AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL 1st T20 Live Streaming: ಗಂಭೀರ್ ಸಾರಥ್ಯದಲ್ಲಿ ಮೊದಲ ಟಿ20 ಪಂದ್ಯ; ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?

Sri Lanka vs India 1st T20I Cricket Match Live Streaming: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ನಾಳೆ ಅಂದರೆ ಶನಿವಾರ ಜುಲೈ 27 ರಿಂದ ಆರಂಭವಾಗಲಿದೆ. ಗೌತಮ್ ಗಂಭೀರ್ ಅವರ ಮುಖ್ಯ ಕೋಚಿಂಗ್ ಅಡಿಯಲ್ಲಿ ಟೀಂ ಇಂಡಿಯಾದ ಮೊದಲ ಸರಣಿ ಇದಾಗಿದೆ. ಶ್ರೀಲಂಕಾ ಪ್ರವಾಸಕ್ಕೆ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡದ ನಾಯಕರನ್ನಾಗಿ ಆಯ್ಕೆ ಮಾಡಿದೆ.

IND vs SL 1st T20 Live Streaming: ಗಂಭೀರ್ ಸಾರಥ್ಯದಲ್ಲಿ ಮೊದಲ ಟಿ20 ಪಂದ್ಯ; ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?
ಭಾರತ- ಶ್ರೀಲಂಕಾ
ಪೃಥ್ವಿಶಂಕರ
|

Updated on:Jul 26, 2024 | 8:01 PM

Share

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ನಾಳೆ ಅಂದರೆ ಶನಿವಾರ ಜುಲೈ 27 ರಿಂದ ಆರಂಭವಾಗಲಿದೆ. ಗೌತಮ್ ಗಂಭೀರ್ ಅವರ ಮುಖ್ಯ ಕೋಚಿಂಗ್ ಅಡಿಯಲ್ಲಿ ಟೀಂ ಇಂಡಿಯಾದ ಮೊದಲ ಸರಣಿ ಇದಾಗಿದೆ. ಶ್ರೀಲಂಕಾ ಪ್ರವಾಸಕ್ಕೆ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಸೂರ್ಯ ಈಗಾಗಲೇ 7 ಪಂದ್ಯಗಳಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿರುವುದರಿಂದ ತಂಡವನ್ನು ಮುನ್ನಡೆಸುವ ಒತ್ತಡ ಅವರ ಮೇಲೆ ಇರುವುದಿಲ್ಲಾವಾದರೂ, ವಿಶ್ವ ಚಾಂಪಿಯನ್ ಹಿರಿಮೆಯನ್ನು ಮುಂದುವರೆಸುವ ಭಾರ ಅವರ ಮೇಲಿದೆ. ಇತ್ತ ಕಳೆದ ಏಷ್ಯಾಕಪ್ ಫೈನಲ್​ನಲ್ಲಿನ ಹೀನಾಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ ಹೊಂದಿರುವ ಲಂಕಾ ತಂಡ ಕೂಡ ಭಾರತವನ್ನು ಮಣಿಸುವ ಪಣ ತೊಟ್ಟಿದೆ. ಹೀಗಾಗಿ ಉಭಯ ತಂಡಗಳು ಗೆಲುವಿನೊಂದಿಗೆ ಸರಣಿಯಲ್ಲಿ ಶುಭಾರಂಭ ಮಾಡುವ ಇರಾದೆಯಲ್ಲಿವೆ.

ಇಂಜುರಿ ಸಮಸ್ಯೆ

ಇನ್ನು ಸರಣಿ ಆರಂಭಕ್ಕೂ ಮುನ್ನ ಎರಡೂ ತಂಡಗಳ ಆಟಗಾರರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಭಾರತ ತಂಡದ ಮೊಹಮ್ಮದ್ ಸಿರಾಜ್ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಇನ್ನು ತಿಳಿದುಬಂದಿಲ್ಲ. ಇತ್ತ ಲಂಕಾ ತಂಡದ ಇಬ್ಬರು ಆಟಗಾರರು ಸರಣಿ ಆರಂಭಕ್ಕೂ ಮುನ್ನವೇ ಗಾಯಗೊಂಡಿದ್ದು, ಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ. ವೇಗಿಗಳಾದ ನುವಾನ್ ತುಷಾರ ಮತ್ತು ದುಷ್ಮಂತ ಚಮೀರಾ ಗಾಯಕ್ಕೆ ತುತ್ತಾಗಿದ್ದು, ಅವರ ಬದಲಿಯಾಗಿ ಈಗಾಗಲೇ ಇಬ್ಬರು ಆಟಗಾರರು ತಂಡ ಸೇರಿಕೊಂಡಿದ್ದಾರೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ನಾಳೆ ಅಂದರೆ ಶನಿವಾರ ಜುಲೈ 27 ರಂದು ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯಲ್ಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಪ್ರಾರಂಭವಾಗಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವನ್ನು ಟಿವಿಯಲ್ಲಿ ನೋಡುವುದು ಹೇಗೆ?

ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಹೇಗೆ ವೀಕ್ಷಿಸುವುದು?

ನೀವು SonyLIV ಅಪ್ಲಿಕೇಶನ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದಾಗಿದೆ.

ಟಿ20 ಸರಣಿ ವೇಳಾಪಟ್ಟಿ

  • ಜುಲೈ 27- ಮೊದಲನೇ ಟಿ20 ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
  • ಜುಲೈ 28- ಎರಡನೇ ಟಿ20, ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
  • ಜುಲೈ 30- ಮೂರನೇ ಟಿ20, ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:58 pm, Fri, 26 July 24

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ