IND vs SL: ಟಾಸ್ ಗೆದ್ದ ಭಾರತ; ಶುಭ್​ಮನ್ ಗಿಲ್ ಬದಲಿಗೆ ಸಂಜು ಸ್ಯಾಮ್ಸನ್​ಗೆ ಅವಕಾಶ

|

Updated on: Jul 28, 2024 | 7:39 PM

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಎರಡನೇ ಪಂದ್ಯ ಇಂದು ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಮೊದಲ ಪಂದ್ಯವನ್ನು ಟೀಂ ಇಂಡಿಯಾ 43 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲಿದ್ದು, ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳಲಿದೆ.

IND vs SL: ಟಾಸ್ ಗೆದ್ದ ಭಾರತ; ಶುಭ್​ಮನ್ ಗಿಲ್ ಬದಲಿಗೆ ಸಂಜು ಸ್ಯಾಮ್ಸನ್​ಗೆ ಅವಕಾಶ
ಭಾರತ- ಶ್ರೀಲಂಕಾ
Follow us on

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಎರಡನೇ ಪಂದ್ಯ ಇಂದು ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಮೊದಲ ಪಂದ್ಯವನ್ನು ಟೀಂ ಇಂಡಿಯಾ 43 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲಿದ್ದು, ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳಲಿದೆ. ಇತ್ತ ಈ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ತಿರುಗೇಟು ನೀಡುವ ಅವಕಾಶವಿದ್ದು, ಸರಣಿಯನ್ನು ಸಮಬಲಗೊಳಿಸಲು ಯತ್ನಿಸಲಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಬೌಲಿಂಗ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.

ಸಂಜುಗೆ ಅವಕಾಶ

ಶ್ರೀಲಂಕಾ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ ಬಳಿಕ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್ ಒಂದು ಬದಲಾವಣೆಯೊಂದಿಗೆ ತಂಡ ಕಣಕ್ಕಿಳಿಯಲಿದೆ ಎಂದರು. ನಿನ್ನೆಯ ಪಂದ್ಯದಲ್ಲಿ ಆರಂಭಿಕರಾಗಿ ಉತ್ತಮ ಪ್ರದರ್ಶನ ನೀಡಿದ್ದ ಶುಭ್​ಮನ್ ಗಿಲ್ ಅನಾರೋಗ್ಯದ ಕಾರಣ ಎರಡನೇ ಟಿ20 ಪಂದ್ಯಕ್ಕೆ ಅಲಭ್ಯರಾಗಿದ್ದು, ಅವರ ಸ್ಥಾನದಲ್ಲಿ  ಸಂಜು ಸ್ಯಾಮ್ಸನ್ ಕಣಕ್ಕಿಳಿಯಲಿದ್ದಾರೆ ಎಂದರು.

ಉಭಯ ತಂಡಗಳು

ಭಾರತ ತಂಡ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಕುಸಲ್ ಪೆರೆರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕಾ (ನಾಯಕ), ದಸುನ್ ಶನಕ, ವನಿಂದು ಹಸರಂಗ, ರಮೇಶ್ ಮೆಂಡಿಸ್, ಮಹಿಷ್ ತೀಕ್ಷಣ, ಮತಿಶ ಪತಿರಾನ, ಅಸಿತ ಫೆರ್ನಾಂಡೊ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Sun, 28 July 24