AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ ವಿರುದ್ಧದ ಮೊದಲ ಟೆಸ್ಟ್​ಗೆ ಶ್ರೀಲಂಕಾ ತಂಡ ಪ್ರಕಟ

Sri Lanka Squad Announced for 1st Test: ಆಗಸ್ಟ್ 15 ರಿಂದ ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಪ್ರಾರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ. ಧನಂಜಯ ಡಿ ಸಿಲ್ವಾ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಮೂರು ವರ್ಷಗಳ ನಂತರ ನಿರೋಷನ್ ಡಿಕ್ವೆಲ್ಲಾ ವಾಪಸ್ ಆಗಿದ್ದರೆ, ಪಸಿಂದು ಸೂರ್ಯಬಂಡಾರ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಐವರು ಸ್ಪಿನ್ನರ್‌ಗಳು ಮತ್ತು ಅಭ್ಯಾಸ ಪಂದ್ಯದಲ್ಲಿ ಮಿಂಚಿದ ನಿಶಾನ್ ಮದುಷ್ಕ ತಂಡದಲ್ಲಿದ್ದಾರೆ.

IND vs SL: ಭಾರತ ವಿರುದ್ಧದ ಮೊದಲ ಟೆಸ್ಟ್​ಗೆ ಶ್ರೀಲಂಕಾ ತಂಡ ಪ್ರಕಟ
Sri Lanka Squad
ಪೃಥ್ವಿಶಂಕರ
|

Updated on:Aug 12, 2026 | 3:24 PM

Share

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇನ್ನು ಮೂರು ದಿನಗಳಲ್ಲಿ ಅಂದರೆ ಆಗಸ್ಟ್ 15 ರಿಂದ ಪ್ರಾರಂಭವಾಗಲಿದೆ. ಈ ಸರಣಿಗಾಗಿ ಈಗಾಗಲೇ ಟೀಂ ಇಂಡಿಯಾ ಶ್ರೀಲಂಕಾದಲ್ಲಿದೆ. ಶುಭ್​ಮನ್ ಗಿಲ್ ನಾಯಕತ್ವದ 15 ಸದಸ್ಯರ ತಂಡವನ್ನು ಬಿಸಿಸಿಐ ಎರಡು ವಾರಗಳ ಮೊದಲೇ ಪ್ರಕಟಿಸಿತ್ತು. ಇದೀಗ ಉಭಯ ತಂಡಗಳ ನಡುವೆ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಆತಿಥೇಯ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ. ಧನಂಜಯ ಡಿ ಸಿಲ್ವಾ ತಂಡವನ್ನು ಮುನ್ನಡೆಸಲಿದ್ದು, ಕಾಮಿಂದು ಮೆಂಡಿಸ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ.

ಅನುಭವಿಗಳಿಗೆ ಸ್ಥಾನ

ಬರೋಬ್ಬರಿ ಮೂರು ವರ್ಷಗಳ ನಂತರ ನಿರೋಷನ್ ಡಿಕ್ವೆಲ್ಲಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ಕುಸಲ್ ಮೆಂಡಿಸ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪಿಂಗ್ ಕರ್ತವ್ಯಗಳನ್ನು ಅವರು ವಹಿಸಿಕೊಳ್ಳಲಿದ್ದಾರೆ. ಕೊನೆಯ ಬಾರಿಗೆ 2023 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಿದ್ದ ನಿರೋಷನ್ ಡಿಕ್ವೆಲ್ಲಾಗೆ ಕೊನೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಹಾಗೆಯೇ ಬ್ಯಾಟ್ಸ್‌ಮನ್ ಪಸಿಂದು ಸೂರ್ಯಬಂಡಾರ ಅವರನ್ನು ಮೊದಲ ಬಾರಿಗೆ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅನುಭವಿ ಆಟಗಾರ ದಿನೇಶ್ ಚಾಂಡಿಮಲ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

IND vs SL: ಮೊದಲ ಟೆಸ್ಟ್ ನಡೆಯುವ ಗಾಲೆ ಮೈದಾನದಲ್ಲಿ ಭಾರತದ ಪ್ರದರ್ಶನ ಹೇಗಿದೆ?

ತಂಡದಲ್ಲಿ ಐವರು ಸ್ಪಿನ್ನರ್‌ಗಳು

ಶ್ರೀಲಂಕಾ ಕ್ರಿಕೆಟ್ ಮಂಡಳಿ ಪ್ರಕಟಿಸಿರುವ ಈ ತಂಡದಲ್ಲಿ ಪ್ರಭಾತ್ ಜಯಸೂರ್ಯ ಸೇರಿದಂತೆ ಐವರು ಸ್ಪಿನ್ನರ್‌ಗಳನ್ನು ಆಯ್ಕೆ ಮಾಡಿದೆ. ಹಾಗೆಯೇ ಭಾರತ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಆರಂಭಿಕ ಆಟಗಾರ ನಿಶಾನ್ ಮದುಷ್ಕ ಅವರನ್ನು ಸಹ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಭಾರತ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ನಿಶಾನ್ ಮದುಷ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕಗಳನ್ನು ಬಾರಿಸಿದ್ದರು. ಇನ್ನು ಅಭ್ಯಾಸ ಪಂದ್ಯದಲ್ಲಿ ಆಡಿದ್ದ ಸ್ಪಿನ್ನರ್‌ಗಳಾದ ರಮೇಶ್ ಮೆಂಡಿಸ್, ಸೋನಲ್ ದಿನುಷಾ ಮತ್ತು ಕೇಸರ ನುವಂತಾ ಕೂಡ ತಂಡದ ಭಾಗವಾಗಿದ್ದಾರೆ.

ಗಾಲೆ ಟೆಸ್ಟ್ ಪಂದ್ಯಕ್ಕೆ ತಂಡ: ಧನಂಜಯ ಡಿ ಸಿಲ್ವ(ನಾಯಕ), ಲಹಿರು ಉದಾನ, ನಿಶಾನ್ ಮದುಷ್ಕ, ಕಮಿಂದು ಮೆಂಡಿಸ್, ದಿನೇಶ್ ಚಾಂಡಿಮಲ್, ಪಸಿಂದು ಸೂರಿಯಬಂಡಾರ, ಸೋನಾಲ್ ದಿನುಶಾ, ನಿರೋಶನ್ ಡಿಕ್ವೆಲ್ಲಾ, ರಮೇಶ್ ಮೆಂಡಿಸ್, ಪ್ರಭಾತ್ ಜಯಸೂರ್ಯ, ಕೇಶರ ನುವಂತ, ಮಿಲನ್ ರತ್ನಾಯಕೆ, ಅಸಿತ ಫೆರ್ನಾಂಡೋ, ಲಹಿರು ಕುಮಾರ, ವಿಶ್ವ ಫೆರ್ನಾಂಡೋ, ದಿಲ್ಶನ್ ಮಧುಶಂಕ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Wed, 12 August 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ