ICC World Cup: ಸಿಂಹಳೀಯರ ನಾಡಲ್ಲಿ ಅಲ್ಲೋಲ-ಕಲ್ಲೋಲ: ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ಶ್ರೀಲಂಕಾ

Sri Lanka Cricket, ICC ODI World Cup: ಲಂಕಾ ಮಂಡಳಿಯ ಪ್ರಧಾನ ಕಚೇರಿಯ ಹೊರಗೆ ಅಭಿಮಾನಿಗಳ ನಿರಂತರ ಪ್ರತಿಭಟನೆ ನಡೆಸಿದರು. ಈ ಬೆಳವಣಿಗೆ ಮಧ್ಯೆ ಶ್ರೀಲಂಕಾ ಕ್ರಿಕೆಟ್‌ನ ಕಾರ್ಯದರ್ಶಿ, ಸಂಸ್ಥೆಯಲ್ಲಿ ಎರಡನೇ ಅತ್ಯುನ್ನತ ಸ್ಥಾನವನ್ನು ಹೊಂದಿದ್ದ ಮೋಹನ್ ಡಿ ಸಿಲ್ವಾ ಅವರು ರಾಜೀನಾಮೆ ನೀಡಿದ್ದಾರೆ.

ICC World Cup: ಸಿಂಹಳೀಯರ ನಾಡಲ್ಲಿ ಅಲ್ಲೋಲ-ಕಲ್ಲೋಲ: ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ಶ್ರೀಲಂಕಾ
Sri Lanka Cricket
Follow us
Vinay Bhat
|

Updated on: Nov 06, 2023 | 3:02 PM

ಶ್ರೀಲಂಕಾದ ಕ್ರೀಡಾ ಸಚಿವ, ರೋಷನ್ ರಣಸಿಂಗ್ ಅವರು ವಿಶ್ವಕಪ್​ನಲ್ಲಿ ತಮ್ಮ ತಂಡದ ಕಳಪೆ ಪ್ರದರ್ಶನ ಮತ್ತು ಭಾರತ ವಿರುದ್ಧದ ಕೆಟ್ಟ ದಾಖಲೆಯ ಹೀನಾಯ ಸೋಲಿನ ಬಳಿಕ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ್ದಾರೆ. ರಣಸಿಂಗ್ ಅವರು ಶ್ರೀಲಂಕಾ ಕ್ರಿಕೆಟ್ (Sri Lanka Cricket) ಅನ್ನು ಬಲವಾಗಿ ಟೀಕಿಸಿದ್ದಾರೆ. ಇದು ಈ ಮಂಡಳಿ ಭ್ರಷ್ಟಾಚಾರದಿಂದ ಕಳಂಕಿತವಾಗಿದೆ ಎಂದು ಆರೋಪಿಸಿದ್ದಾರೆ. ಕೂಡಲೇ ಪಾಲಿಕೆ ಸದಸ್ಯರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇದರ ಜೊತೆಗೆ ಲಂಕಾ ಮಂಡಳಿಯ ಪ್ರಧಾನ ಕಚೇರಿಯ ಹೊರಗೆ ಅಭಿಮಾನಿಗಳ ನಿರಂತರ ಪ್ರತಿಭಟನೆ ನಡೆಸಿದರು. ಈ ಬೆಳವಣಿಗೆ ಮಧ್ಯೆ ಶ್ರೀಲಂಕಾ ಕ್ರಿಕೆಟ್‌ನ ಕಾರ್ಯದರ್ಶಿ, ಸಂಸ್ಥೆಯಲ್ಲಿ ಎರಡನೇ ಅತ್ಯುನ್ನತ ಸ್ಥಾನವನ್ನು ಹೊಂದಿದ್ದ ಮೋಹನ್ ಡಿ ಸಿಲ್ವಾ ಅವರು ರಾಜೀನಾಮೆ ನೀಡಿದ್ದಾರೆ. 1996 ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡವನ್ನು ತಮ್ಮ ಏಕೈಕ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಅರ್ಜುನ ರಣತುಂಗ ಅವರನ್ನು ಮಂಡಳಿಯ ಹಂಗಾಮಿ ಅಧ್ಯಕ್ಷರಾಗಿ ನೇಮಿಸಲಾಗಿದೆ. ಸದ್ಯ ಹೊಸದಾಗಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಮಾಜಿ ಮಂಡಳಿಯ ಅಧ್ಯಕ್ಷರನ್ನು ಒಳಗೊಂಡ ಏಳು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.

IND vs SA: ಕ್ರಿಕೆಟ್ ಕಾಶಿಯಲ್ಲಿ ನಡೆದ ಭಾರತ- ಆಫ್ರಿಕಾ ಕದನದಲ್ಲಿ ಸೃಷ್ಟಿಯಾದ ದಾಖಲೆಗಳೆಷ್ಟು ಗೊತ್ತಾ?

ಇದನ್ನೂ ಓದಿ
Image
ಬೆಂಗಳೂರಿಗೆ ಆಗಮಿಸಿದ ವಿರಾಟ್ ಕೊಹ್ಲಿ: ಏರ್ಪೋರ್ಟ್​ನಲ್ಲಿ ಜನ ಸಾಗರ
Image
ಭಾರತ ತನಗೆ ಬೇಕಾದಂತೆ DRS ಅನ್ನು ತಿರುಚುತ್ತಿದೆ: ಪಾಕಿಸ್ತಾನ ಆಟಗಾರ
Image
ಮೊಬೈಲ್​ನಲ್ಲಿ ಕೊಹ್ಲಿ ಶತಕವನ್ನು ಕಣ್ತುಂಬಿದ್ದು 4 ಕೋಟಿ 40 ಲಕ್ಷ ಮಂದಿ
Image
ಮೆಡಲ್ ಸಿಕ್ಕಿದ್ದು ರೋಹಿತ್​ಗೆ: ಎದ್ದು-ಬಿದ್ದು ಸಂಭ್ರಮಿಸಿದ್ದು ಗಿಲ್-ಕಿಶನ್

ಐಸಿಸಿ ವಿಶ್ವಕಪ್ 2023 ರ ಏಳು ಪಂದ್ಯಗಳಿಂದ ನಾಲ್ಕು ಅಂಕಗಳನ್ನು ಗಳಿಸಿರುವ ಶ್ರೀಲಂಕಾ ಪ್ರಸ್ತುತ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಇದು ಲಂಕಾದ ತೀರಾ ಕಳಪೆ ಪ್ರದರ್ಶನವಾಗಿದೆ. ಶ್ರೀಲಂಕಾ ನಾಲ್ಕನೇ ಸ್ಥಾನ ಸ್ಥಾನ ಪಡೆದು ಸೆಮೀಸ್ ತಲುಪಲು ತಮ್ಮ ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಮಾತ್ರ ಸಾಲದು, ಇತರ ತಂಡದಗಳ ಫಲಿತಾಂಶಗಳು ಕೂಡ ಅಗತ್ಯವಿರುತ್ತದೆ. ಶ್ರೀಲಂಕಾ ಬಾಂಗ್ಲಾದೇಶ ವಿರುದ್ಧ ಮತ್ತು ಇನ್ನೊಂದು ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಆದರೆ, ಈ ಎರಡು ಪಂದ್ಯಗಳನ್ನು ಗೆದ್ದರೂ ಒಟ್ಟು 8 ಅಂಕಗಳನ್ನು ಮಾತ್ರ ಪಡೆಯಬಹುದು. ಹೀಗಾಗಿ, ಶ್ರೀಲಂಕಾ ತಂಡ ಸೆಮಿಫೈನಲ್‌ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ಭಾರತ ವಿರುದ್ಧ ದಾಖಲೆಯ ಸೋಲು

ನವೆಂನರ್ 2 ರಂದು ನಡೆದ ಪಂದ್ಯದಲ್ಲಿ ಮೊದಲ ಇನಿಂಗ್ಸ್‌ನಲ್ಲಿ ಭಾರತವು 8 ವಿಕೆಟ್‌ಗೆ 357 ರನ್‌ಗಳನ್ನು ಕಲೆಹಾಕಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮ್ಯಾಚ್​ನಲ್ಲಿ ಶ್ರೀಲಂಕಾ ಕೇವಲ 55 ರನ್‌ಗಳಿಗೆ ಆಲೌಟ್ ಆಯಿತು. ಏಷ್ಯಾಕಪ್ ಫೈನಲ್ ಬಳಿಕ ಭಾರತ ವಿರುದ್ಧ ಶ್ರೀಲಂಕಾ ನೀಡಿದ ಮತ್ತೊಂದು ಕೆಟ್ಟ ಪ್ರದರ್ಶನ ಇದಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್