Women’s Asia Cup 2024: ಭಾರತ- ಪಾಕ್ ಪಂದ್ಯ ಸೇರಿದಂತೆ ಎಲ್ಲಾ ಪಂದ್ಯಗಳ ವೀಕ್ಷಣೆಗೆ ಉಚಿತ ಟಿಕೆಟ್

|

Updated on: Jul 13, 2024 | 6:16 PM

Women’s Asia Cup 2024: ಈ ಟೂರ್ನಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಎಲ್ಲಾ ಪಂದ್ಯಗಳನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಮತ್ತು ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ ನೀಡಲಾಗುವುದು ಎಂದು ಶ್ರೀಲಂಕಾ ಕ್ರಿಕೆಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Women’s Asia Cup 2024: ಭಾರತ- ಪಾಕ್ ಪಂದ್ಯ ಸೇರಿದಂತೆ ಎಲ್ಲಾ ಪಂದ್ಯಗಳ ವೀಕ್ಷಣೆಗೆ ಉಚಿತ ಟಿಕೆಟ್
ಮಹಿಳಾ ಏಷ್ಯಾಕಪ್
Follow us on

ಮಹಿಳೆಯರ ಟಿ20 ಏಷ್ಯಾಕಪ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಪಂದ್ಯಾವಳಿಯು ಜುಲೈ 19 ರಿಂದ ಶ್ರೀಲಂಕಾದ ದಂಬುಲ್ಲಾದಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 8 ತಂಡಗಳು ಭಾಗವಹಿಸಲಿವೆ. ಈ ಟೂರ್ನಿಯಲ್ಲಿ ಭಾರತ ಮಹಿಳಾ ತಂಡ, ಪಾಕಿಸ್ತಾನ, ನೇಪಾಳ ಮತ್ತು ಯುಎಇ ತಂಡಗಳೊಂದಿಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಉಳಿದಂತೆ ಬಾಂಗ್ಲಾದೇಶ, ಶ್ರೀಲಂಕಾ, ಮಲೇಷ್ಯಾ ಮತ್ತು ಥಾಯ್ಲೆಂಡ್ ತಂಡಗಳು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಬೇಕಾಗಿದ್ದು, ಇದಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಏತನ್ಮಧ್ಯೆ, ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಈ ಪಂದ್ಯಾವಳಿಯ ಬಗ್ಗೆ ದೊಡ್ಡ ಘೋಷಣೆ ಮಾಡಿದೆ.

ಉಚಿತ ಟಿಕೆಟ್ ವಿತರಣೆ

ಈ ಟೂರ್ನಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಎಲ್ಲಾ ಪಂದ್ಯಗಳನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಮತ್ತು ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ ನೀಡಲಾಗುವುದು ಎಂದು ಶ್ರೀಲಂಕಾ ಕ್ರಿಕೆಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅಂದರೆ ಭಾರತ-ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ಅಭಿಮಾನಿಗಳು ಮೈದಾನಕ್ಕೆ ಹೋಗಿ ಅದೂ ಕೂಡ ಉಚಿತವಾಗಿ ವೀಕ್ಷಿಸಬಹುದು, ಅಪರೂಪಕ್ಕೆಂಬಂತೆ. ಈ ಪಂದ್ಯಾವಳಿಯಲ್ಲಿ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ಸೇರಿದಂತೆ ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳನ್ನು ಆಡಲಾಗುವುದು.

ಟೀಂ ಇಂಡಿಯಾದ ಪಂದ್ಯಗಳು ಯಾವಾಗ ನಡೆಯುತ್ತವೆ?

ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಬೇಕಾಗಿದೆ, ಈ ಪಂದ್ಯ ಜುಲೈ 19 ರಂದು ನಡೆಯಲಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಇದಾದ ನಂತರ ಭಾರತ ತಂಡ ಜುಲೈ 21 ರಂದು ಯುಎಇ ತಂಡದ ವಿರುದ್ಧ ಪಂದ್ಯ ಆಡಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಪಂದ್ಯ ನಡೆಯಲಿದೆ. ನಂತರ ಜುಲೈ 23 ರಂದು ನೇಪಾಳ ತಂಡದ ವಿರುದ್ಧ ಕೊನೆಯ ಗುಂಪು ಪಂದ್ಯವನ್ನು ಆಡಬೇಕಿದೆ. ಈ ಪಂದ್ಯ ಸಂಜೆ 7 ಗಂಟೆಯಿಂದ ಮಾತ್ರ ಆರಂಭವಾಗಲಿದೆ.

ಏಷ್ಯಾಕಪ್‌ಗೆ ಟೀಂ ಇಂಡಿಯಾ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ದಯಾಲನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್ ಮತ್ತು ಸಂಜನಾ ಸಂಜೀವನ್.

ಮೀಸಲು ಆಟಗಾರ್ತಿಯರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Sat, 13 July 24