AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lahiru Thirimanne: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಲಹಿರು ತಿರಿಮನ್ನೆ

Lahiru Thirimanne: 2014ರ ಏಷ್ಯನ್ ಗೇಮ್ಸ್ ನಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದ ಲಹಿರು ಟೀಮ್​ ಅನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.

Lahiru Thirimanne: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಲಹಿರು ತಿರಿಮನ್ನೆ
Lahiru Thirimanne
TV9 Web
| Updated By: ಝಾಹಿರ್ ಯೂಸುಫ್|

Updated on: Jul 22, 2023 | 7:14 PM

Share

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ (Lahiru Thirimanne) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, ನಾನು ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿದ್ದೇನೆ. ಆದರೆ ದಿಢೀರ್ ನಿವೃತ್ತಿ ನೀಡಲು ಪ್ರಭಾವ ಬೀರಿದ ಕಾರಣಗಳನ್ನು ಇಲ್ಲಿ ಹೇಳಲಾರೆ ಎಂದು ತಿಳಿಸಿದ್ದಾರೆ.

ಲಹಿರು ತಿರಿಮನ್ನೆ ವೃತ್ತಿಜೀವನ:

2010 ರಲ್ಲಿ ಭಾರತದ ವಿರುದ್ಧದ ಏಕದಿನ ಪಂದ್ಯದ ಮೂಲಕ ತಮ್ಮ ಅಂತರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಲಹಿರು ತಿರಿಮನ್ನೆ ಆ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಶ್ರೀಲಂಕಾ ಪರ 44 ಟೆಸ್ಟ್‌ಗಳಲ್ಲಿ 3 ಶತಕ ಮತ್ತು 10 ಅರ್ಧ ಶತಕ ಸೇರಿದಂತೆ 2088 ರನ್, 27 ಏಕದಿನ ಪಂದ್ಯಗಳಲ್ಲಿ 4 ಮತ್ತು 21 ಅರ್ಧ ಶತಕಗಳು ಮತ್ತು 26 T20 ಪಂದ್ಯಗಳಲ್ಲಿ 291 ರನ್ ಸೇರಿದಂತೆ ಒಟ್ಟು 3194 ರನ್ ಕಲೆಹಾಕಿದ್ದಾರೆ.

2011ರಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದ ಲಹಿರು 2013ರಲ್ಲಿ ಟೆಸ್ಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿದ್ದರು. ಚೊಚ್ಚಲ ಟೆಸ್ಟ್ ಶತಕದ ನಂತರ 7 ವರ್ಷ 10 ತಿಂಗಳ ಕಾಲ ಯಾವುದೇ ಶತಕ ಗಳಿಸಲು ಸಾಧ್ಯವಾಗಲಿಲ್ಲ. 2021 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ್ದ ಅವರು ಎರಡನೇ ಟೆಸ್ಟ್ ಶತಕಗಳಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು 2014ರಲ್ಲಿ ಟಿ20 ವಿಶ್ವಕಪ್ ಮತ್ತು 2014ರ ಏಷ್ಯಾಕಪ್ ಗೆದ್ದ ಶ್ರೀಲಂಕಾ ತಂಡದಲ್ ಭಾಗವಾಗಿದ್ದರು.

ಇದನ್ನೂ ಓದಿ: India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್​ರೌಂಡರ್​ಗಳು..!

ನಾಯಕರಾಗಿಯೂ ಮಿಂಚಿದ್ದ ಲಹಿರು:

2014ರ ಏಷ್ಯನ್ ಗೇಮ್ಸ್ ನಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದ ಲಹಿರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. 2019 ರಲ್ಲಿ ಪಾಕಿಸ್ತಾನ್ ಪ್ರವಾಸ ಕೈಗೊಂಡ ಶ್ರೀಲಂಕಾ ತಂಡದ ನಾಯಕರಾಗಿದ್ದರು. 2022 ರಲ್ಲಿ ಕೊನೆಯ ಬಾರಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ಲಹಿರು ತಿರಿಮನ್ನೆಗೆ ಆ ಬಳಿಕ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿಗೆ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ