AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಸಂಭಾವ್ಯ ಪ್ಲೇಯಿಂಗ್ 11 ಪ್ರಕಟಿಸಿದ ಆರ್ ಅಶ್ವಿನ್

India Test Squad for Sri Lanka Tour: ಶ್ರೀಲಂಕಾ ಪ್ರವಾಸಕ್ಕೆ ಬಿಸಿಸಿಐ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಗುರ್ನೂರ್ ಬ್ರಾರ್, ಸರಾಂಶ್ ಜೈನ್ ಸೇರಿದಂತೆ ಹೊಸ ಮುಖಗಳ ಜೊತೆಗೆ ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಮರಳಿದ್ದಾರೆ. ರವಿಚಂದ್ರನ್ ಅಶ್ವಿನ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮೂವರು ಸ್ಪಿನ್ನರ್‌ಗಳೊಂದಿಗೆ ಸಂಭಾವ್ಯ ಪ್ಲೇಯಿಂಗ್ XI ಅನ್ನು ಸೂಚಿಸಿದ್ದಾರೆ. ಸಾಯಿ ಸುದರ್ಶನ್ ಮತ್ತು ದೇವದತ್ ಪಡಿಕ್ಕಲ್‌ಗೂ ಅವಕಾಶ ನೀಡಿದ್ದಾರೆ. ಬುಮ್ರಾ ಫಿಟ್‌ನೆಸ್ ಮೇಲೆ ಸ್ಥಾನ ನಿಂತಿದೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಸಂಭಾವ್ಯ ಪ್ಲೇಯಿಂಗ್ 11 ಪ್ರಕಟಿಸಿದ ಆರ್ ಅಶ್ವಿನ್
India
ಪೃಥ್ವಿಶಂಕರ
|

Updated on:Jul 29, 2026 | 10:16 PM

Share

ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ ಬಿಸಿಸಿಐ ಭಾರತ ಟೆಸ್ಟ್ ತಂಡವನ್ನು (India Test squad) ಪ್ರಕಟಿಸಿದೆ. ಈ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಹಲವು ಹೊಸ ಮುಖಗಳ ಜೊತೆಗೆ ಹಲವು ಹಳೆಯ ಮುಖಗಳು ಸೇರಿವೆ. ಅದರಲ್ಲೂ ಗುರ್ನೂರ್ ಬ್ರಾರ್ ಮತ್ತು ಸರಾಂಶ್ ಜೈನ್ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುವ ಅವಕಾಶ ಹೊಂದಿದ್ದಾರೆ. ಹಾಗೆಯೇ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಟೆಸ್ಟ್ ತಂಡವನ್ನು ಕೂಡಿಕೊಂಡಿದ್ದಾರೆ. ಆದಾಗ್ಯೂ ಬುಮ್ರಾ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುವುದು ಅವರ ಫಿಟ್‌ನೆಸ್ ಕ್ಲಿಯರೆನ್ಸ್ ಅನ್ನು ಅವಲಂಬಿಸಿರುತ್ತದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಇದೆಲ್ಲದರ ನಡುವೆ ತಂಡದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ಸಂಭಾವ್ಯ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದ್ದಾರೆ.

ತಂಡದಲ್ಲಿ ಮೂವರು ಸ್ಪಿನ್ನರ್‌

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಸಂಭಾವ್ಯ ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ ಅಶ್ವಿನ್, ‘ ಈ ಟೆಸ್ಟ್ ಸರಣಿಯಲ್ಲಿ ರವೀಂದ್ರ ಜಡೇಜಾ ಖಂಡಿತವಾಗಿಯೂ ಆಡುತ್ತಾರೆ. ಹಾಗೆಯೇ ಕಳೆದ ಪಂದ್ಯದಲ್ಲಿ 7 ವಿಕೆಟ್ ಪಡೆದಿದ್ದ ಮಾನವ್ ಸುತಾರ್ ಜೊತೆಗೆ ಕುಲ್ದೀಪ್ ಯಾದವ್ ಕೂಡ ಆಡಬೇಕು ಎಂದಿದ್ದಾರೆ. ಅಂದರೆ ಅಶ್ವಿನ್ ತಮ್ಮ ತಂಡದಲ್ಲಿ ಮೂವರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಿದ್ದಾರೆ.

ಬ್ಯಾಟಿಂಗ್ ಕ್ರಮಾಂಕ ಹೇಗಿರಬೇಕು

ಇವರ ಜೊತೆಗೆ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಸರಾಂಶ್ ಜೈನ್ ಅವರನ್ನು ಮೊದಲ ಟೆಸ್ಟ್‌ನಲ್ಲಿ ಆಡಿಸಬೇಕು. ಸರಾಂಶ್ ಜೈನ್ ಅವರನ್ನು 7 ನೇ ಸ್ಥಾನದಲ್ಲಿ ಆಡಿಸಬೇಕು ಎಂದು ನಾನು ಭಾವಿಸುತ್ತೇನೆ. 5 ನೇ ಸ್ಥಾನದಲ್ಲಿ ರಿಷಭ್ ಪಂತ್, 4 ನೇ ಸ್ಥಾನದಲ್ಲಿ ಶುಭ್​ಮನ್ ಗಿಲ್, 3 ನೇ ಸ್ಥಾನದಲ್ಲಿ ದೇವದತ್ ಪಡಿಕ್ಕಲ್ ಅಥವಾ ಸಾಯಿ ಸುದರ್ಶನ್, ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಆಡಬೇಕು ಎಂದಿದ್ದಾರೆ.

ಸಾಯಿ ಸುದರ್ಶನ್​ಗೆ ಅವಕಾಶ

ಇನ್ನು ಸಾಯಿ ಸುದರ್ಶನ್ ಅವರ ಅಮೋಘ ಫಾರ್ಮ್​ ಬಗ್ಗೆ ಮಾತನಾಡಿರುವ ಅಶ್ವಿನ್, ತಂಡಕ್ಕೆ ಅತಿದೊಡ್ಡ ಅನಾನುಕೂಲವೆಂದರೆ ಸಾಯಿ ಸುದರ್ಶನ್ ಅವರ ಫಿಟ್ನೆಸ್. ಇತ್ತೀಚೆಗೆ ಭಾರತ ‘ಎ’ ಸರಣಿಯಲ್ಲಿ ಸಾಯಿ ಎರಡು ಶತಕಗಳನ್ನು ಗಳಿಸಿದರು, ಅದರಲ್ಲಿ ಒಂದು ಶತಕ ಗ್ಯಾಲೆಯಲ್ಲಿ ಸಿಡಿಯಿತು. ಗಾಲೆಯಲ್ಲಿನ ಪರಿಸ್ಥಿತಿ ವಿಶಿಷ್ಟವಾಗಿದೆ. ಗಾಳಿಯಿಂದಾಗಿ ಚೆಂಡು ಗಾಳಿಯಲ್ಲಿ ಸ್ವಿಂಗ್ ಆಗುತ್ತದೆ. ಹೀಗಾಗಿ ಪರಿಸ್ಥಿತಿಗಳನ್ನು ಅರ್ಥಮಾಡಿಕೊಳ್ಳಲು ಸಮಯ ಬೇಕಾಗುತ್ತದೆ. ಆದರೆ ಸಾಯಿ ಅಲ್ಲಿ ಶತಕ ಬಾರಿಸಿದರು. ಹೀಗಾಗಿ ಅವರ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ ಆದ್ದರಿಂದ ಅವರು ಫಿಟ್ ಆಗಿದ್ದರೆ ಭಾರತಕ್ಕೆ ಪ್ರಯೋಜನಕಾರಿಯಾಗಬಹುದು ಎಂದಿದ್ದಾರೆ.

ಭಾರತ ಟೆಸ್ಟ್ ತಂಡ

ಶುಭಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಜಸ್ಪ್ರೀತ್ ಬುಮ್ರಾ, ದೇವದತ್ ಪಡಿಕ್ಕಲ್, ಸಾಯಿ ಸುದರ್ಶನ್, ಸರಾಂಶ್ ಜೈನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 pm, Wed, 29 July 26

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ