IND vs SL: ಟಾಸ್ ಗೆದ್ದ ಶ್ರೀಲಂಕಾ; ಗಂಭೀರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ತಂಡ ಹೀಗಿದೆ

IND vs SL: ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಲಂಕಾ ನಾಯಕ ಚರಿತ್ ಅಸಲಂಕಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳಲ್ಲೂ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ.

IND vs SL: ಟಾಸ್ ಗೆದ್ದ ಶ್ರೀಲಂಕಾ; ಗಂಭೀರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ತಂಡ ಹೀಗಿದೆ
ಭಾರತ- ಶ್ರೀಲಂಕಾ
Follow us
|

Updated on:Jul 27, 2024 | 6:53 PM

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಟಿ20 ಸರಣಿಯನ್ನು ಆರಂಭಿಸುವ ನಿರೀಕ್ಷೆಯಲ್ಲಿದೆ. ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್‌ಗೂ ಇತಿಹಾಸ ಸೃಷ್ಟಿಸುವ ಅವಕಾಶವಿದೆ. ಈ ಪಂದ್ಯಕ್ಕೂ ಮುನ್ನವೇ ಶ್ರೀಲಂಕಾಕ್ಕೆ ಹಲವು ದೊಡ್ಡ ಸಮಸ್ಯೆಗಳು ಉದ್ಭವಿಸಿವೆ. ತಂಡದ ಮೂವರು ಬೌಲರ್‌ಗಳು ಈಗಾಗಲೇ ಸರಣಿಯಿಂದ ಹೊರಗುಳಿದಿದ್ದಾರೆ. ಅದಾಗ್ಯೂ ತವರಿನ ಲಾಭ ಪಡೆಯಲ್ಲಿರುವ ಲಂಕಾ ತಂಡವನ್ನು ಟೀಂ ಇಂಡಿಯಾ ಕಡೆಗಣಿಸುವಂತಿಲ್ಲ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಲಂಕಾ ನಾಯಕ ಚರಿತ್ ಅಸಲಂಕಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳಲ್ಲೂ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ.

ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆಗಳಾಗಿದ್ದು, ಜಿಂಬಾಬ್ವೆ ಪ್ರವಾಸದಲ್ಲಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕೆಲವು ಆಟಗಾರರಿಗೆ ಮೊದಲ ಪಂದ್ಯದಲ್ಲಿ ಅವಕಾಶ ಸಿಕ್ಕಿಲ್ಲ. ಅವರಲ್ಲಿ ಸಂಜು ಸ್ಯಾಮ್ಸನ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಖಲೀಲ್ ಅಹಮದ್ ಸೇರಿದ್ದಾರೆ.

ಮುಖಾಮುಖಿನ ವರದಿ

ಭಾರತ ಮತ್ತು ಶ್ರೀಲಂಕಾ ನಡುವೆ ಇದುವರೆಗೆ ಒಟ್ಟು 29 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ ತಂಡ 19 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ ತಂಡವು ಕೇವಲ 9 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಉಭಯ ತಂಡಗಳು

ಭಾರತ ತಂಡ: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ತಂಡ: ಅವಿಷ್ಕಾ ಫೆರ್ನಾಂಡೊ, ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸ್ಸಾಂಕ, ವನಿಂದು ಹಸರಂಗ, ದಸುನ್ ಶನಕ, ಕುಸಾಲ್ ಮೆಂಡಿಸ್, ದಿನೇಶ್ ಚಾಂಡಿಮಲ್ (ವಿಕೆಟ್ ಕೀಪರ್), ಮತಿಶ ಪತಿರಾನ, ಮಹೇಶ್ ತಿಕ್ಷಣ, ದುನಿತ್ ವೆಲಾಲಗೆ, ಬಿನೂರ ಫೆರ್ನಾಂಡೊ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 pm, Sat, 27 July 24

ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ