Sri Lanka vs India, 1st T20I: ಶ್ರೀಲಂಕಾಗೆ ಸ್ಪರ್ಧಾತ್ಮಕ ಸವಾಲು ನೀಡಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ: ಶಿಖರ್ ಧವನ್ (ಕ್ಯಾಪ್ಟನ್), ಪೃಥ್ವಿ ಶಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ ಮತ್ತು ಯುಜ್ವೇಂದ್ರ ಚಹಲ್.

Sri Lanka vs India, 1st T20I: ಶ್ರೀಲಂಕಾಗೆ ಸ್ಪರ್ಧಾತ್ಮಕ ಸವಾಲು ನೀಡಿದ ಟೀಮ್ ಇಂಡಿಯಾ
ಸೂರ್ಯಕುಮಾರ್ ಯಾದವ್
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 25, 2021 | 10:02 PM

ಕೊಲಂಬೊದ ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 164 ರನ್ ಕಲೆಹಾಕಿದೆ. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಪೃಥ್ವಿ ಶಾ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಹೊರನಡೆದರು.

ಈ ಹಂತದಲ್ಲಿ ಜೊತೆಗೂಡಿದ ಶಿಖರ್ ಧವನ್ ಹಾಗೂ ಸಂಜು ಸ್ಯಾಮ್ಸನ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಅದರಂತೆ 2ನೇ ವಿಕೆಟ್​ಗೆ ಈ ಜೋಡಿ 51 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಹಸರಂಗ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಸ್ಯಾಮ್ಸನ್ (27) ನಿರ್ಗಮಿಸಿದರು. 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಆಕರ್ಷಕ ಹೊಡೆತಗಳ ಮೂಲಕ ಇನಿಂಗ್ಸ್​ ಕಟ್ಟಲಾರಂಭಿಸಿದರು.

ನಾಯಕನ ಜೊತೆಗೂಡಿ ಉತ್ತಮ ಜೊತೆಯಾಟವಾಡಿದ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಇದೇ ವೇಳೆ 36 ಎಸೆತಗಳಲ್ಲಿ 46 ರನ್ ಬಾರಿಸಿದ್ದ ಶಿಖರ್ ಧವನ್ ಕರುಣರತ್ನೆ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಸೂರ್ಯಕುಮಾರ್ 34 ಎಸೆತಗಳಲ್ಲಿ 5 ಬೌಂಡರಿ 2 ಸಿಕ್ಸರ್​ನೊಂದಿಗೆ ಅರ್ಧಶತಕ ಬಾರಿಸಿ ಬ್ಯಾಟ್ ಮೇಲೆಕ್ಕೆತ್ತಿದರು. ಆದರೆ ಹಾಫ್ ಸೆಂಚುರಿ ಬೆನ್ನಲ್ಲೇ ಹಸರಂಗ ಸೂರ್ಯಕುಮಾರ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಬಳಿಕ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ 12 ಎಸೆತಗಳನ್ನು ಎದುರಿಸಿದರೂ ಕಲೆಹಾಕಿದ್ದು ಕೇವಲ 10 ರನ್. ಇನ್ನೊಂದೆಡೆ ಅಂತಿಮ ಓವರ್​ಗಳಲ್ಲಿ ಬಿರುಸಿನ ಆಟವಾಡಿದ ಇಶಾನ್ ಕಿಶನ್ 20 ರನ್ ಬಾರಿಸಿ ತಂಡದ ಮೊತ್ತವನ್ನು 5 ವಿಕೆಟ್​ ನಷ್ಟಕ್ಕ 164ಕ್ಕೆ ತಂದು ನಿಲ್ಲಿಸಿದರು. ಶ್ರೀಲಂಕಾ ಪರ ಹಸರಂಗ ಹಾಗೂ ಚಮೀರಾ ತಲಾ 2 ವಿಕೆಟ್ ಪಡೆದು ಮಿಂಚಿದರು.

ಉಭಯ ತಂಡಗಳು ಹೀಗಿವೆ: ಟೀಮ್ ಇಂಡಿಯಾ: ಶಿಖರ್ ಧವನ್ (ಕ್ಯಾಪ್ಟನ್), ಪೃಥ್ವಿ ಶಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ ಮತ್ತು ಯುಜ್ವೇಂದ್ರ ಚಹಲ್.

ಶ್ರೀಲಂಕಾ: ದಸುನ್ ಶನಕಾ (ಕ್ಯಾಪ್ಟನ್), ಅವಿಷ್ಕಾ ಫರ್ನಾಂಡೊ, ಮಿನೋಡ್ ಭನುಕಾ (ವಿಕೆಟ್ ಕೀಪರ್), ಆಶೆನ್ ಬಂಡರಾ, ಧನಂಜಯ್ ಡಿ ಸಿಲ್ವಾ, ಚಾರಿತ್ ಅಸಲಂಕಾ, ಚಮಿಕಾ ಕರುಣರತ್ನ, ವನಿಂದು ಹಸರಂಗ, ಇಸುರು ಉದಾನ, ದುಷ್ಮಂತ ಚಮೀರಾ ಮತ್ತು ಅಕಿಲಾ ಧನಂಜೈ.