Sri Lanka: ಸೂಪರ್-12 ಹಂತಕ್ಕೇರಿದ ಸಿಂಹಳೀಯರು: ಐರ್ಲೆಂಡ್ ವಿರುದ್ಧ ಶ್ರೀಲಂಕಾಕ್ಕೆ 70 ರನ್​ಗಳ ಜಯ

Sri lanka vs Ireland: ಶ್ರೀಲಂಕಾ 70 ರನ್‌ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಸೂಪರ್ 12 ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿತು. ಟೂರ್ನಿಯ ಅರ್ಹತಾ ಸುತ್ತಿನಲ್ಲಿ ಒಟ್ಟು 2 ಪಂದ್ಯಗಳನ್ನಾಡಿರುವ ಶ್ರೀಲಂಕಾ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಸೂಪರ್ 12 ಹಂತಕ್ಕೆ ಪ್ರವೇಶಿಸಿದೆ.

Sri Lanka: ಸೂಪರ್-12 ಹಂತಕ್ಕೇರಿದ ಸಿಂಹಳೀಯರು: ಐರ್ಲೆಂಡ್ ವಿರುದ್ಧ ಶ್ರೀಲಂಕಾಕ್ಕೆ 70 ರನ್​ಗಳ ಜಯ
Sri lanka vs Ireland
Follow us
TV9 Web
| Updated By: Vinay Bhat

Updated on: Oct 21, 2021 | 9:38 AM

ಐಸಿಸಿ ಟ್ವೆಂಟಿ-20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ಬುಧವಾರ ‘ಎ’ ಗುಂಪಿನಲ್ಲಿ ಐರ್ಲೆಂಡ್ ವಿರುದ್ಧ ಶ್ರೀಲಂಕಾ (Sri Lanka vs Ireland) 70 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿ ಸೂಪರ್-12 ಹಂತಕ್ಕೆ ಲಗ್ಗೆಯಿಟ್ಟಿದೆ. ಈ ಮೂಲಕ ಶ್ರೀಲಂಕಾ ಸೂಪರ್ 12 (Super 12) ಹಂತಕ್ಕೆ ಪ್ರಸಕ್ತ ಸಾಲಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅರ್ಹತೆಯನ್ನು ಪಡೆದುಕೊಂಡ ಮೊದಲ ತಂಡ ಎನಿಸಿಕೊಂಡಿದೆ. ಲಂಕನ್ನರ ಬೌಲಿಂಗ್ ದಾಳಿಗೆ ಐರ್ಲೆಂಡ್ ಬ್ಯಾಟರ್ಸ್ ಪೆವಿಲಿಯನ್ ಹಾದಿ ಹಿಡಿದರು. ಗೆಲ್ಲಲು 171 ರನ್ ಗುರಿ ಪಡೆದ ಐರ್ಲೆಂಡ್ ತಂಡದ ಇನ್ನಿಂಗ್ಸ್ 101 ರನ್​ಗೆ ಅಂತ್ಯಗೊಂಡು ಸೋಲಿಗೆ ಶರಣಾಯಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಶ್ರೀಲಂಕಾ ಕೇವಲ 8 ರನ್​ ಆಗುವ ಹೊತ್ತಿಗೆ 3 ಪ್ರಮುಖ ವಿಕೆಟ್ ಕಳೆದುಕೊಂಡಿತು. ಕುಸಲ್ ಪೆರೇರಾ ಮತ್ತು ಆವಿಷ್ಕಾ ಫರ್ನಾಂಡೊ ಸೊನ್ನೆ ಸುತ್ತಿದರೆ, ಚಂಡಿಮಲ್ 6 ರನ್​ಗೆ ಬ್ಯಾಟ್ ಕೆಳಗಿಟ್ಟರು. ಈ ಸಂದರ್ಭ ಜೊತೆಯಾದ ಪಥುಮ್ ನಿಸಂಕಾ ಮತ್ತು ವನಿಂದು ಹಸರಂಗ ಎಚ್ಚರಿಕೆಯಿಂದ ಭರ್ಜರಿ ಆಟ ಪ್ರದರ್ಶಿಸಿದರು.

ಹಸರಂಗ ಮತ್ತು ಪಥುಮ್ ಇಬ್ಬರೂ ಅರ್ಧಶತಕ ಗಳಿಸಿದ್ದಲ್ಲದೆ 4ನೇ ವಿಕೆಟ್​ಗೆ 123 ರನ್ ಜೊತೆಯಾಟ ಆಡಿದರು. ಆ ಸಂದರ್ಭದಲ್ಲಿ ಶ್ರೀಲಂಕಾ 180 ರನ್ ಗಡಿ ದಾಟುವ ಕುರುಹು ತೋರಿತ್ತು. ಆದರೆ, ಹಸರಂಗ ಔಟಾದ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್ಸ್ ಹೆಚ್ಚು ರನ್ ಗಳಿಸಲಿಲ್ಲ. ದಾಸುನ್ ಶಾಣಕ ಕೊನೆಕೊನೆಯಲ್ಲಿ ಮಿಂಚಿನ ಆಟವಾಡಿದ್ದರಿಂದ ಲಂಕಾ ಸ್ಕೋರು 170 ರನ್ ಗಡಿ ದಾಟಲು ಸಾಧ್ಯವಾಯಿತು.

47 ಎಸೆತಗಳನ್ನು ಎದುರಿಸಿದ ಹಸರಂಗ 10 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 71 ರನ್ ಗಳಿಸಿದರು. ಅತ್ತ ನಿಸಂಕಾ 47 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದರು. ಐರ್ಲೆಂಡ್ ಪರ ಜೋಶುವಾ ಲಿಟ್ಲ್ 23 ರನ್ ತೆತ್ತು ನಾಲ್ಕು ವಿಕೆಟ್ ಕಬಳಿಸಿದರು.

172 ರನ್‌ಗಳ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ 18.3 ಓವರ್‌ಗಳಲ್ಲಿ 101 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್ ಔಟ್ ಆಯಿತು. ನಾಯಕ ಆಂಡ್ರ್ಯೂ ಬಾಲ್ಬಿರ್ನಿ (41) ಹಾಗೂ ಕರ್ಟಿಸ್ ಕ್ಯಾಂಫರ್ (24) ಹೊರತುಪಡಿಸಿ ಇತರೆ ಯಾವ ಬ್ಯಾಟರ್‌ಗಳು ಮಿಂಚಲಿಲ್ಲ. ಲಂಕಾ ಪರ ಮಹೀಶ್‌ ತೀಕ್ಷನ ಮೂರು ವಿಕೆಟ್ ಪಡೆದರು.

ಈ ಮೂಲಕ ಶ್ರೀಲಂಕಾ 70 ರನ್‌ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಸೂಪರ್ 12 ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿತು. ಟೂರ್ನಿಯ ಅರ್ಹತಾ ಸುತ್ತಿನಲ್ಲಿ ಒಟ್ಟು 2 ಪಂದ್ಯಗಳನ್ನಾಡಿರುವ ಶ್ರೀಲಂಕಾ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಸೂಪರ್ 12 ಹಂತಕ್ಕೆ ಪ್ರವೇಶಿಸಿದೆ. ಶುಕ್ರವಾರ ನಡೆಯುವ ಕೊನೆಯ ಸುತ್ತಿನ ಪಂದ್ಯದಲ್ಲಿ ನೆದರ್​ಲೆಂಡ್ಸ್ ಎದುರು ಶ್ರೀಲಂಕಾ ಸೋತರೂ ಸೂಪರ್-12 ಪ್ರವೇಶಕ್ಕೆ ಅಡ್ಡಿ ಇರುವುದಿಲ್ಲ. ಇನ್ನೊಂದೆಡೆ ಐರ್​ಲೆಂಡ್ ಮತ್ತು ನಮೀಬಿಯಾ ಮಧ್ಯೆ ಪೈಪೋಟಿ ಇದ್ದು, ಅವರಿಬ್ಬರಲ್ಲಿ ಗೆದ್ದವರು ಸೂಪರ್-12 ಹಂತ ಪ್ರವೇಶಿಸಲಿದ್ದಾರೆ.

T20 World Cup 2021: ಹಾಲಿ ಚಾಂಪಿಯನ್ ವಿಂಡೀಸ್​ಗೆ ಹೀನಾಯ ಸೋಲುಣಿಸಿದ ಅಫ್ಘಾನಿಸ್ತಾನ್

T20 World Cup 2021: ಇಂದು ಬಿ ಗುಂಪಿನ ಕೊನೆಯ ಸುತ್ತಿನ ಪಂದ್ಯ: ಸೂಪರ್-12 ಹಂತಕ್ಕೇರಲು 4 ತಂಡಗಳ ಪೈಪೋಟಿ

(Sri Lanka breezed into the Super 12 stage of the Twenty20 World Cup after crushing Ireland)

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ