AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs NZ: ನ್ಯೂಜಿಲೆಂಡ್ ವಿರುದ್ಧ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಶ್ರೀಲಂಕಾ

T20 World Cup 2026 Super 8: ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ಆತಿಥೇಯ ಶ್ರೀಲಂಕಾವನ್ನು 61 ರನ್‌ಗಳಿಂದ ಮಣಿಸಿತು. ಕನ್ನಡಿಗ ರಚಿನ್ ರವೀಂದ್ರರ ಭರ್ಜರಿ ಸ್ಪಿನ್ ದಾಳಿಗೆ ತತ್ತರಿಸಿದ ಶ್ರೀಲಂಕಾ ಕೇವಲ 107 ರನ್‌ಗಳಿಗೆ ಆಲೌಟ್ ಆಗಿ ವಿಶ್ವಕಪ್‌ನಿಂದ ಅಧಿಕೃತವಾಗಿ ಹೊರಬಿದ್ದಿತು. ಈ ನಿರ್ಣಾಯಕ ಗೆಲುವಿನೊಂದಿಗೆ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಮತ್ತಷ್ಟು ಹತ್ತಿರವಾಯಿತು.

SL vs NZ: ನ್ಯೂಜಿಲೆಂಡ್ ವಿರುದ್ಧ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಶ್ರೀಲಂಕಾ
Sl Vs Nz
ಪೃಥ್ವಿಶಂಕರ
|

Updated on:Feb 25, 2026 | 11:02 PM

Share

ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ (New Zealand vs Sri Lanka) ನಡುವಿನ 2026 ರ ಟಿ20 ವಿಶ್ವಕಪ್​ನ (T20 World Cup 2026) ಸೂಪರ್ 8 ಸುತ್ತಿನ ಪಂದ್ಯವನ್ನು ಕಿವೀಸ್ ಪಡೆ 61 ರನ್​ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡ ಸೆಮಿಫೈನಲ್‌ ಸುತ್ತಿಗೆ ಮತ್ತಷ್ಟು ಹತ್ತಿರವಾದರೆ, ಆತಿಥೇಯ ಶ್ರೀಲಂಕಾ ಸೂಪರ್ 8 ಸುತ್ತಿನಲ್ಲಿ ಸತತ ಎರಡನೇ ಸೋಲಿನೊಂದಿಗೆ ಟಿ20 ವಿಶ್ವಕಪ್​ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 168 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಕನ್ನಡಿಗ ರಚಿನ್ ರವೀಂದ್ರ ಸ್ಪಿನ ಮೋಡಿಗೆ ತತ್ತರಿಸಿ ಕೇವಲ 107 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಮೆಕಾಂಚಿ, ಸ್ಯಾಂಟ್ನರ್ ದಾಖಲೆಯ ಜೊತೆಯಾಟ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 168 ರನ್ ಗಳಿಸಿತು. ತಂಡದ ಕೋಲ್ ಮೆಕಾಂಚಿ ಮತ್ತು ಮಿಚೆಲ್ ಸ್ಯಾಂಟ್ನರ್ 7ನೇ ವಿಕೆಟ್​ಗೆ ದಾಖಲೆಯ 47 ಎಸೆತಗಳಲ್ಲಿ 84 ರನ್‌ಗಳ ಜೊತೆಯಾಟ ನಡೆಸಿ ತಂಡವನ್ನು 168 ರನ್​ಗಳಿಗೆ ಕೊಂಡೊಯ್ದರು. ಒಂದು ಹಂತದಲ್ಲಿ 84 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕಿವೀಸ್​ಗೆ ಆಸರೆಯಾದ ಇವರಿಬ್ಬರು ಕೊನೆಯ 4 ಓವರ್‌ಗಳಲ್ಲಿ 70 ರನ್‌ ಕಲೆಹಾಕಿದರು.

ಕನ್ನಡಿಗ ರಚಿನ್ ಸ್ಪಿನ್ ಮೋಡಿ

169 ರನ್‌ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾ ಪವರ್‌ಪ್ಲೇನಲ್ಲಿಯೇ ಶರಣಾಯಿತು. ಪವರ್‌ಪ್ಲೇನಲ್ಲಿ ತಂಡ ಕೇವಲ 20 ರನ್‌ ಗಳಿಸಲಷ್ಟೇ ಶಕ್ತವಾಯಿತು. ನ್ಯೂಜಿಲೆಂಡ್ ಪರ ರಚಿನ್ ರವೀಂದ್ರ 4 ವಿಕೆಟ್‌ಗಳನ್ನು ಕಬಳಿಸಿದರು. ಅಂತಿಮವಾಗಿ ಶ್ರೀಲಂಕಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 107 ರನ್‌ಗಳಿಸಿ 61 ರನ್​​ಗಳಿಂದ ಪಂದ್ಯ ಸೋತಿರು. ಈ ಸೋಲಿನೊಂದಿಗೆ, ಶ್ರೀಲಂಕಾ ಸೆಮಿಫೈನಲ್‌ ರೇಸ್​ನಿಂದ ಹೊರಬಿದ್ದರೆ, ನ್ಯೂಜಿಲೆಂಡ್ ಸೂಪರ್ -8 ರ ಗ್ರೂಪ್ ಬಿ ನಲ್ಲಿ 3 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ 2 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ತಲುಪಿದೆ. ಪಾಕಿಸ್ತಾನ ಮೂರನೇ ಸ್ಥಾನದಲ್ಲಿದೆ.

SL vs NZ: 6,6,6,6.. ಲಂಕಾ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಮಿಚೆಲ್ ಸ್ಯಾಂಟ್ನರ್

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ ಔಟ್?

ಪಾಕಿಸ್ತಾನ ತಂಡವು ಸೂಪರ್ 8 ಗ್ರೂಪ್ ಬಿ ಪಾಯಿಂಟ್ ಪಟ್ಟಿಯಲ್ಲಿ ಕೇವಲ ಒಂದು ಪಾಯಿಂಟ್ ಮಾತ್ರ ಹೊಂದಿರುವುದರಿಂದ ತಂಡವು ಹೊರಹೋಗುವ ಸಾಧ್ಯತೆಗಳು ಹೆಚ್ಚಾಗಿದೆ. ಅದರ ರನ್ ದರ -0.461 ಆಗಿದ್ದು, ಅತ್ಯಂತ ಕಳಪೆಯಾಗಿದೆ. ಶ್ರೀಲಂಕಾ ವಿರುದ್ಧದ ತನ್ನ ಕೊನೆಯ ಸೂಪರ್ 8 ಪಂದ್ಯವನ್ನು ಗೆದ್ದರೂ ಸಹ, ಅದರ ರನ್ ರೆಟ್ ನ್ಯೂಜಿಲೆಂಡ್‌ಗಿಂತ ಹೆಚ್ಚಾಗುವ ಸಾಧ್ಯತೆ ಕಡಿಮೆ. ಈ ಸನ್ನಿವೇಶದಲ್ಲಿ, ಪಾಕಿಸ್ತಾನ ಅಧಿಕೃತವಾಗಿ ಟೂರ್ನಿಯಿಂದ ಹೊರಬಿದ್ದಿಲ್ಲವಾದರೂ ಸೆಮಿಫೈನಲ್​ಗೇರುವ ಸಾಧ್ಯತೆಗಳು ಅಸಾಧ್ಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Wed, 25 February 26

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?