SL vs NED: ನೆದರ್ಲೆಂಡ್ಸ್ ತಂಡವನ್ನು ಮಣಿಸಿ ಸೂಪರ್ 12 ಸುತ್ತಿಗೆ ಎಂಟ್ರಿಕೊಟ್ಟ ಶ್ರೀಲಂಕಾ ತಂಡ

ICC Men's T20 World Cup 2022: ಹಾಲಿ ಏಷ್ಯಾಕಪ್ ಚಾಂಪಿಯನ್‌ ಶ್ರೀಲಂಕಾ ತಂಡ ಕೊನೆಗೂ ಟಿ20 ವಿಶ್ವಕಪ್ ಸೂಪರ್ 12 ಸುತ್ತಿಗೆ ಎಂಟ್ರಿಕೊಟ್ಟಿದೆ.

SL vs NED: ನೆದರ್ಲೆಂಡ್ಸ್ ತಂಡವನ್ನು ಮಣಿಸಿ ಸೂಪರ್ 12 ಸುತ್ತಿಗೆ ಎಂಟ್ರಿಕೊಟ್ಟ ಶ್ರೀಲಂಕಾ ತಂಡ
ಶ್ರೀಲಂಕಾ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on:Oct 20, 2022 | 1:41 PM

ಹಾಲಿ ಏಷ್ಯಾಕಪ್ ಚಾಂಪಿಯನ್‌ ಶ್ರೀಲಂಕಾ ತಂಡ ಕೊನೆಗೂ ಟಿ20 ವಿಶ್ವಕಪ್ (T20 World Cup) ಸೂಪರ್ 12 ಸುತ್ತಿಗೆ ಎಂಟ್ರಿಕೊಟ್ಟಿದೆ. ಮೊದಲ ಅರ್ಹತಾ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಹೀನಾಯ ಸೋಲನುಭವಿಸಿದ್ದ ಲಂಕಾ ಪಡೆಯ ಸಿದ್ದತೆಯ ಬಗ್ಗೆ ಸಾಕಷ್ಟು ಚರ್ಚೆಗಳು ಆರಂಭವಾಗಿದ್ದವು. ಆದರೀಗ ನೆದರ್ಲೆಂಡ್ಸ್ ತಂಡವನ್ನು ಮಣಿಸುವುದರೊಂದಿಗೆ ಲಂಕಾ ಪಡೆ ಟಿ20 ವಿಶ್ವಕಪ್‌ನ ಸೂಪರ್-12 ಗೆ ಲಗ್ಗೆ ಇಟ್ಟಿದೆ. ಶ್ರೀಲಂಕಾದ ಈ ಗೆಲುವಿನಲ್ಲಿ ಆರಂಭಿಕ ಆಟಗಾರ ಕುಸಾಲ್ ಮೆಂಡಿಸ್ (Kusal Mendis) ಮತ್ತು ಲೆಗ್ ಸ್ಪಿನ್ನರ್ ವನಿಂದು ಹಸರಂಗ (Vanendu Hasaranga) ಹೀರೋ ಆದರು. ಬ್ಯಾಟಿಂಗ್​ನಲ್ಲಿ ಕುಸಾಲ್ ಮೆಂಡಿಸ್ ಅದ್ಭುತ ಅರ್ಧಶತಕ ಬಾರಿಸಿ, 79 ರನ್‌ಗಳ ಅದ್ಭುತ ಇನ್ನಿಂಗ್ಸ್‌ ಆಡಿದರು. ಹಾಗೆಯೇ ಬೌಲಿಂಗ್​ನಲ್ಲಿ ವನಿಂದು ಹಸರಂಗ 4 ಓವರ್​ಗಳಲ್ಲಿ 28 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡದ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ. 36 ರನ್​ಗಳಿದ್ದಾಗ ತಂಡದ ಆರಂಭಿಕ ಆಟಗಾರ ಪಾತುಮ್ ನಿಸ್ಸಾಂಕ 14 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಆದರೆ ನಿಸ್ಸಾಂಕ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಕುಸಾಲ್ ಮೆಂಡಿಸ್ 44 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 79 ರನ್ ಚಚ್ಚಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಚರಿತ್ ಅಸಲಂಕ ತಂಡಕ್ಕೆ 31 ರನ್​ಗಳ ಕೊಡುಗೆ ನೀಡಿದರೆ, ಭಾನುಕ ರಾಜಪಕ್ಸೆ ಕೂಡ 19 ರನ್​ಗಳ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಲಂಕಾ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು.

ನೆದರ್ಲೆಂಡ್ಸ್ ಬ್ಯಾಟಿಂಗ್ ವೈಫಲ್ಯ

ಇನ್ನು ಟಾರ್ಗೆಟ್ ಬೆನ್ನತ್ತಿದ್ದ ನೆದರ್ಲೆಂಡ್ಸ್ ತಂಡದ ಆರಂಭವೂ ಲಂಕಾ ತಂಡದಂತೆ ಉತ್ತಮವಾಗಿರಲಿಲ್ಲ. 23 ರನ್​ಗಳಿದ್ದಾಗ ತಂಡದ ಮೊದಲ ವಿಕೆಟ್ ಪತನವಾಯಿತು. 7 ರನ್​ಗಳಿಸಿದ್ದ ವಿಕ್ರಾಮಾಜಿತ್ ಸಿಂಗ್ ಮಹೀಷ್ ತೀಕ್ಷಣಕ್ಕೆ ವಿಕೆಟ್ ಒಪ್ಪಿಸಿದರು. ಆದರೆ ಸಿಂಗ್ ಜೊತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಮ್ಯಾಕ್ಸ್ ಒ’ಡೌಡ್ ಮಾತ್ರ ಕೊನೆಯವರೆಗೂ ಅಜೇಯರಾಗಿ ಉಳಿದು ತಂಡಕ್ಕೆ 71 ರನ್​ಗಳ ಕೊಡುಗೆ ನೀಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 53 ಎಸೆತಗಳನ್ನು ಎದುರಿಸಿದ ಮ್ಯಾಕ್ಸ್ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 71 ರನ್ ಗಳಿಸಿದರು.

ಇನ್ನುಳಿದಂತೆ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಕೂಪರ್ ಹಾಗೂ ಸ್ಕಾಟ್ ಎಡ್ವರ್ಡ್​ ಕ್ರಮವಾಗಿ 16 ಮತ್ತು 21 ರನ್​ಗಳ ಕೊಡುಗೆ ನೀಡಿದರಾದರೂ ಕೊನೆಯವರೆಗೂ ನಿಂತು ಪಂದ್ಯ ಗೆಲ್ಲಿಸುವಲ್ಲಿ ವಿಫಲರಾದರು. ಅಂತಿಮವಾಗಿ ತಂಡದ ಬಾಲಗೊಂಚಿಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದರಿಂದ ನೆದರ್ಲೆಂಡ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 146 ರನ್ ಗಳಿಸಲಷ್ಟೇ ಶಕ್ತವಾಯಿತು.

ಬ್ಯಾನ್ ಆಗಿದ್ದ ಆಟಗಾರ ಗೆಲುವಿನ ಹೀರೋ

ಇಂಗ್ಲೆಂಡ್ ಪ್ರವಾಸದಲ್ಲಿ ಬಯೋ- ಬಬಲ್ ನಿಯಮ ಮುರಿದ ಆರೋಪದಡಿ ತಂಡದಿಂದ ಹೊರಬಿದ್ದಿದ್ದ ಕುಸಾಲ್ ಮೆಂಡಿಸ್ ಲಂಕಾ ತಂಡದ ಗೆಲುವಿಗೆ ಪ್ರಮುಖ ರೂವಾರಿಯಾದರು. ಮೆಂಡಿಸ್​ರನ್ನು ಇಂಗ್ಲೆಂಡ್ ಪ್ರವಾಸದಿಂದ ಮನೆಗೆ ವಾಪಸ್ ಕಳಿಸಿದ್ದಷ್ಟೇ ಅಲ್ಲದೆ, ಅವರನ್ನು ಲಂಕಾ ಕ್ರಿಕೆಟ್​ನಿಂದ ಒಂದು ವರ್ಷ ನಿಷೇಧಿಸಲಾಗಿತ್ತು. ಆದರೆ ಈ ಮಹತ್ವದ ಪಂದ್ಯದಲ್ಲಿ ಮೆಂಡಿಸ್ ಉತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Thu, 20 October 22

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್