ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ನಾಳೆ ಅಂದರೆ ಶನಿವಾರ ಜುಲೈ 27 ರಿಂದ ಆರಂಭವಾಗಲಿದೆ. ಗೌತಮ್ ಗಂಭೀರ್ ಅವರ ಮುಖ್ಯ ಕೋಚಿಂಗ್ ಅಡಿಯಲ್ಲಿ ಟೀಂ ಇಂಡಿಯಾದ ಮೊದಲ ಸರಣಿ ಇದಾಗಿದೆ. ಶ್ರೀಲಂಕಾ ಪ್ರವಾಸಕ್ಕೆ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಸೂರ್ಯ ಈಗಾಗಲೇ 7 ಪಂದ್ಯಗಳಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿರುವುದರಿಂದ ತಂಡವನ್ನು ಮುನ್ನಡೆಸುವ ಒತ್ತಡ ಅವರ ಮೇಲೆ ಇರುವುದಿಲ್ಲಾವಾದರೂ, ವಿಶ್ವ ಚಾಂಪಿಯನ್ ಹಿರಿಮೆಯನ್ನು ಮುಂದುವರೆಸುವ ಭಾರ ಅವರ ಮೇಲಿದೆ. ಇತ್ತ ಕಳೆದ ಏಷ್ಯಾಕಪ್ ಫೈನಲ್ನಲ್ಲಿನ ಹೀನಾಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ ಹೊಂದಿರುವ ಲಂಕಾ ತಂಡ ಕೂಡ ಭಾರತವನ್ನು ಮಣಿಸುವ ಪಣ ತೊಟ್ಟಿದೆ. ಹೀಗಾಗಿ ಉಭಯ ತಂಡಗಳು ಗೆಲುವಿನೊಂದಿಗೆ ಸರಣಿಯಲ್ಲಿ ಶುಭಾರಂಭ ಮಾಡುವ ಇರಾದೆಯಲ್ಲಿವೆ.
ಇನ್ನು ಸರಣಿ ಆರಂಭಕ್ಕೂ ಮುನ್ನ ಎರಡೂ ತಂಡಗಳ ಆಟಗಾರರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಭಾರತ ತಂಡದ ಮೊಹಮ್ಮದ್ ಸಿರಾಜ್ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಇನ್ನು ತಿಳಿದುಬಂದಿಲ್ಲ. ಇತ್ತ ಲಂಕಾ ತಂಡದ ಇಬ್ಬರು ಆಟಗಾರರು ಸರಣಿ ಆರಂಭಕ್ಕೂ ಮುನ್ನವೇ ಗಾಯಗೊಂಡಿದ್ದು, ಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ. ವೇಗಿಗಳಾದ ನುವಾನ್ ತುಷಾರ ಮತ್ತು ದುಷ್ಮಂತ ಚಮೀರಾ ಗಾಯಕ್ಕೆ ತುತ್ತಾಗಿದ್ದು, ಅವರ ಬದಲಿಯಾಗಿ ಈಗಾಗಲೇ ಇಬ್ಬರು ಆಟಗಾರರು ತಂಡ ಸೇರಿಕೊಂಡಿದ್ದಾರೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ನಾಳೆ ಅಂದರೆ ಶನಿವಾರ ಜುಲೈ 27 ರಂದು ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಪ್ರಾರಂಭವಾಗಲಿದೆ.
ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ನೀವು SonyLIV ಅಪ್ಲಿಕೇಶನ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:58 pm, Fri, 26 July 24