೆ ಮಾಡಿಲ್ಲ. ತಂಡದ ಸ್ಟಾರ್ ವೇಗದ ಬೌಲರ್ ದುಷ್ಮಂತ ಚಮೀರ ಹಿಮ್ಮಡಿ ಗಾಯಕ್ಕೆ ಒಳಗಾಗಿದ್ದು, ಈ ನಡುವೆಯೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

T20 World Cup: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಏಷ್ಯನ್ ಚಾಂಪಿಯನ್ ಶ್ರೀಲಂಕಾ; ಯಾರಿಗೆಲ್ಲ ಸ್ಥಾನ?
ಲಂಕಾ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on:Sep 16, 2022 | 5:55 PM

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಷ್ಯಾಕಪ್​ನ (Asia Cup) ನೂತನ​ ಚಾಂಪಿಯನ್ ಶ್ರೀಲಂಕಾ, ದಸುನ್ ಶನಕ (Dasun Shanka) ಅವರ ನಾಯಕತ್ವದಲ್ಲಿ ಟಿ20 ವಿಶ್ವಕಪ್‌ಗೆ (T20 World Cup) 15 ಆಟಗಾರರ ತಂಡವನ್ನು ಪ್ರಕಟಿಸಿದೆ. ಇದರೊಂದಿಗೆ ನಾಲ್ವರು ಸ್ಟ್ಯಾಂಡ್‌ಬೈ ಆಟಗಾರರ ಹೆಸರನ್ನು ಕೂಡ ಪ್ರಕಟಿಸಲಾಗಿದೆ. ಕ್ರೀಡಾ ಸಚಿವ ರೋಷನ್ ರಣಸಿಂಗ ಈ ಹೆಸರುಗಳನ್ನು ಅನುಮೋದಿಸಿದ್ದಾರೆ. ಆದರೆ ಶ್ರೀಲಂಕಾ ಸೂಪರ್ 12 ರಲ್ಲಿ ನೇರ ಪ್ರವೇಶ ಪಡೆದಿಲ್ಲ. ಹೀಗಾಗಿ ಈ ತಂಡ ಅರ್ಹತಾ ಪಂದ್ಯಗಳನ್ನು ಆಡುವ ಮೂಲಕ ಸೂಪರ್ 12 ಗೆ ಎಂಟ್ರಿಕೊಡಬೇಕಿದೆ.

ಫಿಟ್ನೆಸ್ ಮೇಲೆ ಚಮೀರಾ ಭವಿಷ್ಯ

ಏಷ್ಯಾಕಪ್ ಗೆದ್ದ ತಂಡದಲ್ಲಿ ಶ್ರೀಲಂಕಾ ಮಂಡಳಿ ಹೆಚ್ಚಿನ ಬದಲಾವಣೆ ಮಾಡಿಲ್ಲ. ತಂಡದ ಸ್ಟಾರ್ ವೇಗದ ಬೌಲರ್ ದುಷ್ಮಂತ ಚಮೀರ ಹಿಮ್ಮಡಿ ಗಾಯಕ್ಕೆ ಒಳಗಾಗಿದ್ದು, ಈ ನಡುವೆಯೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಆಸ್ಟ್ರೇಲಿಯಕ್ಕೆ ತೆರಳುವ ಮುನ್ನ ಅವರು ಫಿಟ್ನೆಸ್ ಸಾಬೀತುಪಡಿಸಬೇಕಿದೆ. ಮತ್ತೊಂದೆಡೆ, ವೇಗದ ಬೌಲರ್ ಲಹಿರು ಕೂಡ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಆದ್ದರಿಂದ ಅವರು ಕೂಡ ಫಿಟ್ನೆಸ್ ಸಾಭೀತುಪಡಿಸಬೇಕಾಯಿತು.

ಸ್ಟ್ಯಾಂಡ್‌ಬೈ ಲಿಸ್ಟ್​ನಲ್ಲಿ ಚಾಂಡಿಮಾಲ್

ಏಷ್ಯಾಕಪ್‌ಗೆ ಪದಾರ್ಪಣೆ ಮಾಡಿದ್ದ ಮತಿಶಾ ಪತಿರಾಣ ಮುಖ್ಯ ತಂಡದಲ್ಲಿ ಅಥವಾ ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಸ್ಥಾನ ಪಡೆದಿಲ್ಲ. ಇವರಲ್ಲದೆ ನುವಾ ತುಸಾರಾ ಮತ್ತು ಅಸಿತ್ ಫೆರ್ನಾಂಡೊ ಅವರನ್ನೂ ತಂಡದಿಂದ ಕೈಬಿಡಲಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಾಲ್ ಏಷ್ಯಾಕಪ್‌ನೊಂದಿಗೆ ಟಿ20 ತಂಡದಲ್ಲಿ ಪುನರಾಗಮನ ಮಾಡಿದ್ದರು. ಆದರೆ ಅವರಿಗೆ ಸ್ಟ್ಯಾಂಡ್‌ಬೈ ಆಟಗಾರರ ಲಿಸ್ಟ್​ನಲ್ಲಿ ಸ್ಥಾನ ನೀಡಲಾಗಿದೆ. ಏಷ್ಯಾಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವೇಗದ ಬೌಲರ್ ದಿಲ್ಶಾನ್ ಮಧುಶಂಕ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಅಕ್ಟೋಬರ್ 16 ರಂದು ಮೊದಲ ಪಂದ್ಯ

ಯುಎಇಯಲ್ಲಿ ನಡೆದ ಏಷ್ಯಾಕಪ್​ನಲ್ಲಿ ಶ್ರೀಲಂಕಾ ಅಮೋಘ ಆಟ ಪ್ರದರ್ಶಿಸಿ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಸೋತ ನಂತರ ಈ ತಂಡ ಯಾವುದೇ ಪಂದ್ಯವನ್ನು ಸೋಲಲಿಲ್ಲ. ದೇಶದ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದ ಈ ತಂಡ ಏಷ್ಯಾಕಪ್​ನಲ್ಲಿ ಅದ್ಭುತ ಆಟ ಪ್ರದರ್ಶಿಸಿತು. ಶ್ರೀಲಂಕಾ ತನ್ನ ಮೊದಲ ಪಂದ್ಯವನ್ನು ನಮೀಬಿಯಾ ವಿರುದ್ಧ ಅಕ್ಟೋಬರ್ 16 ರಂದು ಆಡಲಿದೆ. ಅದೇ ಸಮಯದಲ್ಲಿ, ಅಕ್ಟೋಬರ್ 18 ರಂದು, ಅವರು ಯುಎಇ ವಿರುದ್ಧ ಮತ್ತು ನಂತರ ಅಕ್ಟೋಬರ್ 20 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದ್ದಾರೆ.

ಶ್ರೀಲಂಕಾ ತಂಡ

ದಸುನ್ ಶನಕ, ದನುಷ್ಕ ಗುಣತಿಲಕ, ಪಾತುಂ ನಿಸಂಕ, ಕುಸಲ್ ಮೆಂಡಿಸ್, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಮಹಿಷ್ ಟೀಕ್ಷಣ, ಜೆಫ್ರಿ ವಾಂಡರ್ಸೆ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರಾ, ಲಹೀರು ಕುಮಾರ, ಪ್ರಮೋದ್ ಮಧುಶನ, ದಿಲ್ಶನ್ ಕುಮಾರ್

ಸ್ಟ್ಯಾಂಡ್‌ಬೈ ಆಟಗಾರರು- ಅಶೇನ್ ಬಂಡಾರ, ಪ್ರವೀಣ್ ಜಯವಿಕ್ರಮ, ದಿನೇಶ್ ಚಾಂಡಿಮಲ್, ಬಿನೂರ ಫೆರ್ನಾಂಡೊ ಮತ್ತು ನುವಾನಿಡು ಫೆರ್ನಾಂಡೊ

Published On - 5:31 pm, Fri, 16 September 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್